Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ಆರೋನನು ತನ್ನ ಪೂರ್ವಿಕರ ಬಳಿಗೆ ಸೇರುವನು. ನೀವಿಬ್ಬರೂ ಮೆರೀಬಾ ಪ್ರವಾಹದ ಹತ್ತಿರ ನನ್ನ ಮಾತಿಗೆ ವಿರುದ್ಧವಾಗಿ ತಿರುಗಿಬಿದ್ದುದರಿಂದ ನಾನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶದೊಳಗೆ ಆರೋನನು ಸೇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 “ಆರೋನನು ದೇಹತ್ಯಜಿಸಿ ತನ್ನ ಪೂರ್ವಜರನ್ನು ಸೇರಲಿ. ನೀವಿಬ್ಬರೂ ಮೆರೀಬಾ ಪ್ರವಾಹದ ಬಳಿ ನನ್ನ ಮಾತನ್ನು ಮೀರಿ ನಡೆದಿರಿ. ಆದ್ದರಿಂದ ನಾನು ಇಸ್ರಯೇಲರಿಗೆ ವಾಗ್ದಾನ ಮಾಡಿದ ನಾಡನ್ನು ಆರೋನನು ಪ್ರವೇಶಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆರೋನನು ದೇಹವನ್ನು ಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಬೇಕು. ನೀವಿಬ್ಬರೂ ಮೆರೀಬಾ ಪ್ರವಾಹದ ಹತ್ತಿರ ನನ್ನ ಮಾತಿಗೆ ವಿರೋಧವಾಗಿ ತಿರುಗಿಬಿದ್ದದರಿಂದ ನಾನು ಇಸ್ರಾಯೇಲ್ಯರಿಗೆ ವಾಗ್ದಾನಮಾಡಿದ ದೇಶದೊಳಗೆ ಆರೋನನು ಸೇರಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಆರೋನನು ಸತ್ತು ಪೂರ್ವಿಕರ ಬಳಿ ಸೇರುವ ಸಮಯ ಬಂದಿದೆ. ಇಸ್ರೇಲರಿಗೆ ನಾನು ವಾಗ್ದಾನ ಮಾಡಿದ ದೇಶದೊಳಗೆ ಆರೋನನು ಪ್ರವೇಶಿಸುವುದಿಲ್ಲ. ಯಾಕೆಂದರೆ ನೀವಿಬ್ಬರೂ ಮೆರೀಬಾ ಬುಗ್ಗೆಯ ಕುರಿತಾಗಿ ನಾನು ಕೊಟ್ಟ ಆಜ್ಞೆಗೆ ವಿಧೇಯರಾಗದಿದ್ದುದರಿಂದ ನಾನು ನಿಮಗೆ ಇದನ್ನು ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಆರೋನನು ತನ್ನ ಪಿತೃಗಳ ಸಂಗಡ ಸೇರುವನು, ಏಕೆಂದರೆ ನೀವು ಮೆರೀಬಾದ ನೀರಿನ ಹತ್ತಿರ ನನ್ನ ಮಾತಿಗೆ ತಿರುಗಿಬಿದ್ದದರಿಂದ, ನಾನು ಇಸ್ರಾಯೇಲರಿಗೆ ಕೊಡುವ ದೇಶಕ್ಕೆ ಅವನು ಪ್ರವೇಶಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:24
18 ತಿಳಿವುಗಳ ಹೋಲಿಕೆ  

ಅಬ್ರಹಾಮನು ಪೂರ್ಣಾಯುಷ್ಯದಿಂದ ದಿನತುಂಬಿದ ಮುದುಕನಾಗಿ ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.


ಅನಂತರ ನಿನ್ನ ಅಣ್ಣನಾದ ಆರೋನನು ಹೇಗೆ ಹೋರೇಬ್ ಎಂಬ ಬೆಟ್ಟದಲ್ಲಿ ದೇಹವನ್ನು ಬಿಟ್ಟು ತನ್ನ ಪೂರ್ವಿಕರಲ್ಲಿ ಸೇರಿದನೋ ಹಾಗೆಯೇ ನೀನೂ ಈ ಬೆಟ್ಟದಲ್ಲಿ ದೇಹವನ್ನು ಬಿಟ್ಟು ಪೂರ್ವಿಕರಲ್ಲಿ ಸೇರಬೇಕು.


ನಾನು ಈ ದೇಶದ ಮೇಲೆಯೂ, ಅದರ ನಿವಾಸಿಗಳ ಮೇಲೆಯೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು ಎಂಬುದಾಗಿ ತಿಳಿಸಿದೆ ಎಂದು ಅರಸನಿಗೆ ತಿಳಿಸಿರಿ” ಎಂದು ಹೇಳಿದಳು.


“ನೀನು ಇಸ್ರಾಯೇಲರಿಗೋಸ್ಕರ ಮಿದ್ಯಾನ್ಯರಿಗೆ ಪ್ರತಿದಂಡನೆಯನ್ನು ಮಾಡಬೇಕು. ಅನಂತರ ನೀನು ಪೂರ್ವಿಕರ ಬಳಿಗೆ ಸೇರಬೇಕು” ಎಂದು ಹೇಳಿದನು.


ನಿನ್ನ ಅಣ್ಣನಾದ ಆರೋನನು ಪೂರ್ವಿಕರ ಬಳಿಗೆ ಸೇರಿದಂತೆಯೇ ನೀನೂ ಆ ದೇಶವನ್ನು ನೋಡಿದ ಮೇಲೆ ಸೇರಬೇಕು.


ಅವನ ಕಾಲದವರೆಲ್ಲರೂ ಪೂರ್ವಿಕರ ಬಳಿಗೆ ಸೇರಿದರು. ಆನಂತರ ಯೆಹೋವನನ್ನೂ, ಆತನು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.


ಗೇರ್ಷೋನ್ಯರು ಹೊರೆ ಹೊರುವುದರಲ್ಲಿಯೂ ಬೇರೆ ಸೇವಾಕಾರ್ಯ ಮಾಡುವುದರಲ್ಲಿಯೂ ಆರೋನನ ಮತ್ತು ಅವನ ಮಕ್ಕಳ ಅಪ್ಪಣೆಯ ಪ್ರಕಾರವೇ ನಡೆಯಬೇಕು. ನೀವೇ ಹೊರೆಗಳನ್ನು ಗೊತ್ತುಮಾಡಿ ಅವರವರ ವಶಕ್ಕೆ ಕೊಡಬೇಕು.


ಯಾಕೋಬನು ತನ್ನ ಮಕ್ಕಳಿಗೆ ಅಪ್ಪಣೆ ಕೊಡುವುದನ್ನು ಮುಗಿಸಿದ ನಂತರ ಹಾಸಿಗೆಯ ಮೇಲೆ ತನ್ನ ಕಾಲುಗಳನ್ನು ಮಡಚಿಕೊಂಡು ಪ್ರಾಣಬಿಟ್ಟು ಪೂರ್ವಿಕರ ಬಳಿಗೆ ಸೇರಿದನು.


ಇಸ್ರಾಯೇಲನು ತನ್ನ ಮಕ್ಕಳಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ, “ನಾನು ನನ್ನ ಪೂರ್ವಿಕರ ಬಳಿಗೆ ಸೇರಬೇಕಾದ ಕಾಲವು ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂಮಿಯಲ್ಲಿರುವ ಗವಿಯೊಳಗೆ ನನ್ನನ್ನು ನನ್ನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಬೇಕು.


ಇಸಾಕನ ಮಕ್ಕಳಾದ ಏಸಾವ, ಯಾಕೋಬರು ಅವನನ್ನು ಸಮಾಧಿಮಾಡಿದರು.


ಇಷ್ಮಾಯೇಲನು ನೂರಮೂವತ್ತೇಳು ವರ್ಷ ಬದುಕಿದನು. ನಂತರ ಅವನು ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.


ನೀನಂತೂ ಸಮಾಧಾನದೊಡನೆ ಪೂರ್ವಿಕರ ಬಳಿಗೆ ಸೇರುವಿ, ಬಹಳ ವೃದ್ಧನಾಗಿ ಉತ್ತರಕ್ರಿಯೆಯನ್ನು ಹೊಂದುವಿ.


ಇಸ್ರಾಯೇಲರು, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ?” ಎಂದು ಯೆಹೋವನನ್ನು ಅಲ್ಲಿ ಪರೀಕ್ಷಿಸಿದ್ದರಿಂದ, ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂತಲೂ ಅವರು ಗದ್ದಲ ಮಾಡಿದ್ದರಿಂದ ಅದಕ್ಕೆ ಮೆರೀಬಾ ಎಂತಲೂ ಹೆಸರಿಟ್ಟನು.


ನಮ್ಮನ್ನು ಐಗುಪ್ತ ದೇಶದಿಂದ ಬರಮಾಡಿ ಈ ಕೆಟ್ಟ ಸ್ಥಳಕ್ಕೆ ಯಾಕೆ ಕರೆದುಕೊಂಡು ಬಂದಿದ್ದೀರಿ? ಈ ನೆಲದಲ್ಲಿ ಧಾನ್ಯವೂ, ಅಂಜೂರವೂ, ದ್ರಾಕ್ಷಿಯೂ, ದಾಳಿಂಬೆಯೂ ಮತ್ತು ಕುಡಿಯುವುದಕ್ಕೆ ನೀರೂ ಸಹ ಸಿಕ್ಕುವುದಿಲ್ಲ” ಎಂದು ಹೇಳುತ್ತಿದ್ದರು.


ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಬೇಕು. ಆರೋನನು ಅಲ್ಲಿ ತನ್ನ ಪೂರ್ವಿಕರ ಬಳಿಗೆ ಸೇರಬೇಕು” ಎಂದು ಆಜ್ಞಾಪಿಸಿದನು.


ಲೇವಿ ಕುಲದ ವಿಷಯದಲ್ಲಿ, “ಯೆಹೋವನೇ ನಿನ್ನ ನಿರ್ಣಯವನ್ನು ತಿಳಿಸುವ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳು ನಿನ್ನ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀನು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿಯಲ್ಲಾ; ಮೆರೀಬದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದಮಾಡಿದಿ.


“ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆಂದು ನಾನು ಬಲ್ಲೆನು. ನಿಮ್ಮ ವಿಷಯದಲ್ಲಿ ನಮಗೆ ಮಹಾಭಯವುಂಟಾಗಿದೆ; ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟುಹೋಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು