ಅರಣ್ಯಕಾಂಡ 22:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಅದಕ್ಕೆ ಬಿಳಾಮನು ಬಾಲಾಕನಿಗೆ, “ನೋಡು, ನಾನು ನಿನ್ನ ಬಳಿಗೆ ಬಂದಿದ್ದೇನೆ. ಆದರೆ ನಾನಾಗಿ ಏನಾದರೂ ಹೇಳುವುದಕ್ಕೆ ನನಗೆ ಶಕ್ತಿಯಿಲ್ಲ. ದೇವರು ನನ್ನಿಂದ ಹೇಳಿಸಿದ ಮಾತನ್ನೇ ಹೇಳುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಅದಕ್ಕೆ ಬಿಳಾಮನು, “ಅದಿರಲಿ, ನಾನೀಗ ಬಂದಾಯಿತು, ಆದರೆ ನಾನಾಗಿ ಏನನ್ನು ಹೇಳುವ ಶಕ್ತಿ ನನಗಿಲ್ಲ, ದೇವರು ಆಡಿಸಿದ ಮಾತನ್ನೇ ಹೇಳಲು ಸಾಧ್ಯ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಬಿಳಾಮನು - ಅದಿರಲಿ; ನಾನು ಬಂದಿದ್ದೇನೆ; ಆದರೆ ಏನು? ಏನಾದರೂ ಹೇಳುವದಕ್ಕೆ ನನಗೆ ಶಕ್ತಿಯುಂಟೋ? ದೇವರು ಆಡಿಸುವ ಮಾತನ್ನೇ ಹೇಳುತ್ತೇನಷ್ಟೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಬಿಳಾಮನು, “ನಾನು ಈಗ ಬಂದಿದ್ದೇನೆ. ಆದರೆ, ನಿನಗೆ ಇಷ್ಟವಾಗುವಂಥದ್ದನ್ನು ಹೇಳಲು ನನಗೆ ಸಾಧ್ಯವಿಲ್ಲ. ದೇವರು ನನಗೆ ತಿಳಿಸುವುದನ್ನೇ ನಾನು ಹೇಳಬೇಕು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಬಿಳಾಮನು ಬಾಲಾಕನಿಗೆ, “ಇಗೋ, ನಾನು ನಿನ್ನ ಬಳಿಗೆ ಬಂದಿದ್ದೇನೆ. ಆದರೆ ಈಗ ನಿನಗೆ ಇಷ್ಟವಾಗುವಂಥದ್ದನ್ನು ಹೇಳುವುದು ನನಗೆ ಸಾಧ್ಯವಿಲ್ಲ? ದೇವರು ನನ್ನಿಂದ ಆಡಿಸಿದ ಮಾತನ್ನೇ ಹೇಳುವೆನು,” ಎಂದನು. ಅಧ್ಯಾಯವನ್ನು ನೋಡಿ |