Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವನು ಹೋದುದರಿಂದ ದೇವರಿಗೆ ಕೋಪವುಂಟಾಯಿತು. ಯೆಹೋವನ ದೂತನು ಅವನಿಗೆ ಎದುರಾಳಿಯಾಗಿ ದಾರಿಯಲ್ಲಿ ನಿಂತುಕೊಂಡನು. ಬಿಳಾಮನು ತನ್ನ ಕತ್ತೆಯ ಮೇಲೆ ಕುಳಿತುಕೊಂಡಿದ್ದನು. ಅವನ ಇಬ್ಬರು ಆಳುಗಳು ಅವನ ಸಂಗಡ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಬಿಳಾಮನು ಹೀಗೆ ಹೋದುದರಿಂದ ದೇವರಿಗೆ ಸಿಟ್ಟಾಯಿತು. ಸರ್ವೇಶ್ವರನ ದೂತನು ಅವನಿಗೆ ಎದುರಾಳಿಯಾಗಿ ದಾರಿಯಲ್ಲಿ ನಿಂತುಕೊಂಡನು. ಬಿಳಾಮನು ತನ್ನ ಕತ್ತೆಯ ಮೇಲೆ ಹತ್ತಿ ಇಬ್ಬರು ಆಳುಗಳ ಸಂಗಡ ಸವಾರಿ ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವನು ಹೋದದರಿಂದ ದೇವರಿಗೆ ಕೋಪವುಂಟಾಯಿತು; ಯೆಹೋವನ ದೂತನು ಅವನಿಗೆ ಎದುರಾಳಿಯಾಗಿ ದಾರಿಯಲ್ಲಿ ನಿಂತುಕೊಂಡನು. ಬಿಳಾಮನು ತನ್ನ ಕತ್ತೆಯ ಮೇಲೆ ಹತ್ತಿಕೊಂಡಿದ್ದನು; ಇಬ್ಬರು ಆಳುಗಳು ಅವನ ಸಂಗಡ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಬಿಳಾಮನು ಕತ್ತೆಯ ಮೇಲೆ ಸವಾರಿ ಮಾಡುತ್ತಿದ್ದನು. ಅವನ ಜೊತೆ ಇಬ್ಬರು ಆಳುಗಳಿದ್ದರು. ಬಿಳಾಮನು ಪ್ರಯಾಣ ಮಾಡತೊಡಗಿದ್ದರಿಂದ ದೇವರು ಕೋಪಗೊಂಡನು. ಆದ್ದರಿಂದ ಯೆಹೋವನ ದೂತನು ಬಿಳಾಮನನ್ನು ತಡೆಯಲು ದಾರಿಯಲ್ಲಿ ನಿಂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದರೆ ಅವನು ಹೋದದ್ದರಿಂದ ದೇವರಿಗೆ ಕೋಪ ಬಂದಿತು. ಯೆಹೋವ ದೇವರ ದೂತನು ಅವನಿಗೆ ಎದುರಾಳಿಯಾಗಿ ಮಾರ್ಗದಲ್ಲಿ ನಿಂತುಕೊಂಡನು. ಬಿಳಾಮನು ತನ್ನ ಕತ್ತೆಯ ಮೇಲೆ ಹತ್ತಿಕೊಂಡಿದ್ದನು. ಅವನ ಇಬ್ಬರು ಆಳುಗಳು ಅವನ ಸಂಗಡ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:22
11 ತಿಳಿವುಗಳ ಹೋಲಿಕೆ  

ಯೆಹೋವನ ದೂತನು ಅವನಿಗೆ, “ನೀನು ಮೂರು ಸಾರಿ ಕತ್ತೆಯನ್ನು ಹೊಡೆದದ್ದೇಕೆ? ನೀನು ನನಗೆ ವಿರುದ್ಧವಾದ ಮಾರ್ಗವನ್ನು ಹಿಡಿದುದರಿಂದ ನಿನ್ನನ್ನು ತಡೆಯುವುದಕ್ಕೆ ನಾನೇ ಬಂದಿದ್ದೇನೆ.


ಇದಲ್ಲದೆ ಮೋಶೆಯು ಹೋಗುವ ದಾರಿಯಲ್ಲಿ, ಛತ್ರದಲ್ಲಿದ್ದಾಗ ಯೆಹೋವನು ಅವನೆದುರಿಗೆ ಬಂದು ಅವನ ಪ್ರಾಣವನ್ನು ತೆಗೆಯಬೇಕೆಂದಿದ್ದನು.


ವೈರಿಯ ಹಾಗೆ ಬಿಲ್ಲನ್ನು ಬೊಗ್ಗಿಸಿ, ವಿರೋಧಿಯಂತೆ ಬಲಗೈಯೆತ್ತಿ ನಿಂತು, ಸುಂದರ ಪ್ರಜೆಯನ್ನೆಲ್ಲಾ ಸಂಹರಿಸಿದ್ದಾನೆ; ಚೀಯೋನ್ ಗುಡಾರದ ಮೇಲೆ ತನ್ನ ರೋಷಾಗ್ನಿಯನ್ನು ಸುರಿಸಿದ್ದಾನೆ.


ಯೆಹೋವನು ಅವನನ್ನು ಕುರಿತು, “ಈ ಮಗುವಿಗೆ ಇಜ್ರೇಲ್ ಎಂಬ ಹೆಸರಿಡು; ಇಜ್ರೇಲಿನಲ್ಲಿ ಸುರಿಸಿದ ರಕ್ತಕ್ಕೆ ಪ್ರತಿಯಾಗಿ ಸ್ವಲ್ಪ ಕಾಲದೊಳಗೆ ನಾನು ಯೇಹು ವಂಶದವರಿಗೆ ಮುಯ್ಯಿ ತೀರಿಸಿ ಇಸ್ರಾಯೇಲ್ ಜನಾಂಗವನ್ನು ನಿರ್ನಾಮ ಮಾಡುವೆನು.


ಇದಲ್ಲದೆ, ಯೇಹುವು ದೂತರ ಮುಖಾಂತರವಾಗಿ, “ಬಾಳ್ ದೇವತೆಯನ್ನು ಆರಾಧಿಸುವ ಎಲ್ಲಾ ಭಕ್ತರೂ ತಮ್ಮನ್ನು ಶುದ್ಧಿಮಾಡಿಕೊಂಡು ಉತ್ಸವಕ್ಕೆ ಬರಬೇಕು” ಎಂದು ಹೇಳಿದನು.


ಯೆಹೋವನ ದೂತನು ಬಿಳಾಮನಿಗೆ, “ಈ ಮನುಷ್ಯರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಹೇಳುವ ಮಾತನ್ನೇ ಹೊರತು ಬೇರೆ ಯಾವುದನ್ನೂ ಹೇಳಬಾರದು” ಎಂದು ಹೇಳಿದನು. ಬಿಳಾಮನು ಬಾಲಾಕನ ಪ್ರಧಾನರ ಜೊತೆಯಲ್ಲಿ ಹೊರಟುಹೋದನು.


ಇಗೋ ದಾರಿಯಲ್ಲಿ ನಿಮ್ಮನ್ನು ಕಾಪಾಡುವುದಕ್ಕೂ, ನಾನು ಗೊತ್ತುಮಾಡಿರುವ ಸ್ಥಳಕ್ಕೆ ನಿಮ್ಮನ್ನು ಕರೆತರುವುದಕ್ಕೂ ದೂತನನ್ನು ನಿಮ್ಮ ಮುಂದಾಗಿ ಕಳುಹಿಸಿದ್ದೇನೆ.


ಯೆಹೋವನ ದೂತನು ಬಿಚ್ಚುಕತ್ತಿಯನ್ನು ಕೈಯಲ್ಲಿ ಹಿಡಿದುಕೊಂಡು ದಾರಿಯಲ್ಲೇ ನಿಂತಿರುವುದನ್ನು ಆ ಕತ್ತೆ ನೋಡಿ ದಾರಿಯನ್ನು ಬಿಟ್ಟು ಅಡವಿಯ ಕಡೆಗೆ ಹೋಯಿತು. ಕತ್ತೆಯನ್ನು ದಾರಿಗೆ ತಿರುಗಿಸುವುದಕ್ಕೆ ಬಿಳಾಮನು ಅದನ್ನು ಹೊಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು