Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದರೆ ಎದೋಮ್ಯರು, “ನೀವು ದಾಟಲೇ ಬಾರದು” ಎಂದು ಉತ್ತರಕೊಟ್ಟು ಬಹುಜನರನ್ನು ಕೂಡಿಸಿಕೊಂಡು ಇಸ್ರಾಯೇಲರಿಗೆ ಎದುರಾಗಿ ಯುದ್ಧಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆದರೆ ಎದೋಮ್ಯರು, “ನೀವು ದಾಟಲೇ ಕೂಡದು,” ಎಂದು ಉತ್ತರಿಸಿದರು. ಮಾತ್ರವಲ್ಲ, ದೊಡ್ಡ ಪಡೆಯಾಗಿ ಕೂಡಿಕೊಂಡು ಅವರ ಮೇಲೆ ದಾಳಿಮಾಡಲು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆದರೆ ಎದೋಮ್ಯರು - ನೀವು ದಾಟಿಲೇಬಾರದು ಎಂದು ಉತ್ತರ ಕೊಟ್ಟು ಬಹುಜನ ಕೂಡಿಕೊಂಡು ಬಲಾತ್ಕಾರದಿಂದ ಎದುರಿಸುವವರಾಗಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ಮತ್ತೆ ಎದೋಮ್ಯರು, “ನೀವು ನಮ್ಮ ದೇಶವನ್ನು ದಾಟಿಹೋಗುವುದಕ್ಕೆ ನಾವು ಬಿಡುವುದಿಲ್ಲ” ಎಂದು ಉತ್ತರಿಸಿದರು. ಬಳಿಕ ಎದೋಮ್ಯರ ಅರಸನು ಬಲಿಷ್ಠವಾದ ದೊಡ್ಡ ಸೈನ್ಯವನ್ನು ಕೂಡಿಸಿಕೊಂಡು ಇಸ್ರೇಲರ ವಿರುದ್ಧ ಯುದ್ಧಮಾಡಲು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದರೆ ಅವನು, “ನೀವು ದಾಟಬಾರದು,” ಎಂದನು. ಎದೋಮ್ಯರು ಬಹುಜನರಿಂದಲೂ, ಬಲವುಳ್ಳ ಕೈಯಿಂದಲೂ ಅವರಿಗೆ ಎದುರಾಗಿ ಯುದ್ಧಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:20
10 ತಿಳಿವುಗಳ ಹೋಲಿಕೆ  

ಯೆಹೋವನು ಇಂತೆನ್ನುತ್ತಾನೆ: “ಎದೋಮ್ ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ಕತ್ತಿ ಹಿಡಿದು ತನ್ನ ಸಹೋದರರನ್ನು ಹಿಂದಟ್ಟಿದನು, ಕರುಣೆಯನ್ನು ತೋರಿಸಲಿಲ್ಲ. ರೋಷವನ್ನು ಸಾಧಿಸಿದ್ದಾರೆ. ಇದರಿಂದ ಅವನ ಕೋಪವು ಸದಾ ಹರಿಯುತ್ತಿತ್ತು, ಆತನು ರೌದ್ರವನ್ನು ನಿರಂತರವಾಗಿ ಇಟ್ಟುಕೊಂಡನು.


ಅವರು ಅಲ್ಲಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, ‘ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ಅಪ್ಪಣೆಯಾಗಬೇಕು’ ಎಂದು ಬೇಡಿಕೊಳ್ಳಲು ಅವನು ಒಪ್ಪಿಕೊಳ್ಳಲಿಲ್ಲ. ತರುವಾಯ ಮೋವಾಬ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಲು ಅವನೂ ಒಪ್ಪಿಕೊಳ್ಳಲಿಲ್ಲ; ಆದುದರಿಂದ ಅವರು ಕಾದೇಶಿನಲ್ಲಿಯೇ ಉಳಿದುಕೊಂಡರು.


ನಾನು ಸಮಾಧಾನಪ್ರಿಯನು; ಅವರೋ, ನಾನು ಮಾತನಾಡಿದರೆ ಯುದ್ಧಕ್ಕೆ ಬರುತ್ತಾರೆ.


ಆದರೆ ಸೀಹೋನನು ಅವರನ್ನು ನಂಬದೆ ತನ್ನ ಸೀಮೆಯನ್ನು ದಾಟಿಹೋಗುವುದಕ್ಕೆ ಅಪ್ಪಣೆಕೊಡದೆ ತನ್ನ ಜನರನ್ನು ಕೂಡಿಸಿಕೊಂಡು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು.


ಆದರೆ ಎದೋಮ್ಯರು, “ನಮ್ಮ ದೇಶವನ್ನು ನೀವು ದಾಟಿ ಹೋಗಬಾರದು. ದಾಟುವುದಾದರೆ ನಾವು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತೇವೆ” ಎಂದು ಉತ್ತರಕೊಟ್ಟರು.


ತರುವಾಯ ಆ ಸೇವಕರು ಯಾಕೋಬನ ಬಳಿಗೆ ಹಿಂತಿರುಗಿ ಬಂದು, “ನಾವು ನಿನ್ನ ಅಣ್ಣನಾದ ಏಸಾವನ ಹತ್ತಿರಕ್ಕೆ ಹೋಗಿ ಬಂದಿದ್ದೇವೆ, ಅವನು ನಾನೂರು ಜನರ ಸಮೇತ ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ” ಎಂದು ಹೇಳಿದಾಗ,


ತಂದೆಯು ಯಾಕೋಬನಿಗೆ ಮಾಡಿದ ಆಶೀರ್ವಾದದ ನಿಮಿತ್ತ ಏಸಾವನು ಯಾಕೋಬನನ್ನು ಹಗೆಮಾಡಿ ತನ್ನ ಮನಸ್ಸಿನೊಳಗೆ, “ತಂದೆಗೋಸ್ಕರ ದುಃಖಿಸುವ ಕಾಲ ಸಮೀಪಿಸಿತು. ತರುವಾಯ ನನ್ನ ತಮ್ಮನಾದ ಯಾಕೋಬನನ್ನು ಕೊಲ್ಲುವೆನು” ಎಂದುಕೊಂಡನು.


ಎದೋಮ್ಯರು ಇಸ್ರಾಯೇಲರಿಗೆ ತಮ್ಮ ಪ್ರದೇಶದೊಳಗೆ ದಾಟಿಹೋಗುವುದಕ್ಕೆ ಅಪ್ಪಣೆಕೊಡದೆ ಹೋದುದರಿಂದ ಇಸ್ರಾಯೇಲರು ಅವರ ಕಡೆಯಿಂದ ತಿರುಗಿಕೊಂಡು ಬೇರೊಂದು ಮಾರ್ಗವಾಗಿ ಹೊರಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು