ಅರಣ್ಯಕಾಂಡ 22:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಏಕೆಂದರೆ ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು. ನೀನು ಏನು ಹೇಳಿದರೂ ಅದನ್ನು ಮಾಡುತ್ತೇನೆ. ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸಬೇಕು’” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಾನು ತಮ್ಮನ್ನು ಬಹಳವಾಗಿ ಸನ್ಮಾನಿಸುವೆನು; ತಾವು ಏನು ಹೇಳಿದರೂ ಅದರಂತೆಯೇ ಮಾಡುವೆನು; ತಾವು ಅಗತ್ಯವಾಗಿ ಬಂದು ಈ ಜನಾಂಗದವರನ್ನು ಶಪಿಸಿ ನನಗೆ ನೆರವಾಗಬೇಕು’ ಎಂದು ಹೇಳಿಕಳಿಸಿದ್ದಾರೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು; ನೀನು ಏನು ಹೇಳಿದರೂ ಅದನ್ನು ಮಾಡುತ್ತೇನೆ; ನೀನು ಅಗತ್ಯವಾಗಿ ಬಂದು ಈ ಜನವನ್ನು ನನಗೋಸ್ಕರ ಶಪಿಸಬೇಕೆಂದು ಚಿಪ್ಪೋರನ ಮಗನಾದ ಬಾಲಾಕನು ಹೇಳುತ್ತಾನೆಂದು ತಿಳಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಾನು ಹೇಳುವುದನ್ನು ನೀನು ಮಾಡಿದರೆ, ನಾನು ನಿನಗೆ ಹಣವನ್ನು ಮತ್ತು ಗೌರವವನ್ನು ಬಹಳವಾಗಿ ಕೊಡುವೆನು ಮತ್ತು ನೀನು ಹೇಳಿದ್ದೆಲ್ಲವನ್ನು ಮಾಡುವೆನು. ಬಂದು, ನನಗಾಗಿ ಈ ಜನರನ್ನು ಶಪಿಸು” ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಏಕೆಂದರೆ ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು. ನೀನು ಹೇಳುವುದನ್ನೆಲ್ಲಾ ನಾನು ಮಾಡುವೆನು. ಆದಕಾರಣ ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸು,” ಎಂದನು. ಅಧ್ಯಾಯವನ್ನು ನೋಡಿ |