Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಬಾಲಾಕನು, “ದಯಮಾಡಿ ನನ್ನ ಕೂಡ ಇನ್ನೊಂದು ಸ್ಥಳಕ್ಕೆ ಬಾ. ಅಲ್ಲಿಂದ ಅವರನ್ನು ನೋಡಬಹುದು. ಆದರೆ ಅವರೆಲ್ಲರನ್ನು ನೋಡದೆ ಸಮೀಪದಲ್ಲಿ ಇರುವವರನ್ನು ಮಾತ್ರ ನೋಡುವಿ. ಅಲ್ಲಿ ನನಗಾಗಿ ಅವರನ್ನು ಶಪಿಸಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಬಾಲಾಕನು, “ದಯಮಾಡಿ ನನ್ನೊಡನೆ ಇನ್ನೊಂದು ಸ್ಥಳಕ್ಕೆ ಬನ್ನಿ. ಅಲ್ಲಿಂದಲೂ ಅವರನ್ನು ನೋಡಬಹುದು. ಆದರೆ ಅವರೆಲ್ಲರೂ ಕಾಣಿಸರು. ಅವರ ಒಂದು ಕೊನೆ ತುಣುಕು ಮಾತ್ರ ಕಾಣಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಬಾಲಾಕನು - ದಯಮಾಡಿ ನನ್ನ ಕೂಡ ಇನ್ನೊಂದು ಸ್ಥಳಕ್ಕೆ ಬಾ; ಅಲ್ಲಿಂದ ಅವರನ್ನು ನೋಡಬಹುದು; ಆದರೆ ಅವರೆಲ್ಲರೂ ಕಾಣಿಸದೆ ಕಡೇಭಾಗವು ಮಾತ್ರ ಕಾಣಿಸುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ಬಾಲಾಕನು, “ದಯಮಾಡಿ ನನ್ನೊಂದಿಗೆ ಇನ್ನೊಂದು ಸ್ಥಳಕ್ಕೆ ಬಾ; ಅಲ್ಲಿಂದ ಅವರನ್ನು ನೋಡಬಹುದು. ಆದರೆ ಅವರೆಲ್ಲರೂ ಕಾಣಿಸದೆ ಕಡೇ ಭಾಗವು ಮಾತ್ರ ಕಾಣಿಸುವುದು. ಅಲ್ಲಿಂದ ನನಗೋಸ್ಕರ ಅವರನ್ನೇ ಶಪಿಸಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಬಾಲಾಕನು ಅವನಿಗೆ, “ನೀನು ಅವರನ್ನು ನೋಡತಕ್ಕ ಮತ್ತೊಂದು ಸ್ಥಳಕ್ಕೆ ನನ್ನೊಂದಿಗೆ ಬಾ, ಅವರನ್ನೆಲ್ಲಾ ನೋಡದೆ ಸಮೀಪದಲ್ಲಿ ಇರುವವರನ್ನು ಮಾತ್ರ ನೋಡುವೆ. ಅಲ್ಲಿಂದ ಅವರನ್ನು ನನಗೋಸ್ಕರ ಶಪಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:13
10 ತಿಳಿವುಗಳ ಹೋಲಿಕೆ  

ಶಪಿಸುವುದು ಅವನಿಗೆ ಇಷ್ಟವಾಗಿತ್ತು, ಅದೇ ಅವನಿಗೆ ಬರಲಿ! ಆಶೀರ್ವದಿಸುವುದು ಅವನಿಗೆ ಇಷ್ಟವಿರಲ್ಲಿಲ್ಲ, ಅದು ಅವನಿಂದ ದೂರವಿರಲಿ!


ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನೂ ಮತ್ತು ಬೆಯೋರನ ಮಗನಾದ ಬಿಳಾಮನು ಹೇಳಿದ ಉತ್ತರವನ್ನೂ ಜ್ಞಾಪಕಮಾಡಿಕೊಳ್ಳಿರಿ. ಯೆಹೋವನ ಧರ್ಮಕಾರ್ಯಗಳು ನಿಮ್ಮ ಗ್ರಹಿಕೆಗೆ ಬರುವ ಹಾಗೆ ನೀವು ಶಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದದ್ದನ್ನೆಲ್ಲಾ ಸ್ಮರಿಸಿಕೊಳ್ಳಿರಿ.


ಆಗ ದೇವರ ಮನುಷ್ಯನು ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ಯೆಹೋವನು ಹೀಗೆನ್ನುತ್ತಾನೆ, ಯೆಹೋವನು ತಗ್ಗುಗಳ ದೇವರಲ್ಲ. ಬೆಟ್ಟಗಳ ದೇವರಾಗಿರುತ್ತಾನೆ ಅಂದುಕೊಂಡು ಬಂದಿರುವ ಈ ಅರಾಮ್ಯರ ಮಹಾ ಸಮೂಹವನ್ನು ನಿನ್ನ ಕೈಗೆ ಒಪ್ಪಿಸುವೆನು. ಇದರಿಂದ ನಾನು ಯೆಹೋವನೇ ಎಂದು ನಿನಗೆ ಗೊತ್ತಾಗುವುದು” ಎಂದು ಹೇಳಿದನು.


ಅರಾಮ್ಯರ ಅರಸನ ಮಂತ್ರಿಗಳು ತಮ್ಮ ಒಡೆಯನಿಗೆ, “ಇಸ್ರಾಯೇಲ್ ದೇವರು ಬೆಟ್ಟಗಳ ದೇವರಾಗಿರುವುದರಿಂದ ಅವರು ನಮ್ಮನ್ನು ಸೋಲಿಸಿದರು. ನಾವು ಅವರೊಡನೆ ಬಯಲಿನಲ್ಲಿ ಯುದ್ಧಮಾಡುವುದಾದರೆ ಹೇಗೂ ಜಯಹೊಂದುವೆವು.


ಅನಂತರ ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು ಇಸ್ರಾಯೇಲರಾದ ನಿಮಗೆ ವಿರೋಧವಾಗಿ ಯುದ್ಧ ಮಾಡುವುದಕ್ಕೆ ಎದ್ದು ನಿಮ್ಮನ್ನು ಶಪಿಸುವುದಕ್ಕೋಸ್ಕರ ಬೆಯೋರನ ಮಗನಾದ ಬಿಳಾಮನನ್ನು ಕರೆಕಳುಹಿಸಿದನು.


ಮರುದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಕರೆದುಕೊಂಡು “ಬಾಳ್” ಎಂಬ ದೇವತೆಯ ಪೂಜಾಸ್ಥಳಗಳಲ್ಲಿದ್ದ ಗುಡ್ಡವನ್ನು ಹತ್ತಿ ಇಸ್ರಾಯೇಲರ ಒಂದು ಭಾಗವನ್ನು ಅಲ್ಲಿಂದ ತೋರಿಸಿದನು.


ಅದಕ್ಕೆ ಬಿಳಾಮನು, “ಯೆಹೋವನು ಹೇಳುವ ಮಾತನ್ನೇ ನಾನು ಹೇಳಬೇಕಾಗಿದೆಯಲ್ಲವೇ?” ಎಂದನು.


ಹೀಗೆ ಬಾಲಾಕನು ಬಿಳಾಮನನ್ನು ಪಿಸ್ಗಾ ಬೆಟ್ಟದ ತುದಿಯಲ್ಲಿರುವ ಚೋಫೀಮ್ ಬಯಲು ಎಂಬ ಸ್ಥಳಕ್ಕೆ ಕರೆದುಕೊಂಡು ಹೋಗಿ ಅಲ್ಲಿಯೂ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಪ್ರತಿಯೊಂದು ಯಜ್ಞವೇದಿಯಲ್ಲಿ ಒಂದು ಹೋರಿಯನ್ನೂ, ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು.


ಆದುದರಿಂದ ನೀನು ದಯಮಾಡಿ ಬಂದು ನನಗೋಸ್ಕರ ಈ ಜನರಿಗೆ ಶಾಪಕೊಡಬೇಕು. ಆಗ ಅವರನ್ನು ಸೋಲಿಸಿ ಈ ದೇಶದಿಂದ ಹೊರಡಿಸಿಬಿಡುವುದಕ್ಕೆ ನನ್ನಿಂದ ಆಗುವುದು. ನಿನ್ನ ಆಶೀರ್ವಾದದಿಂದ ಶುಭವೂ, ನಿನ್ನ ಶಾಪದಿಂದ ಅಶುಭವೂ ಉಂಟಾಗುತ್ತದೆ ಎಂಬುದನ್ನು ನಾನು ಬಲ್ಲೆನು” ಎಂದು ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು