Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆರೋನನು ಸತ್ತುಹೋದ ಸಂಗತಿಯನ್ನು ಇಸ್ರಾಯೇಲ್ ಸಮೂಹದವರು ಕೇಳಿ ಮೂವತ್ತು ದಿನಗಳು ಅವನಿಗಾಗಿ ಶೋಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆರೋನನು ಸತ್ತುಹೋದುದನ್ನು ಇಸ್ರಯೇಲ್ ಸಮಾಜದವರೆಲ್ಲರೂ ತಿಳಿದು ಅವನಿಗಾಗಿ ಮೂವತ್ತು ದಿನಗಳವರೆಗೆ ಶೋಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆರೋನನು ಸತ್ತುಹೋದದ್ದನ್ನು ಇಸ್ರಾಯೇಲ್ ಜನಾಂಗದವರೆಲ್ಲರೂ ತಿಳಿದು ಮೂವತ್ತು ದಿನಗಳು ಅವನಿಗಾಗಿ ಶೋಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆರೋನನು ಸತ್ತನೆಂದು ಇಸ್ರೇಲರೆಲ್ಲರಿಗೆ ತಿಳಿಯಿತು. ಆದ್ದರಿಂದ ಇಸ್ರೇಲಿನಲ್ಲಿ ಪ್ರತಿಯೊಬ್ಬನೂ ಆರೋನನಿಗಾಗಿ ಮೂವತ್ತು ದಿನಗಳವರೆಗೆ ಶೋಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆರೋನನು ತೀರಿಹೋದನೆಂದು ಸಭೆಯೆಲ್ಲಾ ನೋಡಿದಾಗ, ಇಸ್ರಾಯೇಲರೆಲ್ಲರೂ ಆರೋನನಿಗೋಸ್ಕರ ಮೂವತ್ತು ದಿವಸಗಳವರೆಗೂ ದುಃಖಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:29
9 ತಿಳಿವುಗಳ ಹೋಲಿಕೆ  

ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲರು ಮೋಶೆಗೋಸ್ಕರ ಮೂವತ್ತು ದಿನಗಳ ವರೆಗೆ ದುಃಖಿಸಿದರು. ಅಲ್ಲಿಗೆ ಮೋಶೆಯ ಪ್ರಲಾಪದ ದಿನಗಳು ಮುಗಿದವು.


ಭಕ್ತರಾದ ಜನರು ಸ್ತೆಫನನ ದೇಹವನ್ನು ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.


ದೇವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟನು. ಆತನು ಅದನ್ನು ಒಳ್ಳೆಯದೆಂದು ನೋಡಿದನು.


ದೇವರು ಬೆಳಕನ್ನೂ ಕತ್ತಲನ್ನೂ ಬೇರ್ಪಡಿಸಿ ಬೆಳಕಿಗೆ “ಹಗಲು” ಎಂದೂ, ಕತ್ತಲೆಗೆ “ಇರುಳು” ಎಂದೂ ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು.


ನಲ್ವತ್ತು ದಿನಗಳು ಸುಗಂಧದ್ರವ್ಯಗಳನ್ನು ತುಂಬುವ ಪದ್ಧತಿಯಿರುವುದರಿಂದ ಅಷ್ಟು ದಿನ ಸಿದ್ಧಪಡಿಸುತ್ತಾ ಇದ್ದರು. ಐಗುಪ್ತರು ಅವನಿಗೋಸ್ಕರ ಎಪ್ಪತ್ತು ದಿನ ಶೋಕಾಚರಣೆಯಲ್ಲಿದ್ದರು.


ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಶೋಕಾಚರಿಸಿದನು.


ಸಮುವೇಲನು ಮರಣಹೊಂದಿದನು. ಇಸ್ರಾಯೇಲ್ಯರೆಲ್ಲರೂ ಒಟ್ಟಾಗಿ ಬಂದು ಅವನಿಗಾಗಿ ಗೋಳಾಡುತ್ತಾ ಅವನ ಶವವನ್ನು ರಾಮದಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.


ಸಾರಳು ಕಾನಾನ್ ದೇಶದಲ್ಲಿರುವ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಬಂದು ಆಕೆಗಾಗಿ ಗೋಳಾಡಿ ಕಣ್ಣೀರು ಸುರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು