Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದಕಾರಣ ಮೋಶೆ ತಾಮ್ರದಿಂದ ಸರ್ಪವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಟ್ಟನು. ಸರ್ಪದಿಂದ ಗಾಯಪಟ್ಟವರಲ್ಲಿ ಯಾರು ಆ ತಾಮ್ರದ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅಂತೆಯೇ ಮೋಶೆ ಕಂಚಿನಿಂದ ಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಡಿಸಿದನು. ಸರ್ಪಗಳಿಂದ ಗಾಯಗೊಂಡವರಲ್ಲಿ ಯಾರು ಯಾರು ಆ ಕಂಚಿನ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದಕಾರಣ ಮೋಶೆ ತಾಮ್ರದಿಂದ ಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಡಿಸಿದನು. ಸರ್ಪಗಳಿಂದ ಗಾಯಪಟ್ಟವರಲ್ಲಿ ಯಾರು ಆ ತಾಮ್ರದ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದ್ದರಿಂದ ಮೋಶೆ ತಾಮ್ರದಿಂದ ಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಡಿಸಿದನು. ಸರ್ಪಗಳಿಂದ ಕಚ್ಚಿಸಿಕೊಂಡಿದ್ದವನು ಆ ತಾಮ್ರದ ಸರ್ಪವನ್ನು ನೋಡಿ ಬದುಕಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಮೋಶೆಯು ಕಂಚಿನ ಸರ್ಪವನ್ನು ಮಾಡಿ ಕಂಬದ ಮೇಲೆ ಇಟ್ಟನು. ಸರ್ಪದಿಂದ ಕಚ್ಚಿಸಿಕೊಂಡವರಲ್ಲಿ ಯಾರು ಆ ಕಂಚಿನ ಸರ್ಪದ ಕಡೆಗೆ ದೃಷ್ಟಿ ಇಟ್ಟು ನೋಡಿದರೋ, ಅವರು ಬದುಕಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:9
13 ತಿಳಿವುಗಳ ಹೋಲಿಕೆ  

ಮಗನನ್ನು ನೋಡಿ ತಂದೆಯಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ತಂದೆಯ ಚಿತ್ತವಾಗಿದೆ, ಮತ್ತು ನಾನು ಕಡೆ ದಿನದಲ್ಲಿ ಅವನನ್ನು ಎಬ್ಬಿಸುವೆನು” ಎಂದು ಹೇಳಿದನು.


ಪೂಜಾಸ್ಥಳಗಳನ್ನು ಹಾಳುಮಾಡಿ, ಕಲ್ಲುಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕತ್ತರಿಸಿ ಹಾಕಿದನು. ಮೋಶೆಯು ಮಾಡಿಸಿದ ತಾಮ್ರದ ಸರ್ಪವನ್ನು ಚೂರು‍ಚೂರು ಮಾಡಿದನು. ಇಸ್ರಾಯೇಲರು ಅದಕ್ಕೆ ಆ ವರೆಗೂ ಧೂಪವನ್ನರ್ಪಿಸುತ್ತಿದ್ದರು. ಅದಕ್ಕೆ “ನೆಹುಷ್ಟಾನ್” ಎಂಬ ಹೆಸರಿತ್ತು.


ಆದರೆ ನಾನು ಭೂಮಿಯಿಂದ ಮೇಲಕ್ಕೆ ಎಬ್ಬಿಸಲ್ಪಟ್ಟ ನಂತರ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುವೆನು” ಎಂದು ಹೇಳಿದನು.


ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.


ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.


ಹೇಗೆಂದರೆ ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ತೋರಿಬರುತ್ತದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ” ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ವೃದ್ಧಿಪಡಿಸುವಂಥದಾಗಿದೆ.


ಪಾಪಮಾಡುವವನು ಸೈತಾನನಿಗೆ ಸಂಬಂಧಪಟ್ಟವನಾಗಿದ್ದಾನೆ. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ಸೈತಾನನ ಕೆಲಸಗಳನ್ನು ನಾಶಮಾಡುವುದಕ್ಕೋಸ್ಕರ ದೇವಕುಮಾರನು ಪ್ರತ್ಯಕ್ಷನಾದನು.


ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು