Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಮ್ಮನ್ನು ಐಗುಪ್ತ ದೇಶದಿಂದ ಬರಮಾಡಿ ಈ ಕೆಟ್ಟ ಸ್ಥಳಕ್ಕೆ ಯಾಕೆ ಕರೆದುಕೊಂಡು ಬಂದಿದ್ದೀರಿ? ಈ ನೆಲದಲ್ಲಿ ಧಾನ್ಯವೂ, ಅಂಜೂರವೂ, ದ್ರಾಕ್ಷಿಯೂ, ದಾಳಿಂಬೆಯೂ ಮತ್ತು ಕುಡಿಯುವುದಕ್ಕೆ ನೀರೂ ಸಹ ಸಿಕ್ಕುವುದಿಲ್ಲ” ಎಂದು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಈಜಿಪ್ಟ್ ದೇಶದಿಂದ ನಮ್ಮನ್ನು ಬರಮಾಡಿದ್ದು ಈ ಕೀಳು ಸ್ಥಳಕ್ಕೆ ಸೇರಿಸಲಿಕ್ಕೋ? ಈ ನೆಲದಲ್ಲಿ ದವಸಧಾನ್ಯ ಬೆಳೆಯುವಂತಿಲ್ಲ; ಅಂಜೂರವಿಲ್ಲ, ದ್ರಾಕ್ಷಿಯಿಲ್ಲ, ದಾಳಿಂಬೆಯಿಲ್ಲ, ಕುಡಿಯುವುದಕ್ಕೆ ನೀರು ಕೂಡ ಇಲ್ಲ“ ಎಂದು ದೂರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಮ್ಮನ್ನು ಐಗುಪ್ತದೇಶದಿಂದ ಬರಮಾಡಿ ಈ ಕೆಟ್ಟ ಸ್ಥಳಕ್ಕೆ ಯಾಕೆ ಕರಕೊಂಡು ಬಂದಿರಿ? ಈ ನೆಲದಲ್ಲಿ ಯಾವ ಧಾನ್ಯವೂ ಬೆಳೆಯುವದಿಲ್ಲ, ಮತ್ತು ಅಂಜೂರವಿಲ್ಲ, ದ್ರಾಕ್ಷೆಯಿಲ್ಲ, ದಾಳಿಂಬವಿಲ್ಲ, ಕುಡಿಯುವದಕ್ಕೆ ನೀರಾದರೂ ಇಲ್ಲ ಎಂದೂ ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಈಜಿಪ್ಟಿನಿಂದ ನಮ್ಮನ್ನು ಇಲ್ಲಿಗೆ ಯಾಕೆ ಕರೆತಂದೆ? ಈ ಕೆಟ್ಟ ಸ್ಥಳಕ್ಕೆ ನಮ್ಮನ್ನು ಯಾಕೆ ಕರೆದುಕೊಂಡು ಬಂದೆ? ಇಲ್ಲಿ ಧಾನ್ಯವಾಗಲಿ ಅಂಜೂರವಾಗಲಿ ದ್ರಾಕ್ಷಿಯಾಗಲಿ ದಾಳಿಂಬೆಯಾಗಲಿ ಇಲ್ಲ, ಕುಡಿಯುವುದಕ್ಕೆ ನೀರೂ ಇಲ್ಲ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಈ ಕೆಟ್ಟ ಸ್ಥಳಕ್ಕೆ ನಮ್ಮನ್ನು ತರುವುದಕ್ಕೆ ಏಕೆ ನಮ್ಮನ್ನು ಈಜಿಪ್ಟ್ ದೇಶದೊಳಗಿಂದ ಕರಕೊಂಡು ಬಂದಿರಿ. ಈ ಸ್ಥಳದಲ್ಲಿ ಧಾನ್ಯವಾದರೂ ಅಂಜೂರವಾದರೂ ದ್ರಾಕ್ಷಿ ತೋಟವಾದರೂ ದಾಳಿಂಬೆ ಹಣ್ಣಾದರೂ ಇಲ್ಲ. ಕುಡಿಯುವುದಕ್ಕೆ ನೀರು ಸಹ ಇಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:5
8 ತಿಳಿವುಗಳ ಹೋಲಿಕೆ  

ಅಷ್ಟು ಮಾತ್ರವೇ ಅಲ್ಲ, ನೀನು ಹಾಲೂ ಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲಿಲ್ಲ; ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ನಮಗೆ ಸ್ವಂತಕ್ಕೆ ಕೊಡಲೇ ಇಲ್ಲ; ಈ ಜನರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವುದಿಲ್ಲ” ಎಂದು ಹೇಳಿದನು.


ನಾನು ಐಗುಪ್ತದ ಅರಣ್ಯದಲ್ಲಿ ನಿಮ್ಮ ಪೂರ್ವಿಕರ ಸಂಗಡ ವಾದಿಸಿದಂತೆ, ನಿಮ್ಮ ಸಂಗಡಲೂ ವಾದಿಸುವೆನು” ಇದು ಕರ್ತನಾದ ಯೆಹೋವನ ನುಡಿ.


‘ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ಕಾಡಾಗಿಯೂ, ಹಳ್ಳಕೊಳ್ಳವಾಗಿಯೂ, ನಿರ್ಜಲವಾಗಿಯೂ, ಘೋರಾಂಧಕಾರವಾಗಿಯೂ, ಯಾರೂ ಹಾದುಹೋಗದೆಯೂ, ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡೆಸಿದ ಯೆಹೋವನು ಎಲ್ಲಿ?’ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.


“ನೀನು ಹೋಗಿ ಯೆರೂಸಲೇಮಿನ ಕಿವಿಗೆ ಮುಟ್ಟುವಂತೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ನೀನು ಯೌವನದಲ್ಲಿ ನನ್ನ ಮೇಲೆ ಇಟ್ಟಿದ್ದ ಪ್ರೀತಿಯನ್ನೂ, ವಿವಾಹಕಾಲದ ನಿನ್ನ ಪ್ರೇಮವನ್ನೂ, ನೀನು ಬಿತ್ತನೆ ಮಾಡದ ಅರಣ್ಯದಲ್ಲಿ ನನ್ನನ್ನು ಹಿಂಬಾಲಿಸಿದ ನಿನ್ನ ಪಾತಿವ್ರತ್ಯವನ್ನೂ ನಿನ್ನ ಹಿತಕ್ಕಾಗಿ ಜ್ಞಾಪಕದಲ್ಲಿಟ್ಟಿದ್ದೇನೆ.


ನಲ್ವತ್ತು ವರ್ಷ ಅವರನ್ನು ಅರಣ್ಯದಲ್ಲಿ ಸಾಕುತ್ತಾ ಇದ್ದೆ. ಅವರಿಗೆ ಯಾವ ಕೊರತೆಯೂ ಆಗಲಿಲ್ಲ. ಅವರ ಬಟ್ಟೆಗಳು ಹರಿದುಹೋಗಲಿಲ್ಲ, ಅವರ ಕಾಲುಗಳು ನೋವಿನಿಂದ ಊದಿಕೊಳ್ಳಲಿಲ್ಲ.


ಆತನು ಐಗುಪ್ತ ದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ವಿಷಸರ್ಪಗಳೂ ಮತ್ತು ಚೇಳುಗಳೂ ಇದ್ದ ಆ ಘೋರವಾದ ಮಹಾ ಅರಣ್ಯವನ್ನೂ, ನೀರು ಬತ್ತಿಹೋದ ಭೂಮಿಗಳನ್ನೂ ದಾಟಿಸಿದ್ದನ್ನು ಮತ್ತು ಗಟ್ಟಿಯಾದ ಬಂಡೆಯೊಳಗಿಂದ ನೀರು ಹೊರಡಿಸಿದ್ದನ್ನು ಮರೆಯಬೇಡಿರಿ.


“ಆರೋನನು ತನ್ನ ಪೂರ್ವಿಕರ ಬಳಿಗೆ ಸೇರುವನು. ನೀವಿಬ್ಬರೂ ಮೆರೀಬಾ ಪ್ರವಾಹದ ಹತ್ತಿರ ನನ್ನ ಮಾತಿಗೆ ವಿರುದ್ಧವಾಗಿ ತಿರುಗಿಬಿದ್ದುದರಿಂದ ನಾನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶದೊಳಗೆ ಆರೋನನು ಸೇರಬಾರದು.


ಚಿನ್ ಅರಣ್ಯದಲ್ಲಿ ಇಸ್ರಾಯೇಲರ ಸಮೂಹದವರು ನನ್ನೊಡನೆ ವಿವಾದಿಸಿದಾಗ ನೀವಿಬ್ಬರೂ ನನ್ನ ಗೌರವವನ್ನು ಅವರ ಎದುರಿನಲ್ಲಿ ಕಾಪಾಡದೆ ನನ್ನ ಆಜ್ಞೆಯನ್ನು ಉಲ್ಲಂಘಿಸಿದ್ದರಿಂದ ಆ ದೇಶವನ್ನು ಸೇರಬಾರದು” ಎಂದು ಹೇಳಿದೆನು. ಚಿನ್ ಅರಣ್ಯದಲ್ಲಿನ ಮೆರೀಬಾ ಕಾದೇಶಿನ ಪ್ರವಾಹದ ಹತ್ತಿರ ನಡೆದ ಸಂಗತಿಯನ್ನು ಸೂಚಿಸಿ ಇದನ್ನು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು