ಅರಣ್ಯಕಾಂಡ 21:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಯೆಹೋವನು ಮೋಶೆಗೆ, “ಅವನಿಗೆ ಭಯಪಡಬೇಡ, ನಾನು ಅವನನ್ನು ಮತ್ತು ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ನಿನ್ನ ಕೈಗೆ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವರಿಗೂ ಮಾಡಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಸರ್ವೇಶ್ವರ ಮೋಶೆಗೆ, “ಅವನಿಗೆ ಭಯಪಡಬೇಡ; ಅವನನ್ನೂ ಅವನ ಸಮಸ್ತ ಪ್ರಜೆಯನ್ನೂ ನಾಡನ್ನೂ ನಿನ್ನ ಕೈವಶಮಾಡಿದ್ದೇನೆ. ನೀನು ಹೆಷ್ಬೋನಿನಲ್ಲಿ ಅಮೋರಿಯರ ಅರಸ ಸೀಹೋನನಿಗೆ ಮಾಡಿದಂತೆಯೇ ಇವನಿಗೂ ಮಾಡು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಯೆಹೋವನು ಮೋಶೆಗೆ - ಅವನಿಗೆ ಭಯಪಡಬೇಡ; ನಾನು ಅವನನ್ನೂ ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ನಿನಗೆ ಕೈವಶಮಾಡಿದ್ದೇನೆ; ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವರಿಗೂ ಮಾಡಬೇಕು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಆದರೆ ಯೆಹೋವನು ಮೋಶೆಗೆ, “ಆ ಅರಸನಿಗೆ ಹೆದರಬೇಡ. ನೀನು ಅವನನ್ನು ಸೋಲಿಸುವಂತೆ ಮಾಡುವೆನು. ನೀನು ಅವನ ಸೈನ್ಯವನ್ನು ಮತ್ತು ಅವನ ದೇಶವನ್ನು ಪೂರ್ಣವಾಗಿ ವಶಪಡಿಸಿಕೊಳ್ಳುವೆ. ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದಂತೆ ಇವನಿಗೂ ಸಹ ಮಾಡುವಿರಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಆಗ ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನೀನು ಅವನಿಗೆ ಭಯಪಡಬೇಡ, ಏಕೆಂದರೆ ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಇವನಿಗೂ ಮಾಡಬೇಕು,” ಎಂದರು. ಅಧ್ಯಾಯವನ್ನು ನೋಡಿ |