ಅರಣ್ಯಕಾಂಡ 21:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದಲ್ಲಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು, ಅತಾರೀಮ್ ಮಾರ್ಗವಾಗಿ ಇಸ್ರಾಯೇಲರು ಬರುತ್ತಾರೆಂಬ ವರ್ತಮಾನವನ್ನು ಕೇಳಿದಾಗ, ಅವನು ಅವರ ಮೇಲೆ ಯುದ್ಧಮಾಡಿ ಕೆಲವರನ್ನು ಸೆರೆಹಿಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇಸ್ರಯೇಲರು ಅತಾರೀಮ್ ಮಾರ್ಗವಾಗಿ ಬರುತ್ತಿದ್ದಾರೆಂದು ನೆಗೇಬಿನಲ್ಲಿ ಕಾನಾನ್ ನಾಡಿನ ದಕ್ಷಿಣ ಪ್ರಾಂತ್ಯದಲ್ಲಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಕೇಳಿದನು. ಅವನು ಇಸ್ರಯೇಲರ ಮೇಲೆ ಯುದ್ಧಮಾಡಿ ಕೆಲವರನ್ನು ಸೆರೆಹಿಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಕಾನಾನ್‍ದೇಶದ ದಕ್ಷಿಣಪ್ರಾಂತ್ಯದಲ್ಲಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಅತಾರೀಮ್ ಮಾರ್ಗವಾಗಿ ಇಸ್ರಾಯೇಲ್ಯರು ಬರುತ್ತಾರೆಂಬ ವರ್ತಮಾನವನ್ನು ಕೇಳಿದಾಗ ಅವನು ಅವರ ಮೇಲೆ ಯುದ್ಧಮಾಡಿ ಕೆಲವರನ್ನು ಸೆರೆಹಿಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಕಾನಾನ್ಯನಾಗಿದ್ದ ಅರಾದಿನ ರಾಜನು ನೆಗೆವ್‌ನಲ್ಲಿದ್ದುಕೊಂಡು ರಾಜ್ಯಭಾರ ಮಾಡುತ್ತಿದ್ದನು. ಇಸ್ರೇಲರು ಅತಾರೀಮಿನ ಮಾರ್ಗವಾಗಿ ಬರುತ್ತಾರೆಂಬ ಸುದ್ದಿಯು ಅವನಿಗೆ ಮುಟ್ಟಿತು. ಆದ್ದರಿಂದ ಅವನು ಹೋಗಿ ಇಸ್ರೇಲರೊಡನೆ ಯುದ್ಧಮಾಡಿ ಅವರಲ್ಲಿ ಕೆಲವರನ್ನು ಸೆರೆಹಿಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನೆಗೆವನಲ್ಲಿ ವಾಸಿಸುವ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು, ಇಸ್ರಾಯೇಲರು ಅತಾರೀಮ್ ಮಾರ್ಗವಾಗಿ ಬರುತ್ತಿದ್ದಾರೆಂದು ಕೇಳಿ, ಅವರ ಸಂಗಡ ಯುದ್ಧಮಾಡಿ, ಅವರಲ್ಲಿ ಕೆಲವರನ್ನು ಸೆರೆಹಿಡಿದನು. ಅಧ್ಯಾಯವನ್ನು ನೋಡಿ |