ಅರಣ್ಯಕಾಂಡ 22:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಬಿಳಾಮನು ಬಂದ ವರ್ತಮಾನವನ್ನು ಬಾಲಾಕನು ಕೇಳಿ ಅವನನ್ನು ಎದುರುಗೊಳ್ಳುವುದಕ್ಕಾಗಿ ತನ್ನ ದೇಶದ ಗಡಿಯಾದ ಅರ್ನೋನ್ ನದಿಯ ತೀರದಲ್ಲಿರುವ ಮೋವಾಬ್ಯರ ಪಟ್ಟಣಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಬಿಳಾಮನು ಬಂದ ಸಮಾಚಾರ ಬಾಲಾಕನಿಗೆ ಮುಟ್ಟಿತು. ಅವನು ಬಿಳಾಮನನ್ನು ಬರಮಾಡಿಕೊಳ್ಳಲು ತನ್ನ ನಾಡಗಡಿಯಾದ ಅರ್ನೋನ್ ಹೊಳೆಯ ತೀರದಲ್ಲಿರುವ ಮೋವಾಬ್ಯರ ಪಟ್ಟಣಕ್ಕೆ ಹೊರಟುಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಬಿಳಾಮನು ಬಂದ ವರ್ತಮಾನವನ್ನು ಬಾಲಾಕನು ಕೇಳಿ ಅವನನ್ನು ಎದುರುಗೊಳ್ಳುವದಕ್ಕಾಗಿ ತನ್ನ ದೇಶದ ಮೇರೆಯಾದ ಅರ್ನೋನ್ ಹೊಳೆಯ ತೀರದಲ್ಲಿ ಇರುವ ಮೋವಾಬ್ಯರ ಪಟ್ಟಣಕ್ಕೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಬಿಳಾಮನು ಬರುತ್ತಿರುವ ಸುದ್ದಿಯನ್ನು ಬಾಲಾಕನು ಕೇಳಿ ಅವನನ್ನು ಎದುರುಗೊಳ್ಳುವುದಕ್ಕಾಗಿ ತನ್ನ ದೇಶದ ಸರಹದ್ದಿನಲ್ಲಿ ಅರ್ನೋನ್ ನದಿಯ ಬಳಿಯಲ್ಲಿರುವ ಮೋವ್ಯಾಬರ ಊರಿನಲ್ಲಿ ಅವನನ್ನು ಭೇಟಿಯಾಗಲು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಬಿಳಾಮನು ಬಂದನೆಂದು ಬಾಲಾಕನು ಕೇಳಿದಾಗ, ಅವನು ಕಡೆಯ ಮೇರೆಯಲ್ಲಿರುವ ಅರ್ನೋನ್ ಹೊಳೆಯ ತೀರದಲ್ಲಿದ್ದ ಮೋವಾಬಿನ ಪಟ್ಟಣಕ್ಕೆ ಬರಮಾಡಿಕೊಳ್ಳಲು ಹೊರಟನು. ಅಧ್ಯಾಯವನ್ನು ನೋಡಿ |