Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇಸ್ರಾಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡುವಾಗ, ದಾರಿಯಲ್ಲಿ ಆಯಾಸದಿಂದ ಅವರಿಗೆ ಬೇಸರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇಸ್ರಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ನಾಡನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪುಕಡಲಿನ ಮಾರ್ಗವಾಗಿ ಪ್ರಯಾಣ ಮಾಡಿದರು. ಈ ಮಾರ್ಗದ ಆಯಾಸದಿಂದ ಅವರಿಗೆ ಬೇಸರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇಸ್ರಾಯೇಲ್ಯರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡುಹೋಗುವದಕ್ಕೆ ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡುತ್ತಿರಲು ಮಾರ್ಗಾಯಾಸದಿಂದ ಅವರಿಗೆ ಬೇಸರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇಸ್ರೇಲರು ಹೋರ್ ಬೆಟ್ಟದಿಂದ ಹೊರಟು ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡಿದರು. ಅವರು ಎದೋಮ್ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಹೀಗೆ ಮಾಡಿದರು. ಜನರು ಮಾರ್ಗದಲ್ಲಿ ತಾಳ್ಮೆ ತಪ್ಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ಹೋರ್ ಎಂಬ ಬೆಟ್ಟದಿಂದ ಹೊರಟು, ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪುಸಮುದ್ರದ ಮಾರ್ಗವಾಗಿ ಪ್ರಯಾಣಮಾಡಿದರು. ಆದರೆ ಜನರು ಈ ಪ್ರಯಾಣದಿಂದ ಆಯಾಸವಾಗಿ ಬಹಳ ಕುಂದಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:4
14 ತಿಳಿವುಗಳ ಹೋಲಿಕೆ  

ಮೋಶೆ ಈ ಮಾತುಗಳನ್ನು ಅದೇ ಪ್ರಕಾರವಾಗಿ ಇಸ್ರಾಯೇಲರಿಗೆ ಹೇಳಿದಾಗ, ಅವರ ಮನಸ್ಸು ಕುಗ್ಗಿಹೋದದ್ದರಿಂದಲೂ, ಕಠಿಣವಾಗಿ ದಾಸತ್ವದ ಸೇವೆ ಮಾಡಬೇಕಾಗಿ ಬಂದದ್ದರಿಂದಲೂ ಅವರು ಮೋಶೆಯ ಮಾತಿಗೆ ಕಿವಿಗೊಡಲೇ ಇಲ್ಲ.


ಅನಂತರ ಅವರು ಅರಣ್ಯದಲ್ಲಿ ಪ್ರಯಾಣಮಾಡಿ ಎದೋಮ್, ಮೋವಾಬ್ ದೇಶಗಳನ್ನು ಸುತ್ತಿಕೊಂಡು ಮೋವಾಬ್‍ ದೇಶದ ಪೂರ್ವದಿಕ್ಕಿಗೆ ಬಂದು, ಅದರ ಮೇರೆಯಾಗಿರುವ ಅರ್ನೋನ್ ಹೊಳೆಯ ಆಚೆಯಲ್ಲಿ ಇಳಿದುಕೊಂಡರು. ಮೋವಾಬ್ಯರ ಮೇರೆಯೊಳಗೆ ಕಾಲಿಡಲಿಲ್ಲ.


ಯೆಹೋವನು ಇಸ್ರಾಯೇಲರಿಗೆ ಕೊಟ್ಟ ದೇಶಕ್ಕೆ ಅವರು ಹೋಗದಂತೆ ನೀವು ಏಕೆ ಅವರಿಗೆ ಅಧೈರ್ಯವನ್ನು ಹುಟ್ಟಿಸುತ್ತೀರಿ?


ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.


ಇಸ್ರಾಯೇಲರು ಹೋರ್ ಬೆಟ್ಟದಿಂದ ಹೊರಟು ಚಲ್ಮೋನದಲ್ಲಿ ಇಳಿದುಕೊಂಡರು.


ಅವರು ಎಷ್ಕೋಲ್ ತಗ್ಗಿಗೆ ಬಂದು ಆ ದೇಶವನ್ನು ನೋಡಿ ಇಸ್ರಾಯೇಲರಿಗೆ ಅಧೈರ್ಯವನ್ನು ಹುಟ್ಟಿಸಿದ್ದರಿಂದ ಇಸ್ರಾಯೇಲರು ತಮಗೆ ಯೆಹೋವನು ವಾಗ್ದಾನಮಾಡಿದ ದೇಶಕ್ಕೆ ಹೋಗಲು ಆಗಲಿಲ್ಲ.


ನೀವಾದರೋ ಹಿಂದಿರುಗಿ ಕೆಂಪು ಸಮುದ್ರದ ಮಾರ್ಗವನ್ನು ಹಿಡಿದು ಅರಣ್ಯಕ್ಕೆ ಹೊರಟುಹೋಗಿರಿ” ಎಂದು ಆಜ್ಞಾಪಿಸಿದನು.


ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಹೀಗೆ ಮಾಡಿದನು. ಸರ್ವಸಮೂಹದವರು ನೋಡುತ್ತಿರಲಾಗಿ ಅವರು ಹೋರ್ ಬೆಟ್ಟವನ್ನು ಹತ್ತಿದರು.


ಅಮಾಲೇಕ್ಯರೂ, ಕಾನಾನ್ಯರೂ ಆ ತಗ್ಗಿನಲ್ಲಿ ವಾಸವಾಗಿದ್ದಾರೆ. ನೀವು ನಾಳೆ ಹಿಂದಿರುಗಿ ಕೆಂಪು ಸಮುದ್ರಕ್ಕೆ ಹೋಗುವ ದಾರಿಯಲ್ಲಿ ಅರಣ್ಯಕ್ಕೆ ಪ್ರಯಾಣಮಾಡಬೇಕು” ಎಂದು ಹೇಳಿದನು.


ಆಗ ಯೆಹೋವನು ನನಗೆ ಆಜ್ಞಾಪಿಸಿದಂತೆ ನಾವು ಹಿಂದಿರುಗಿ ಅರಣ್ಯಕ್ಕೆ ಹೊರಟು ಕೆಂಪು ಸಮುದ್ರದ ಮಾರ್ಗದಲ್ಲಿ ನಡೆದು ಅನೇಕ ದಿನಗಳು ಸೇಯೀರ್ ಬೆಟ್ಟದ ಸೀಮೆಯನ್ನು ಸುತ್ತುತ್ತಿದ್ದೆವು.


ಮತ್ತೆ ಯೆಹೋಷಾಫಾಟನು, “ಯಾವ ಮಾರ್ಗವಾಗಿ ಹೋಗಬೇಕು?” ಎಂದು ವಿಚಾರಿಸಿದಾಗ ಯೋರಾಮನು, “ಎದೋಮ್ಯರ ಅರಣ್ಯ ಮಾರ್ಗವಾಗಿ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು