Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಯೆಹೋವನ ದೂತನು ಅವನಿಗೆ, “ನೀನು ಮೂರು ಸಾರಿ ಕತ್ತೆಯನ್ನು ಹೊಡೆದದ್ದೇಕೆ? ನೀನು ನನಗೆ ವಿರುದ್ಧವಾದ ಮಾರ್ಗವನ್ನು ಹಿಡಿದುದರಿಂದ ನಿನ್ನನ್ನು ತಡೆಯುವುದಕ್ಕೆ ನಾನೇ ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆಗ ಸರ್ವೇಶ್ವರನ ದೂತ, “ಮೂರು ಸಾರಿ ನಿನ್ನ ಕತ್ತೆಯನ್ನೇಕೆ ಹೊಡೆದೆ? ನೀನು ಹಿಡಿದ ಮಾರ್ಗ ಸರಿಯಲ್ಲ. ನಿನ್ನನ್ನು ತಡೆಗಟ್ಟಲು ನಾನೇ ಬಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಯೆಹೋವನ ದೂತನು - ನೀನು ಮೂರು ಸಾರಿಗೂ ನಿನ್ನ ಕತ್ತೆಯನ್ನು ಹೊಡೆದದ್ದೇಕೆ; ನೀನು ನನಗೆ ವಿರುದ್ಧವಾದ ಮಾರ್ಗವನ್ನು ಹಿಡಿದದ್ದರಿಂದ ನಿನ್ನನ್ನು ತಡೆಯುವದಕ್ಕೆ ನಾನೇ ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಯೆಹೋವನ ದೂತನು ಬಿಳಾಮನಿಗೆ, “ನೀನು ಮೂರು ಸಲವೂ ಕತ್ತೆಯನ್ನು ಹೊಡೆದದ್ದೇಕೆ? ನಿನ್ನ ಪ್ರಯಾಣವು ನನ್ನ ಚಿತ್ತಕ್ಕೆ ವಿರುದ್ಧವಾದದ್ದರಿಂದ ನಿನ್ನನ್ನು ತಡೆಯುವುದಕ್ಕೆ ನಾನೇ ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಯೆಹೋವ ದೇವರ ದೂತನು ಅವನಿಗೆ, “ನಿನ್ನ ಕತ್ತೆಯನ್ನು ಈಗ ಮೂರು ಸಾರಿ ಹೊಡೆದದ್ದು ಏಕೆ? ಇಗೋ, ನಿನ್ನ ಮಾರ್ಗವು ನನ್ನ ಮುಂದೆ ವಕ್ರವಾಗಿರುವುದರಿಂದ ನಾನು ನಿನ್ನನ್ನು ತಡೆಯುವುದಕ್ಕೆ ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:32
19 ತಿಳಿವುಗಳ ಹೋಲಿಕೆ  

ಅವನನ್ನು ದೃಷ್ಟಿಸಿನೋಡಿ; “ಸೈತಾನನ ಮಗನೇ, ಮೋಸದಿಂದಲೂ, ಎಲ್ಲಾ ಕೆಟ್ಟತನದಿಂದಲೂ ತುಂಬಿರುವವನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೇರವಾದ ಮಾರ್ಗಗಳನ್ನು ಡೊಂಕು ಮಾಡುವುದನ್ನು ಬಿಡುವುದಿಲ್ಲವೋ?


ಸನ್ಮಾರ್ಗಿಗೆ ಉದ್ಧಾರ, ವಕ್ರಮಾರ್ಗಿಗೆ ತಟ್ಟನೆ ಸೋಲು.


ಅವನು ಹೋದುದರಿಂದ ದೇವರಿಗೆ ಕೋಪವುಂಟಾಯಿತು. ಯೆಹೋವನ ದೂತನು ಅವನಿಗೆ ಎದುರಾಳಿಯಾಗಿ ದಾರಿಯಲ್ಲಿ ನಿಂತುಕೊಂಡನು. ಬಿಳಾಮನು ತನ್ನ ಕತ್ತೆಯ ಮೇಲೆ ಕುಳಿತುಕೊಂಡಿದ್ದನು. ಅವನ ಇಬ್ಬರು ಆಳುಗಳು ಅವನ ಸಂಗಡ ಇದ್ದರು.


ವಕ್ರಮಾರ್ಗಿಯಾದ ಐಶ್ವರ್ಯವಂತನಿಗಿಂತ, ನಿರ್ದೋಷವಾಗಿ ನಡೆಯುವ ದರಿದ್ರನು ಶ್ರೇಷ್ಠನು.


ಸರಳಮಾರ್ಗಿಯು ಯೆಹೋವನಿಗೆ ಭಯಪಡುವನು, ವಕ್ರಮಾರ್ಗಿಯು ಆತನನ್ನು ಅಸಡ್ಡೆಮಾಡುವನು.


ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನೂ ಮತ್ತು ಬೆಯೋರನ ಮಗನಾದ ಬಿಳಾಮನು ಹೇಳಿದ ಉತ್ತರವನ್ನೂ ಜ್ಞಾಪಕಮಾಡಿಕೊಳ್ಳಿರಿ. ಯೆಹೋವನ ಧರ್ಮಕಾರ್ಯಗಳು ನಿಮ್ಮ ಗ್ರಹಿಕೆಗೆ ಬರುವ ಹಾಗೆ ನೀವು ಶಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದದ್ದನ್ನೆಲ್ಲಾ ಸ್ಮರಿಸಿಕೊಳ್ಳಿರಿ.


ಇಂಥ ಗಿಡಕ್ಕಾಗಿ ನೀನು ಕನಿಕರಪಡುವಾಗ ಎಡಗೈ ಬಲಗೈ ತಿಳಿಯದ ಒಂದು ಲಕ್ಷದ ಇಪ್ಪತ್ತು ಸಾವಿರ ಜನರು, ಅಪಾರ ಪಶುಪ್ರಾಣಿಗಳೂ ಇರುವ ದೊಡ್ಡ ಪಟ್ಟಣವಾದ ನಿನೆವೆಗಾಗಿ ನಾನು ಕನಿಕರಪಡಬಾರದೋ?” ಎಂದನು.


ಆತನು ಪಶುಗಳಿಗೂ, ಕೂಗುತ್ತಿರುವ ಕಾಗೆಮರಿಗಳಿಗೂ ಬೇಕಾದ ಆಹಾರಕೊಡುತ್ತಾನೆ.


ಯೆಹೋವನು ಸರ್ವೋಪಕಾರಿಯು, ತಾನು ನಿರ್ಮಿಸಿದವುಗಳನ್ನೆಲ್ಲಾ ಕರುಣಿಸುವಾತನೂ ಆಗಿದ್ದಾನೆ.


ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ, ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; ಯೆಹೋವನೇ, ನೀನು ಮನುಷ್ಯರನ್ನೂ, ಮೃಗಗಳನ್ನೂ ಸಂರಕ್ಷಿಸುತ್ತೀ.


ಕಣತುಳಿಯುವ ಎತ್ತಿನ ಬಾಯಿಯನ್ನು ಕಟ್ಟಬಾರದು.


ಯಾಕೆಂದರೆ ನೀವು ಐಗುಪ್ತದೇಶದಿಂದ ಬಂದಾಗ ಅಮ್ಮೋನಿಯರು ಅನ್ನಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; ಮೋವಾಬ್ಯರು ನಿಮ್ಮನ್ನು ಶಪಿಸುವುದಕ್ಕಾಗಿ ಬೆಯೋರನ ಮಗನಾದ ಬಿಳಾಮನಿಗೆ ಹಣಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮಿನ ಪೆತೋರ್ ಊರಿನಿಂದ ಅವನನ್ನು ಕರೆಯಿಸಿದರು.


ಯೆಹೋವನ ದೂತನು ಬಿಳಾಮನಿಗೆ, “ಈ ಮನುಷ್ಯರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಹೇಳುವ ಮಾತನ್ನೇ ಹೊರತು ಬೇರೆ ಯಾವುದನ್ನೂ ಹೇಳಬಾರದು” ಎಂದು ಹೇಳಿದನು. ಬಿಳಾಮನು ಬಾಲಾಕನ ಪ್ರಧಾನರ ಜೊತೆಯಲ್ಲಿ ಹೊರಟುಹೋದನು.


ಆಗ ಯೆಹೋವನು ಆ ಕತ್ತೆಗೆ ಮಾತನಾಡುವ ಶಕ್ತಿಯನ್ನು ಕೊಡಲಾಗಿ ಅದು ಬಿಳಾಮನನ್ನು, “ನೀನು ಮೂರು ಸಾರಿ ನನ್ನನ್ನು ಹೊಡೆದದ್ದೇಕೆ? ನಾನು ನಿನಗೇನು ಮಾಡಿದ್ದೇನೆ” ಎಂದು ಕೇಳಿತು.


ಆ ರಾತ್ರಿ ದೇವರು ಬಿಳಾಮನ ಬಳಿಗೆ ಬಂದು, “ಆ ಮನುಷ್ಯರು ನಿನ್ನನ್ನು ಕರೆಯುವುದಕ್ಕೆ ಬಂದಿರುವುದರಿಂದ ಎದ್ದು ಅವರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಆಜ್ಞಾಪಿಸುವ ಪ್ರಕಾರವೇ ನೀನು ಮಾಡಬೇಕು” ಎಂದನು.


ಆ ಕತ್ತೆ ನನ್ನನ್ನು ನೋಡಿ ಮೂರು ಸಾರಿ ನನ್ನ ಎದುರಿನಿಂದ ವಾರೆಯಾಗಿ ತಿರುಗಿಕೊಂಡಿತು. ಹಾಗೆ ತಿರುಗಿಕೊಳ್ಳದಿದ್ದರೆ ನಾನು ಕತ್ತೆಯ ಪ್ರಾಣವನ್ನು ಉಳಿಸಿ ನಿನ್ನನ್ನು ಕೊಂದು ಹಾಕಿಬಿಡುತ್ತಿದ್ದೆನು” ಎಂದು ಹೇಳಿದನು.


ಮನುಷ್ಯನ ನಡತೆಯೆಲ್ಲಾ ಸ್ವಂತ ದೃಷ್ಟಿಗೆ ಶುದ್ಧವಾಗಿದೆ, ಯೆಹೋವನು ಅಂತರಂಗವನ್ನೇ ಪರೀಕ್ಷಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು