Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತರುವಾಯ ಇಸ್ರಾಯೇಲರು ಪ್ರಯಾಣಮಾಡಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಬಯಲಿನಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲರು ಪ್ರಯಾಣಮಾಡಿ ಜೋರ್ಡನ್ ನದಿತೀರದಲ್ಲಿ ಜೆರಿಕೋ ನಗರಕ್ಕೆ ಹತ್ತಿರವಿರುವ ಮೋವಾಬ್ಯರ ಬೈಲಿನಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತರುವಾಯ ಇಸ್ರಾಯೇಲ್ಯರು ಪ್ರಯಾಣಮಾಡಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ಹೊಳೆಯ ತೀರದಲ್ಲಿ ಮೋವಾಬ್ಯರ ಬೈಲಿನಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬಳಿಕ ಇಸ್ರೇಲರು ಹೊರಟು ಜೆರಿಕೊ ಪಟ್ಟಣದ ಎದುರಾಗಿದ್ದ ಯೊರ್ದನ್ ನದಿಯ ಆಚೆ ಕಡೆಯಲ್ಲಿರುವ ಮೋವಾಬ್ಯರ ಬಯಲುಗಳಲ್ಲಿ ಪಾಳೆಯ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಂತರ ಇಸ್ರಾಯೇಲರು ಹೊರಟು ಯೊರ್ದನಿಗೆ ಈಚೆಯಲ್ಲಿರುವ ಮೋವಾಬಿನ ಬಯಲುಗಳಲ್ಲಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:1
14 ತಿಳಿವುಗಳ ಹೋಲಿಕೆ  

ಮೇಲಿನಿಂದ ಹರಿದು ಬರುತ್ತಿದ್ದ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದು ಹೋಯಿತು ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು.


ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲರು ಮೋಶೆಗೋಸ್ಕರ ಮೂವತ್ತು ದಿನಗಳ ವರೆಗೆ ದುಃಖಿಸಿದರು. ಅಲ್ಲಿಗೆ ಮೋಶೆಯ ಪ್ರಲಾಪದ ದಿನಗಳು ಮುಗಿದವು.


ಮೋಶೆಯು ಮೋವಾಬ್ಯರ ಮೈದಾನದಿಂದ ಯೆರಿಕೋ ಪಟ್ಟಣಕ್ಕೆ ಎದುರಾಗಿರುವ ನೆಬೋ ಪರ್ವತಕ್ಕೆ ಹೋಗಿ ಪಿಸ್ಗಾ ಎಂಬ ಬೆಟ್ಟದ ಶಿಖರವನ್ನು ಹತ್ತಿದನು. ಆಗ ಯೆಹೋವನು ಕಾನಾನ್ ದೇಶವನ್ನೆಲ್ಲಾ ಅಂದರೆ ದಾನ್ ಪಟ್ಟಣದ ವರೆಗೂ ಗಿಲ್ಯಾದ್ ಸೀಮೆ,


ಆ ಕಾಲದಲ್ಲಿ ನಾವು ಅರ್ನೋನ್ ನದಿ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗೂ, ಯೊರ್ದನ್ ನದಿಯ ಈಚೆ ಇರುವ ದೇಶವನ್ನೆಲ್ಲಾ ಅಮೋರಿಯರ ಇಬ್ಬರು ಅರಸರಿಂದ ತೆಗೆದುಕೊಂಡೆವು.


ಯೊರ್ದನ್ ನದಿಯ ಆಚೆ ಮೋವಾಬ್ಯರ ದೇಶದಲ್ಲಿ ಮೋಶೆಯು ಈ ಮುಂದಣ ಧರ್ಮಶಾಸ್ತ್ರವನ್ನು ವಿವರಿಸುವುದಕ್ಕೆ ಪ್ರಾರಂಭಿಸಿ ಹೀಗೆ ಹೇಳಿದನು:


ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಯ ಮೂಲಕ ಇಸ್ರಾಯೇಲರಿಗೆ ಕೊಟ್ಟ ಆಜ್ಞಾವಿಧಿಗಳು ಇವೇ.


ಎರಡುವರೆ ಗೋತ್ರಗಳು ತಮ್ಮ ಸ್ವತ್ತನ್ನು ಯೊರ್ದನ್ ನದಿಯ ಆಚೆ ಯೆರಿಕೋ ಪಟ್ಟಣದ ಪೂರ್ವದಿಕ್ಕಿನಲ್ಲಿ ಪಡೆದುಕೊಂಡಿದ್ದಾರೆ.”


ನಮಗೆ ಯೊರ್ದನ್ ನದಿಯ ಆಚೆ ಪೂರ್ವ ದಿಕ್ಕಿನಲ್ಲಿ ಸ್ವತ್ತನ್ನು ಅಪೇಕ್ಷಿಸುವುದಿಲ್ಲ” ಎಂದರು.


ಬಾಮೋತಿನಿಂದ ಮೋವಾಬ್ಯರ ಬಯಲಿನಲ್ಲಿರುವ ತಗ್ಗಿನಿಂದ ಪಿಸ್ಗಾ ಎಂಬ ಬೆಟ್ಟದ ತುದಿಗೆ ಬಂದರು. ಅಲ್ಲಿಂದ ಯೆಷೀಮೋನ್ ಮರಳುಗಾಡು ಕಾಣಿಸುತ್ತದೆ.


ಆಗ ಮೋಶೆಯೂ ಯಾಜಕನಾದ ಎಲ್ಲಾಜಾರನೂ ಮೋವಾಬ್ಯರ ಬಯಲುಗಳಲ್ಲಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ಹತ್ತಿರ ಅವರ ಸಂಗಡ ಮಾತನಾಡಿ,


ಇದಲ್ಲದೆ ಅಮ್ಮೋನ್ಯರ ಮಧ್ಯದೊಳಗೂ, ಮೋವಾಬ್ ಮತ್ತು ಎದೋಮ್ ಮೊದಲಾದ ದೇಶಗಳಲ್ಲಿಯೂ ಚದುರಿ ಹೋಗಿದ್ದ ಯೆಹೂದ್ಯರೆಲ್ಲರೂ ಬಾಬೆಲಿನ ಅರಸನು ಯೆಹೂದದಲ್ಲಿ ಕೆಲವರನ್ನು ಉಳಿಸಿ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನೆಂಬ


ಮತ್ತು ಅವರು ಸೆರೆಯವರನ್ನೂ, ಪಶುಗಳನ್ನೂ, ಆಸ್ತಿಯನ್ನೂ ತೆಗೆದುಕೊಂಡು ಯೆರಿಕೋ ಪಟ್ಟಣದ ಎದುರಾಗಿ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿದ್ದ ಪಾಳೆಯಕ್ಕೆ ಮೋಶೆ, ಮಹಾಯಾಜಕನಾದ ಎಲ್ಲಾಜಾರ್ ಮತ್ತು ಇಸ್ರಾಯೇಲರ ಸರ್ವಸಮೂಹದವರ ಬಳಿಗೆ ಬಂದರು.


ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು