Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇದು ಪ್ರಧಾನರು ಕೋಲುಗಳಿಂದ ತೋಡಿದ ಬಾವಿ, ಇದು ಜನಾಧಿಪತಿಗಳು ಕೋಲುಗಳಿಂದ ಅಗೆದ ಬಾವಿ” ಎಂಬುವುದೇ. ಅವರು ಅರಣ್ಯವನ್ನು ಬಿಟ್ಟು ಮತ್ತಾನಕ್ಕೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಹಿರಿಯರು ತೋಡಿದರೀ ಬಾವಿಯನ್ನು ಕೋಲುಕಡ್ಡಿಗಳಿಂದ ಪ್ರಜಾಧಿಪತಿಗಳು ಅಗೆದರಿದನ್ನು ರಾಜದಂಡಗಳಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇದು ಪ್ರಧಾನರು ದಂಡಗಳಿಂದ ತೋಡಿದ ಬಾವಿ, ಇದು ಜನಾಧಿಪತಿಗಳು ಕೋಲುಗಳಿಂದ ಅಗೆದ ಬಾವಿ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಪ್ರಧಾನರು ಈ ಬಾವಿಯನ್ನು ತೋಡಿದರು. ಪ್ರಮುಖ ನಾಯಕರು ಈ ಬಾವಿಯನ್ನು ತೋಡಿದರು. ಅವರು ತಮ್ಮ ದೊಣ್ಣೆಗಳಿಂದ ಮತ್ತು ಕೋಲುಗಳಿಂದ ಈ ಬಾವಿಯನ್ನು ಅಗೆದರು.” ಆಮೇಲೆ ಜನರು “ಮತ್ತಾನ” ಎಂಬ ಮರುಭೂಮಿಯಿಂದ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಪ್ರಭುಗಳು ಈ ಬಾವಿಯನ್ನು ಅಗೆದರು. ಜನರ ಅಧಿಪತಿಗಳು ನ್ಯಾಯಾಧಿಪತಿಯ ಸಲಹೆಯ ಮೇರೆಗೆ ತಮ್ಮ ಕೋಲುಗಳಿಂದ ಅದನ್ನು ತೋಡಿದರು.” ಆಮೇಲೆ ಅವರು ಮರುಭೂಮಿಯಿಂದ ಮತ್ತಾನಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:18
12 ತಿಳಿವುಗಳ ಹೋಲಿಕೆ  

ಏಕೆಂದರೆ ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಆಜ್ಞೆಕೊಡುವಾತನು, ಯೆಹೋವನು ನಮ್ಮ ರಾಜನು, ಆತನೇ ನಮ್ಮನ್ನು ರಕ್ಷಿಸುವನು.


ಧರ್ಮಶಾಸ್ತ್ರವನ್ನು ಕೊಟ್ಟಂಥ ನ್ಯಾಯಾಧಿಪತಿ ಒಬ್ಬನೇ; ಆತನೇ ಉಳಿಸುವುದಕ್ಕೂ ನಾಶಮಾಡುವುದಕ್ಕೂ ಸಮರ್ಥನು. ಹೀಗಿರುವಾಗ ನಿನ್ನ ನೆರೆಯವನ ವಿಷಯದಲ್ಲಿ ತೀರ್ಪುಮಾಡುವುದಕ್ಕೆ ನೀನು ಯಾರು?


ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.


ಮೋಶೆಯಾದ, ನಾನು ಯಾಕೋಬನ ಸಂತತಿಯವರಾದ ನಿಮಗೆ ಧರ್ಮಶಾಸ್ತ್ರವನ್ನು ಸ್ವತ್ತಾಗಿ ಕೊಟ್ಟಿದ್ದೇನೆ.


ನೀನಾದರೋ ಇಲ್ಲೇ ನನ್ನ ಹತ್ತಿರ ನಿಂತಿರು; ನಾನು ಅವರಿಗೆ ಬೋಧಿಸಬೇಕಾದ ಎಲ್ಲಾ ಧರ್ಮೋಪದೇಶವನ್ನು ಮತ್ತು ವಿಧಿನಿಯಮಗಳನ್ನೂ ನಿನಗೆ ತಿಳಿಸುತ್ತೇನೆ. ನಾನು ಅವರಿಗೆ ಸ್ವಂತಕ್ಕಾಗಿ ಕೊಡುವ ದೇಶದಲ್ಲಿ ಅವರು ಇವುಗಳನ್ನು ಅನುಸರಿಸಬೇಕು” ಎಂದು ಹೇಳಿದನು.


ತೆಕೋವದವರಲ್ಲಿ ಶ್ರೀಮಂತರಾದರೋ ತಮ್ಮ ಒಡೆಯರ ಸೇವೆಗಾಗಿ ಹೆಗಲನ್ನು ಕೊಡಲಿಲ್ಲ.


ಹೀಗೆ ಮಹಾಯಾಜಕನಾದ ಎಲ್ಯಾಷೀಬನೂ ಅವನ ಕುಟುಂಬದ ಯಾಜಕರೂ ಕುರಿಬಾಗಿಲನ್ನು ಕಟ್ಟಿ ಅದನ್ನು ಪ್ರತಿಷ್ಠಿಸಿ ಅದಕ್ಕೆ ಬಾಗಿಲುಗಳನ್ನು ಇಟ್ಟರು. ಅಲ್ಲಿಂದ ಹಮ್ಮೆಯಾ ಗೋಪುರದವರೆಗೆ ಗೋಡೆಕಟ್ಟಿ ಅದನ್ನು ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಗೋಪುರದವರೆಗೂ ಕಟ್ಟಿದರು.


ಆಗ ಇಸ್ರಾಯೇಲರು ಈ ಹಾಡನ್ನು ಗಾನಮಾಡಿದರು; “ಬಾವಿಯೇ, ಉಕ್ಕುತ್ತಾ ಬಾ! ಜನರೇ, ಉಲ್ಲಾಸದಿಂದ ಗಾನಮಾಡಿರಿ


ಮತ್ತಾನದಿಂದ ನಹಲೀಯೇಲಿಗೂ, ನಹಲೀಯೇಲಿನಿಂದ ಬಾಮೋತಿಗೂ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು