Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಬಾಮೋತಿನಿಂದ ಮೋವಾಬ್ಯರ ಬಯಲಿನಲ್ಲಿರುವ ತಗ್ಗಿನಿಂದ ಪಿಸ್ಗಾ ಎಂಬ ಬೆಟ್ಟದ ತುದಿಗೆ ಬಂದರು. ಅಲ್ಲಿಂದ ಯೆಷೀಮೋನ್ ಮರಳುಗಾಡು ಕಾಣಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಬಾಮೋತಿನಿಂದ ಮೋವಾಬ್ಯರ ಬೈಲುಪ್ರದೇಶದಲ್ಲಿರುವ ಕಣಿವೆಗೆ, ಅಂದರೆ ‘ಪಿಸ್ಗಾ’ ಎಂಬ ಮಲೆನಾಡಿನ ಅಂಚಿಗೆ ಬಂದರು. ಕೆಳಗಿರುವ ‘ಯೆಷೀಮೋನ್’ ಎಂಬ ಮರಳುಗಾಡು ಆ ಗುಡ್ಡದ ಮೇಲಿಂದ ಕಾಣಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಬಾಮೋತಿನಿಂದ ಮೋವಾಬ್ಯರ ಬೈಲಿನ ಪ್ರದೇಶದಲ್ಲಿರುವ ತಗ್ಗಿಗೆ ಅಂದರೆ ಪಿಸ್ಗಾ ಎಂಬ ಬೆಟ್ಟದ ಸೀಮೆಯ ಅಂಚಿಗೆ ಬಂದರು. ಆ ಬೆಟ್ಟದ ಮೇಲಿನಿಂದ ಕೆಳಗಿರುವ ಯೆಷೀಮೋನ್ ಎಂಬ ಅರಣ್ಯ ಪ್ರದೇಶವು ಕಾಣಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಜನರು ಬಾಮೋತಿನಿಂದ ಮೋವಾಬ್ಯರ ಪ್ರದೇಶದ ಕಣಿವೆಗೆ ಪ್ರಯಾಣ ಮಾಡಿದರು. ಪಿಸ್ಗಾ ಬೆಟ್ಟದ ತುದಿಯ ಸಮೀಪದಲ್ಲಿ ನಿಂತುಕೊಂಡರೆ ಮರುಭೂಮಿಯು ಕಾಣುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಬಾಮೋತಿನಿಂದ ಮೋವಾಬ್ ದೇಶದಲ್ಲಿರುವ ಕಣಿವೆಯಿಂದ ಪಿಸ್ಗಾ ಎಂಬ ಬೆಟ್ಟದ ತುದಿಗೆ ಬಂದರು. ಆ ಬೆಟ್ಟದ ಮೇಲಿನಿಂದ ಕೆಳಗಿರುವ ಮರಳುಗಾಡು ಕಾಣಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:20
11 ತಿಳಿವುಗಳ ಹೋಲಿಕೆ  

ಆದಕಾರಣ ಬಾಲಾಕನು ಬಿಳಾಮನನ್ನು ಪೆಗೋರ್ ಎಂಬ ಬೆಟ್ಟದ ತುದಿಗೆ ಕರೆದುಕೊಂಡು ಹೋದನು. ಆ ಬೆಟ್ಟದ ಮೇಲಿನಿಂದ ಕೆಳಗಿರುವ ಯೆಷೀಮೋನ್ ಎಂಬ ಅರಣ್ಯಪ್ರದೇಶವು ಕಾಣಿಸುತ್ತದೆ.


ಮೋಶೆಯು ಮೋವಾಬ್ಯರ ಮೈದಾನದಿಂದ ಯೆರಿಕೋ ಪಟ್ಟಣಕ್ಕೆ ಎದುರಾಗಿರುವ ನೆಬೋ ಪರ್ವತಕ್ಕೆ ಹೋಗಿ ಪಿಸ್ಗಾ ಎಂಬ ಬೆಟ್ಟದ ಶಿಖರವನ್ನು ಹತ್ತಿದನು. ಆಗ ಯೆಹೋವನು ಕಾನಾನ್ ದೇಶವನ್ನೆಲ್ಲಾ ಅಂದರೆ ದಾನ್ ಪಟ್ಟಣದ ವರೆಗೂ ಗಿಲ್ಯಾದ್ ಸೀಮೆ,


ಅರಾಬಾ ಎಂಬ ತಗ್ಗಿನಲ್ಲಿ ಪಿಸ್ಗಾ ಬೆಟ್ಟದ ಬುಡದಲ್ಲಿರುವ ಅರಾಬ್ ಸಮುದ್ರದ ವರೆಗೆ ಯೊರ್ದನ್ ನದಿಯ ಆಚೆ ಇರುವ ಭಾಗವನ್ನೆಲ್ಲಾ ಸ್ವಾಧೀನಮಾಡಿಕೊಂಡಿದ್ದರು.


ಆದರೆ ಪಿಸ್ಗಾ ಬೆಟ್ಟವನ್ನು ಹತ್ತಿ ತುದಿಯಲ್ಲಿ ನಿಂತು, ನಾಲ್ಕು ದಿಕ್ಕುಗಳಲ್ಲಿ ಸುತ್ತಲೂ ಇರುವ ದೇಶವನ್ನು ಕಣ್ಣು ತುಂಬಾ ನೋಡಬಹುದು.


ಯೊರ್ದನ್ ನದಿಯ ಆಚೆ ಮೋವಾಬ್ಯರ ದೇಶದಲ್ಲಿ ಮೋಶೆಯು ಈ ಮುಂದಣ ಧರ್ಮಶಾಸ್ತ್ರವನ್ನು ವಿವರಿಸುವುದಕ್ಕೆ ಪ್ರಾರಂಭಿಸಿ ಹೀಗೆ ಹೇಳಿದನು:


ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರ ಮೋವಾಬ್ಯರ ಮೈದಾನದಲ್ಲಿ ಮೋಶೆಯೂ ಮತ್ತು ಯಾಜಕನಾದ ಎಲ್ಲಾಜಾರನೂ ಇಸ್ರಾಯೇಲರ ಜನಸಂಖ್ಯೆಯನ್ನು ಲೆಕ್ಕಿಸಿದರು.


ಹೀಗೆ ಬಾಲಾಕನು ಬಿಳಾಮನನ್ನು ಪಿಸ್ಗಾ ಬೆಟ್ಟದ ತುದಿಯಲ್ಲಿರುವ ಚೋಫೀಮ್ ಬಯಲು ಎಂಬ ಸ್ಥಳಕ್ಕೆ ಕರೆದುಕೊಂಡು ಹೋಗಿ ಅಲ್ಲಿಯೂ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಪ್ರತಿಯೊಂದು ಯಜ್ಞವೇದಿಯಲ್ಲಿ ಒಂದು ಹೋರಿಯನ್ನೂ, ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು.


ತರುವಾಯ ಇಸ್ರಾಯೇಲರು ಪ್ರಯಾಣಮಾಡಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಬಯಲಿನಲ್ಲಿ ಇಳಿದುಕೊಂಡರು.


ಮತ್ತಾನದಿಂದ ನಹಲೀಯೇಲಿಗೂ, ನಹಲೀಯೇಲಿನಿಂದ ಬಾಮೋತಿಗೂ ಬಂದರು.


ಇಸ್ರಾಯೇಲರು ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು