ಅರಣ್ಯಕಾಂಡ 23:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಬಾಲಾಕನು ಬಿಳಾಮನಿಗೆ, “ನೀನು ನನಗೆ ಮಾಡಿದ್ದೇನು? ನನ್ನ ಶತ್ರುಗಳನ್ನು ಶಪಿಸುವುದಕ್ಕೆ ಕರೆಯಿಸಿದೆನು. ನೀನು ಅವರನ್ನು ಶಪಿಸದೆ ಆಶೀರ್ವಾದವನ್ನೇ ಮಾಡಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಈ ನುಡಿಗಳನ್ನು ಕೇಳಿದ ಬಾಲಾಕನು ಅವನಿಗೆ, “ಇದೇನು ನೀವು ಮಾಡಿದ್ದು? ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಾನು ನಿಮ್ಮನ್ನು ಕರೆದೆ. ಶಪಿಸುವುದಕ್ಕೆ ಬದಲು ಅವರನ್ನು ಆಶೀರ್ವದಿಸಿಬಿಟ್ಟಿರಲ್ಲಾ?” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಈ ಮಾತುಗಳನ್ನು ಕೇಳಿ ಬಾಲಾಕನು ಅವನಿಗೆ - ಇದೇನು ನೀನು ನನಗೆ ಮಾಡಿದ್ದು; ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರಿಸಿದೆನು; ನೀನು ಅವರನ್ನು ಶಪಿಸದೆ ಆಶೀರ್ವಾದವನ್ನೇ ಮಾಡಿಬಿಟ್ಟಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಬಾಲಾಕನು ಬಿಳಾಮನಿಗೆ, “ಇದೇನು ನೀನು ನನಗೆ ಮಾಡಿದ್ದು! ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಸಿದೆನು. ನೀನು ಅವರನ್ನು ಶಪಿಸದೆ ಆಶೀರ್ವಾದವನ್ನೇ ಮಾಡಿಬಿಟ್ಟೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ಬಾಲಾಕನು ಬಿಳಾಮನಿಗೆ, “ಇದೇನು ನೀನು ನನಗೆ ಮಾಡಿದ್ದು? ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಯಿಸಿದೆನು, ನೀನು ಅವರನ್ನು ಶಪಿಸದೆ ಸಂಪೂರ್ಣವಾಗಿ ಆಶೀರ್ವದಿಸಿದೆ,” ಎಂದನು. ಅಧ್ಯಾಯವನ್ನು ನೋಡಿ |