Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದಕ್ಕೆ ಯೆಹೋವನು ವಿಷಸರ್ಪಗಳನ್ನು ಇಸ್ರಾಯೇಲ್ ಜನರೊಳಗೆ ಬರಮಾಡಿದನು. ಅವು ಜನರನ್ನು ಕಚ್ಚಿದ್ದರಿಂದ ಬಹಳಜನರು ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅದಕ್ಕೆ ಸರ್ವೇಶ್ವರ ವಿಷಸರ್ಪಗಳನ್ನು ಅವರ ನಡುವೆ ಬರಮಾಡಿದರು. ಅವು ಆ ಜನರನ್ನು ಕಚ್ಚಿದವು. ಬಹುಜನ ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದಕ್ಕೆ ಯೆಹೋವನು ಉರಿಮಂಡಲಗಳನ್ನು ಜನರೊಳಗೆ ಬರಮಾಡಿದನು; ಅವು ಜನರನ್ನು ಕಚ್ಚಿದ್ದರಿಂದ ಬಹುಜನ ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ಯೆಹೋವನು ಅವರ ಮಧ್ಯದಲ್ಲಿ ವಿಷಕರವಾದ ಹಾವುಗಳನ್ನು ಕಳುಹಿಸಿದನು. ಅವುಗಳು ಅವರನ್ನು ಕಚ್ಚಿದ್ದರಿಂದ ಅನೇಕ ಇಸ್ರೇಲರು ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಯೆಹೋವ ದೇವರು ಜನರೊಳಗೆ ವಿಷಸರ್ಪಗಳನ್ನು ಕಳುಹಿಸಿದರು. ಅವು ಜನರನ್ನು ಕಚ್ಚಿದ್ದರಿಂದ, ಇಸ್ರಾಯೇಲರಲ್ಲಿ ಬಹುಜನರು ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:6
8 ತಿಳಿವುಗಳ ಹೋಲಿಕೆ  

ಅವರಲ್ಲಿ ಕೆಲವರು ಕರ್ತನನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದರು. ನಾವು ಪರೀಕ್ಷಿಸದೆ ಇರೋಣ.


ಅದಕ್ಕೆ ಯೆಹೋವನು, “ಇಗೋ, ನಾನು ನಿಮ್ಮ ಮೇಲೆ ಹಾವುಗಳನ್ನು, ಮಂತ್ರಕ್ಕೆ ಅಧೀನವಾಗದ ನಾಗಗಳನ್ನು ಬಿಡುವೆನು; ಅವು ನಿಮ್ಮನ್ನು ಕಚ್ಚುವವು” ಎಂದು ನುಡಿದಿದ್ದಾನೆ.


ಆತನು ಐಗುಪ್ತ ದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ವಿಷಸರ್ಪಗಳೂ ಮತ್ತು ಚೇಳುಗಳೂ ಇದ್ದ ಆ ಘೋರವಾದ ಮಹಾ ಅರಣ್ಯವನ್ನೂ, ನೀರು ಬತ್ತಿಹೋದ ಭೂಮಿಗಳನ್ನೂ ದಾಟಿಸಿದ್ದನ್ನು ಮತ್ತು ಗಟ್ಟಿಯಾದ ಬಂಡೆಯೊಳಗಿಂದ ನೀರು ಹೊರಡಿಸಿದ್ದನ್ನು ಮರೆಯಬೇಡಿರಿ.


ದಕ್ಷಿಣ ಸೀಮೆಯ ನೀರಾನೆಯ ವಿಷಯವಾದ ದೈವೋಕ್ತಿ. ರಾಯಭಾರಿಗಳು ಗಂಡು ಕತ್ತೆಗಳ ಬೆನ್ನುಗಳ ಮೇಲೆ ತಮ್ಮ ಧನವನ್ನೂ, ಒಂಟೆಗಳ ಡುಬ್ಬಗಳ ಮೇಲೆ ತಮ್ಮ ದ್ರವ್ಯವನ್ನೂ ಹೊರಿಸಿಕೊಂಡು, ಮೃಗೇಂದ್ರ, ಸಿಂಹ, ಸರ್ಪ, ಹಾರುವ ಉರಿಮಂಡಲ ಇವುಗಳಿಂದ ಭಯಂಕರವಾಗಿಯೂ, ಶ್ರಮಸಂಕಟಗಳನ್ನು ಉಂಟು ಮಾಡುವ ದೇಶದ ಮಾರ್ಗವಾಗಿ ನಿಷ್ಪ್ರಯೋಜಕವಾದ ಜನಾಂಗದ ಬಳಿಗೆ ಹೋಗುತ್ತಾರೆ.


ಎಲೈ, ಎಲ್ಲಾ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದುಹೋಯಿತೆಂದು ಉಲ್ಲಾಸಗೊಳ್ಳದಿರಿ; ಏಕೆಂದರೆ ನಾಗರ ಹಾವಿನ ಸಂತಾನದಿಂದ ವಿಷಸರ್ಪವು ಉಂಟಾಗುವುದು. ಅದರ ಸಂತತಿಯು ಹಾರುವ ಸರ್ಪವೇ.


“ನನ್ನ ಅಪ್ಪಣೆಯ ಮೇರೆಗೆ ದುಷ್ಟ ಮೃಗಗಳು ದೇಶದಲ್ಲಿ ತಿರುಗುತ್ತಾ ಅದನ್ನು ನಿರ್ಜನಗೊಳ್ಳಿಸಿ, ಹಾಳುಮಾಡಿ, ಯಾರೂ ಹಾದು ಹೋಗದಂತೆ ಹೆದರಿಸುವ ಪಕ್ಷದಲ್ಲಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು