ಅರಣ್ಯಕಾಂಡ 22:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಬಿಳಾಮನು ಅವರಿಗೆ, “ಈ ರಾತ್ರಿ ನೀವು ಇಲ್ಲಿಯೇ ಇಳಿದುಕೊಂಡಿರಿ. ಯೆಹೋವನು ನನಗೆ ಹೇಳುವ ಮಾತುಗಳನ್ನು ನಿಮಗೆ ತಿಳಿಸುವೆನು” ಎಂದು ಹೇಳಿದನು. ಆಗ ಆ ರಾತ್ರಿ ಮೋವಾಬ್ಯರ ಪ್ರಧಾನರು ಬಿಳಾಮನ ಬಳಿಯಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆಗ ಬಿಳಾಮನು, “ಈ ರಾತ್ರಿ ನೀವು ಇಲ್ಲೇ ತಂಗಿರಿ. ಸರ್ವೇಶ್ವರ ನನಗೆ ಕೊಡುವ ಉತ್ತರವನ್ನು ಬೆಳಿಗ್ಗೆ ತಿಳಿಸುವೆನು,” ಎಂದನು. ಅಂತೆಯೇ, ಮೋವಾಬ್ಯರ ಮುಖಂಡರು ಬಿಳಾಮನ ಬಳಿಯಲ್ಲಿ ಉಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಈ ರಾತ್ರಿ ನೀವು ಇಲ್ಲೇ ಇಳಿದುಕೊಂಡಿರ್ರಿ; ಯೆಹೋವನು ನನಗೆ ಹೇಳುವ ಮಾತನ್ನು ಬೆಳಿಗ್ಗೆ ತಿಳಿಸುವೆನು ಎಂದು ಹೇಳಲಾಗಿ ಮೋವಾಬ್ಯರ ಪ್ರಧಾನರು ಬಿಳಾಮನ ಬಳಿಯಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಬಿಳಾಮನು, “ಈ ರಾತ್ರಿ ನೀವು ಇಲ್ಲೇ ಇಳಿದುಕೊಳ್ಳಿರಿ. ಯೆಹೋವನು ನನಗೆ ಹೇಳುವ ಮಾತನ್ನು ಬೆಳಿಗ್ಗೆ ನಿಮಗೆ ತಿಳಿಸುವೆನು” ಎಂದು ಹೇಳಿದನು. ಆದ್ದರಿಂದ ಮೋವಾಬ್ಯರ ಹಿರಿಯರು ಆ ರಾತ್ರಿ ಬಿಳಾಮನ ಮನೆಯಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವನು ಅವರಿಗೆ, “ಈ ರಾತ್ರಿ ಇಲ್ಲಿ ಇಳಿದುಕೊಳ್ಳಿರಿ. ಯೆಹೋವ ದೇವರು ನನಗೆ ಹೇಳುವ ಪ್ರಕಾರ ನಿಮಗೆ ಉತ್ತರವನ್ನು ಕೊಡುವೆನು,” ಎಂದು ಹೇಳಿದನು. ಆದಕಾರಣ ಮೋವಾಬಿನ ಪ್ರಭುಗಳು ಬಿಳಾಮನ ಸಂಗಡ ಇಳಿದುಕೊಂಡರು. ಅಧ್ಯಾಯವನ್ನು ನೋಡಿ |