Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದಕ್ಕೆ ದೇವರು ಬಿಳಾಮನಿಗೆ, “ನೀನು ಅವರ ಜೊತೆಯಲ್ಲಿ ಹೋಗಬಾರದು. ಆ ಜನಾಂಗದವರು ನನ್ನ ಆಶೀರ್ವಾದವನ್ನು ಹೊಂದಿದವರು; ಅವರನ್ನು ಶಪಿಸಬಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅದಕ್ಕೆ ದೇವರು, “ನೀನು ಅವರ ಜೊತೆಯಲ್ಲಿ ಹೋಗಬಾರದು. ಆ ಜನಾಂಗದವರು ನನ್ನ ಆಶೀರ್ವಾದ ಹೊಂದಿದವರು. ಅವರನ್ನು ಶಪಿಸಬಾರದು,” ಎಂದು ಹೇಳಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅದಕ್ಕೆ ದೇವರು - ನೀನು ಅವರ ಜೊತೆಯಲ್ಲಿ ಹೋಗಬಾರದು; ಆ ಜನಾಂಗದವರು ನನ್ನ ಆಶೀರ್ವಾವಾದವನ್ನು ಹೊಂದಿದವರು; ಅವರನ್ನು ಶಪಿಸಬಾರದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅದಕ್ಕೆ ದೇವರು ಬಿಳಾಮನಿಗೆ, “ನೀನು ಅವರ ಜೊತೆಯಲ್ಲಿ ಹೋಗಬಾರದು, ಆ ಜನರಿಗೆ ಶಾಪಕೊಡಬಾರದು. ನಾನು ಅವರನ್ನು ಆಶೀರ್ವದಿಸಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ದೇವರು ಬಿಳಾಮನಿಗೆ, “ನೀನು ಅವರ ಸಂಗಡ ಹೋಗಬೇಡ, ನೀನು ಆ ಜನರನ್ನು ಶಪಿಸಬೇಡ, ಏಕೆಂದರೆ ಅವರು ನನ್ನಿಂದ ಆಶೀರ್ವಾದ ಹೊಂದಿದವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:12
27 ತಿಳಿವುಗಳ ಹೋಲಿಕೆ  

ನಮ್ಮ ಕರ್ತನಾದ ಯೇಸುಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ, ಆತನು ಪರಲೋಕದಲ್ಲಿನ ಸಕಲ ಆತ್ಮೀಕ ಆಶೀರ್ವಾದಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.


ಆದರೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸದೆ ಅವನಿಂದ ಶಾಪವನ್ನು ನುಡಿಸದೆ ಆಶೀರ್ವಾದವನ್ನೇ ಹೇಳಿಸಿದನು.


ದೇವರು ವರಗಳನ್ನು ಅನುಗ್ರಹಿಸುವುದಕ್ಕೆ ಜನರನ್ನು ಕರೆಯುವುದ್ದಕ್ಕೂ ಮನಸ್ಸು ಬದಲಾಯಿಸುವವನಲ್ಲ.


ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ.


“ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಗುರಾಣಿಯು, ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದ್ದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ” ಎಂಬುದೇ.


ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು” ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು.


ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನೂ ಮತ್ತು ಬೆಯೋರನ ಮಗನಾದ ಬಿಳಾಮನು ಹೇಳಿದ ಉತ್ತರವನ್ನೂ ಜ್ಞಾಪಕಮಾಡಿಕೊಳ್ಳಿರಿ. ಯೆಹೋವನ ಧರ್ಮಕಾರ್ಯಗಳು ನಿಮ್ಮ ಗ್ರಹಿಕೆಗೆ ಬರುವ ಹಾಗೆ ನೀವು ಶಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದದ್ದನ್ನೆಲ್ಲಾ ಸ್ಮರಿಸಿಕೊಳ್ಳಿರಿ.


ಯಾರಿಗೆ ಯಾಕೋಬನ ದೇವರು ಸಹಾಯಕನೋ, ಯಾರು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ, ಅವನೇ ಧನ್ಯನು.


ಇಂಥ ಸುಸ್ಥಿತಿಯಲ್ಲಿರುವ ಜನರು ಧನ್ಯರು, ಯಾರಿಗೆ ಯೆಹೋವನು ದೇವರಾಗಿರುತ್ತಾನೋ ಅವರು ಭಾಗ್ಯವಂತರು.


ಯಾಕೋಬರಿಗೆ ವಿರುದ್ಧವಾದ ಶಕುನವಿಲ್ಲ, ಇಸ್ರಾಯೇಲರಲ್ಲಿ ಕಣಿ ಕೇಳುವುದಿಲ್ಲ. ಬದಲಾಗಿ, ಯಾಕೋಬ ಮತ್ತು ಇಸ್ರಾಯೇಲರ ವಿಷಯದಲ್ಲಿ ಹೀಗೆ ಹೇಳುವರು. ‘ದೇವರು ಮಾಡುವ ಕೆಲಸವನ್ನು ನೋಡಿರಿ!’


ಬಿಳಾಮನು ಬಾಲಾಕನಿಗೆ, “ನೀನು ಸರ್ವಾಂಗಹೋಮದ ಸ್ಥಳದಲ್ಲೇ ಇರು. ನಾನು ಸ್ವಲ್ಪ ದೂರ ಹೋಗಿ ಬರುತ್ತೇನೆ. ಯೆಹೋವನು ನನಗೆ ಎದುರಾಗಿ ಬಂದು, ಆತನು ನನಗೆ ಏನನ್ನು ಸೂಚಿಸುವನೋ ಅದನ್ನು ನಿನಗೆ ತಿಳಿಸುವೆನು” ಎಂದು ಹೇಳಿ ಮರವಿಲ್ಲದ ಒಂದು ಎತ್ತರವಾದ ಸ್ಥಳಕ್ಕೆ ಹೋದನು.


ಆದುದರಿಂದ ನೀನು ದಯಮಾಡಿ ಬಂದು ನನಗೋಸ್ಕರ ಈ ಜನರಿಗೆ ಶಾಪಕೊಡಬೇಕು. ಆಗ ಅವರನ್ನು ಸೋಲಿಸಿ ಈ ದೇಶದಿಂದ ಹೊರಡಿಸಿಬಿಡುವುದಕ್ಕೆ ನನ್ನಿಂದ ಆಗುವುದು. ನಿನ್ನ ಆಶೀರ್ವಾದದಿಂದ ಶುಭವೂ, ನಿನ್ನ ಶಾಪದಿಂದ ಅಶುಭವೂ ಉಂಟಾಗುತ್ತದೆ ಎಂಬುದನ್ನು ನಾನು ಬಲ್ಲೆನು” ಎಂದು ಕಳುಹಿಸಿದನು.


‘ಒಂದು ಜನಾಂಗವು ಐಗುಪ್ತ ದೇಶದಿಂದ ಹೊರಟು ಬಂದಿದೆ. ಅವರು ಭೂಮಿಯನ್ನೆಲ್ಲಾ ಆವರಿಸಿಕೊಂಡಿದ್ದಾರೆ; ನೀನು ಬಂದು ಅವರಿಗೆ ಶಾಪಕೊಡಬೇಕು; ಕೊಟ್ಟರೆ ಅವರನ್ನು ಸೋಲಿಸಿ ಹೊರಡಿಸಿಬಿಡುವುದಕ್ಕೆ ನನ್ನಿಂದ ಆಗುವುದು’” ಎಂದು ಹೇಳಿಕಳುಹಿಸಿದ್ದಾನೆ ಎಂದು ಉತ್ತರಕೊಟ್ಟನು.


ಬೆಳಿಗ್ಗೆ ಬಿಳಾಮನು ಎದ್ದು ಬಾಲಾಕನ ಪ್ರಧಾನರಿಗೆ, “ನೀವು ನಿಮ್ಮ ದೇಶಕ್ಕೆ ಹೋಗಿರಿ. ನಾನು ನಿಮ್ಮ ಜೊತೆಯಲ್ಲಿ ಬರುವುದಕ್ಕೆ ಯೆಹೋವನು ನನಗೆ ಅಪ್ಪಣೆಕೊಡಲಿಲ್ಲ” ಎಂದು ಹೇಳಿದನು.


ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ? ಯೆಹೋವನು ಎದುರಿಸದವನನ್ನು ನಾನು ಹೇಗೆ ಎದುರಿಸಲಿ?


ಆ ಜನಾಂಗವು ಸಿಂಹದಂತೆ ಕಾಲುಮುದುರಿ ಹೊಂಚುಹಾಕಿಕೊಂಡಿದೆ, ಮೃಗೇಂದ್ರನಿಗೆ ಸಮನಾದ ಆ ಜನರನ್ನು ಕೆಣಕುವುದು ಯಾರಿಂದಾದೀತು? ಇಸ್ರಾಯೇಲರೇ, ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದವೂ, ಶಪಿಸುವವನಿಗೆ ಶಾಪವೂ ಉಂಟಾಗುವುದು” ಎಂದನು.


ನೀವು ಕೈಹಾಕಿದ ಎಲ್ಲಾ ಕೆಲಸಗಳನ್ನೂ ನಿಮ್ಮ ದೇವರಾದ ಯೆಹೋವನು ಸಫಲಪಡಿಸಿದ್ದಾನಲ್ಲಾ. ಈ ದೊಡ್ಡ ಅರಣ್ಯದಲ್ಲಿ ನೀವು ಸಂಚರಿಸುತ್ತಿರುವಾಗೆಲ್ಲಾ ಆತನು ನಿಮ್ಮನ್ನು ಪರಾಂಬರಿಸುತ್ತಾ ಬಂದನು. ಈ ನಲ್ವತ್ತು ವರ್ಷ ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದುದರಿಂದ ನಿಮಗೆ ಏನೂ ಕೊರತೆಯಾಗಲಿಲ್ಲ’” ಎಂದು ಹೇಳಿದನು.


ನೀವು ಎಲ್ಲಾ ಜನಗಳಿಗಿಂತಲೂ ಹೆಚ್ಚಾಗಿ ದೇವರ ಅನುಗ್ರಹವನ್ನು ಹೊಂದಿದವರಾಗಿರುವಿರಿ. ನಿಮ್ಮೊಳಗೆ ಸ್ತ್ರೀಪುರುಷರಲ್ಲಿಯಾಗಲಿ, ಹೆಣ್ಣುಗಂಡು ಪಶುಗಳಲ್ಲಿಯಾಗಲಿ ಬಂಜೆತನವು ಇರುವುದಿಲ್ಲ.


ನೀವು ಹೊರಗೆ ಹೋಗುವಾಗಲೂ ಒಳಗೆ ಬರುವಾಗಲೂ ಶುಭವುಂಟಾಗುವುದು.


ಚಾದೋಕ್ ಸಂತಾನದ ಮಹಾಯಾಜಕನಾದ ಅಜರ್ಯನು ಅವನಿಗೆ, “ಜನರು ದೇವರಾದ ಯೆಹೋವನಿಗೋಸ್ಕರ ನೈವೇದ್ಯಕ್ಕಾಗಿ ಪ್ರತ್ಯೇಕಿಸತಕ್ಕದ್ದನ್ನು ಆತನ ಆಲಯಕ್ಕೆ ತಂದಂದಿನಿಂದ ಯೆಹೋವನು ತನ್ನ ಪ್ರಜೆಗಳಿಗೆ ಸಮೃದ್ಧಿಯಾಗಿ ಅನುಗ್ರಹಿಸಿದ್ದಾನೆ. ನಾವು ಉಂಡು ತೃಪ್ತರಾಗಿ ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತಾರೆ” ಎಂದನು.


ಇವರ ಸಂತಾನವು ಜನಾಂಗಗಳಲ್ಲಿ ಪ್ರಖ್ಯಾತವಾಗುವುದು, ಇವರ ಸಂತತಿಯು ಅನ್ಯದೇಶೀಯರಲ್ಲಿ ಹೆಸರುಗೊಳ್ಳುವುದು. ಇವರನ್ನು ನೋಡುವವರೆಲ್ಲರು ಯೆಹೋವನು ಆಶೀರ್ವದಿಸಿದ ವಂಶವು ಇದೇ ಎಂದು ಒಪ್ಪಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು