Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಸ್ರಾಯೇಲರು ಯೆಹೋವನಿಗೆ ಪ್ರಮಾಣಮಾಡಿ, “ನಾವು ಈ ಜನರನ್ನು ಜಯಿಸುವಂತೆ ನೀನು ಅನುಗ್ರಹಿಸಿದರೆ ನಾವು ಅವರ ಗ್ರಾಮಗಳನ್ನು ಸಂಪೂರ್ಣವಾಗಿ ನಾಶಮಾಡುತ್ತೇವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇಸ್ರಯೇಲರು ಸರ್ವೇಶ್ವರನಿಗೆ ಹರಕೆ ಮಾಡಿಕೊಂಡರು: “ನಾವು ಈ ಜನರನ್ನು ಜಯಿಸುವಂತೆ ಅನುಗ್ರಹಿಸಿದರೆ ಅವರ ಗ್ರಾಮಗಳನ್ನು ಪೂರ್ಣ ಹಾಳುಮಾಡಿ ಸರ್ವೇಶ್ವರನಾದ ನಿಮಗಾಗಿಯೇ ಮೀಸಲಿಡುತ್ತೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಸ್ರಾಯೇಲ್ಯರು ಯೆಹೋವನಿಗೆ ಹರಕೆಯನ್ನು ಮಾಡಿಕೊಂಡು - ನಾವು ಈ ಜನವನ್ನು ಜಯಿಸುವಂತೆ ನೀನು ಅನುಗ್ರಹಿಸಿದರೆ ನಾವು ಅವರ ಗ್ರಾಮಗಳನ್ನು ಪೂರ್ಣವಾಗಿ ಹಾಳುಮಾಡಿ ಯೆಹೋವನಿಗಾಗಿಯೇ ಬಿಟ್ಟುಬಿಡುತ್ತೇವೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಇಸ್ರೇಲರು ಯೆಹೋವನಿಗೆ ಹರಕೆಯನ್ನು ಮಾಡಿಕೊಂಡು, “ನಾವು ಈ ಜನರನ್ನು ಜಯಿಸುವಂತೆ ನೀನು ಅನುಗ್ರಹಿಸಿದರೆ ನಾವು ಅವರ ಗ್ರಾಮಗಳನ್ನು ಪೂರ್ಣವಾಗಿ ಹಾಳುಮಾಡಿ ಯೆಹೋವನಿಗಾಗಿಯೇ ಬಿಟ್ಟುಬಿಡುತ್ತೇವೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಇಸ್ರಾಯೇಲರು ಯೆಹೋವ ದೇವರಿಗೆ ಪ್ರಮಾಣಮಾಡಿ, “ನೀನು ಈ ಜನರನ್ನು ನಮ್ಮ ಕೈಯಲ್ಲಿ ನಿಜವಾಗಿ ಒಪ್ಪಿಸಿಕೊಟ್ಟರೆ, ನಾವು ಅವರ ಪಟ್ಟಣಗಳನ್ನು ಸಂಪೂರ್ಣವಾಗಿ ನಾಶಮಾಡುವೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:2
15 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ಯೆಹೋವನಿಗೆ, “ನೀನು ಅಮ್ಮೋನಿಯರನ್ನು ನನ್ನ ಕೈಗೆ ಒಪ್ಪಿಸುವುದಾದರೆ


ಯಾಕೋಬನು ಅಲ್ಲಿ ಪ್ರಮಾಣ ಮಾಡಿ, “ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ಉಣ್ಣುವುದಕ್ಕೆ ಆಹಾರವನ್ನೂ, ಉಡುವುದಕ್ಕೆ ವಸ್ತ್ರವನ್ನೂ, ನನಗೆ ಕೊಟ್ಟು,


ಯಾಕೋಬನ ಶೂರನಾದ ಯೆಹೋವನಿಗಾಗಿ ಒಂದು ವಾಸಸ್ಥಾನವನ್ನು ಏರ್ಪಡಿಸುವ ತನಕ,


ಯೆರೂಸಲೇಮೇ, ನಿನ್ನ ಮಧ್ಯದಲ್ಲಿ, ಯೆಹೋವನ ಮಂದಿರದ ಅಂಗಳಗಳಲ್ಲಿ,


“ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನಿನ್ನ ದಾಸಿಯನ್ನು ಮರೆಯದೆ ನನ್ನನ್ನು ನೆನಪಿಸಿಕೊಂಡು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ಅವನನ್ನು ನಿನಗೆ ಪ್ರತಿಷ್ಠಿಸುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಮುಟ್ಟಗೊಡುವುದಿಲ್ಲ” ಎಂದು ಪ್ರಾರ್ಥಿಸಿ ಹರಕೆಮಾಡಿದಳು.


ಅದೇ ಸಮಯದಲ್ಲಿ ಯೆಹೋಶುವನು ಇಸ್ರಾಯೇಲ್ಯರಿಂದ ಪ್ರಮಾಣಮಾಡಿಸಿ ಅವರಿಗೆ “ಈ ಯೆರಿಕೋ ಪಟ್ಟಣವನ್ನು ಕಟ್ಟುವುದಕ್ಕೆ ಕೈ ಹಾಕುವ ಮನುಷ್ಯನು ಯೆಹೋವನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಿರಲಿ. ಅಂಥವನು ಅದಕ್ಕೆ ಅಸ್ತಿವಾರ ಹಾಕುವಾಗ ತನ್ನ ಹಿರಿಯ ಮಗನನ್ನೂ ಬಾಗಿಲುಗಳನ್ನಿಡುವಾಗ ಕಿರಿಯ ಮಗನನ್ನೂ ಕಳೆದುಕೊಳ್ಳಲಿ” ಎಂದು ಹೇಳಿದನು.


ಇದೂ ಇದರಲ್ಲಿರುವುದೆಲ್ಲವೂ ಯೆಹೋವನಿಗೆ ಅರ್ಪಿತವಾದವುಗಳೇ ಎಂದು ತಿಳಿಯಿರಿ. ವೇಶ್ಯೆಯಾದ ರಾಹಾಬಳೂ ಅವಳ ಸಂಗಡ ಮನೆಯಲ್ಲಿರುವವರೆಲ್ಲರೂ ಉಳಿಯಲಿ. ಏಕೆಂದರೆ ನಾವು ಕಳುಹಿಸಿದ ಗೂಢಚಾರರನ್ನು ಅವಳು ಅಡಗಿಸಿಟ್ಟಿದ್ದಳಲ್ಲಾ.


ನಿಜವೆಂದು ತಿಳಿದುಬಂದರೆ ಆ ಊರನ್ನು ಸಂಪೂರ್ಣವಾಗಿ ಹಾಳು ಮಾಡಿ, ಅದರಲ್ಲಿರುವ ಎಲ್ಲಾ ಜನರನ್ನೂ, ದನಗಳನ್ನೂ ಕತ್ತಿಯಿಂದ ಸಂಹರಿಸಿಡಬೇಕು.


ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ ಅವನು ಶಾಪಗ್ರಸ್ತನಾಗಲಿ. ನಮ್ಮ ಕರ್ತನೇ ಬಾ!


ಆದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸಿರಾಡುವ ಒಬ್ಬರನ್ನಾದರೂ ಉಳಿಸಬಾರದು.


ಯೆಹೋವನು ಅವರನ್ನು ನಿಮಗೆ ಒಪ್ಪಿಸಲು ನೀವು ಅವರನ್ನು ಸಂಪೂರ್ಣವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು ಹಾಗು ಅವರಿಗೆ ಕನಿಕರ ತೋರಬಾರದು.


ಅದರಲ್ಲಿರುವ ಎಲ್ಲಾ ಸಾಮಾನುಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ, ಊರನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಿಮ್ಮ ದೇವರಾದ ಯೆಹೋವನಿಗೋಸ್ಕರ ಸಂಪೂರ್ಣವಾಗಿ ಸುಟ್ಟುಬಿಡಬೇಕು. ಅದು ಪುನಃ ಕಟ್ಟಲ್ಪಡದೆ ಯಾವಾಗಲೂ ಹಾಳುದಿಬ್ಬವಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು