Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೀಗೆ ಬಾಲಾಕನು ಬಿಳಾಮನನ್ನು ಪಿಸ್ಗಾ ಬೆಟ್ಟದ ತುದಿಯಲ್ಲಿರುವ ಚೋಫೀಮ್ ಬಯಲು ಎಂಬ ಸ್ಥಳಕ್ಕೆ ಕರೆದುಕೊಂಡು ಹೋಗಿ ಅಲ್ಲಿಯೂ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಪ್ರತಿಯೊಂದು ಯಜ್ಞವೇದಿಯಲ್ಲಿ ಒಂದು ಹೋರಿಯನ್ನೂ, ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅಲ್ಲಿಂದ ನನ್ನ ಪರವಾಗಿ ಅವರನ್ನು ಶಪಿಸಬೇಕು” ಎಂದು ಹೇಳಿ ಪಿಸ್ಗಾ ಬೆಟ್ಟದ ತುದಿಯಲ್ಲಿರುವ ‘ಚೋಫೀಮ್ ಬೈಲು’ ಎಂಬ ಸ್ಥಳಕ್ಕೆ ಕರೆದುಕೊಂಡು ಹೋದನು. ಅಲ್ಲಿಯೂ ಏಳು ಬಲಿಪೀಠಗಳನ್ನು ಕಟ್ಟಿಸಿ ಪ್ರತಿ ಒಂದು ಪೀಠದಲ್ಲಿ ಒಂದು ಹೋರಿ ಮತ್ತು ಟಗರನ್ನು ದಹನಬಲಿಯಾಗಿ ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅಲ್ಲಿಂದ ನನಗೋಸ್ಕರ ಅವರನ್ನು ಶಪಿಸಬೇಕು ಎಂದು ಹೇಳಿ ಪಿಸ್ಗಾ ಬೆಟ್ಟದ ತುದಿಯಲ್ಲಿರುವ ಚೋಫೀಮ್ ಬೈಲು ಎಂಬ ಸ್ಥಳಕ್ಕೆ ಕರಕೊಂಡುಹೋಗಿ ಅಲ್ಲಿಯೂ ಏಳು ಯಜ್ಞಪೀಠಗಳನ್ನು ಕಟ್ಟಿಸಿ ಪ್ರತಿಯೊಂದು ಪೀಠದಲ್ಲಿ ಒಂದು ಹೋರಿಯನ್ನೂ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಹೀಗೆ ಬಾಲಾಕನು ಬಿಳಾಮನನ್ನು “ಕಾವಲುಗಾರರ ಬೆಟ್ಟಗಳು” ಎಂಬ ಸ್ಥಳಕ್ಕೆ ಕರೆದುಕೊಂಡು ಹೋದನು. ಇದು ಪಿಸ್ಗಾ ಪರ್ವತಶ್ರೇಣಿಯ ತುದಿಯಲ್ಲಿತ್ತು. ಅಲ್ಲಿಯೂ ಏಳು ಯಜ್ಞವೇದಿಕೆಗಳನ್ನು ಕಟ್ಟಿಸಿ ಪ್ರತಿಯೊಂದು ವೇದಿಕೆಯಲ್ಲಿ ಒಂದು ಹೋರಿಯನ್ನು ಮತ್ತು ಒಂದು ಟಗರನ್ನು ಸರ್ವಾಂಗಹೋಮವಾಗಿ ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಹೀಗೆ ಬಾಲಾಕನು ಬಿಳಾಮನನ್ನು ಪಿಸ್ಗಾದ ತುದಿಗೆ ಚೋಫೀಮ್ ಬಯಲಿಗೆ ಕರೆದುಕೊಂಡು ಹೋಗಿ ಏಳು ಬಲಿಪೀಠಗಳನ್ನು ಕಟ್ಟಿ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ, ಒಂದೊಂದು ಟಗರನ್ನೂ ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:14
11 ತಿಳಿವುಗಳ ಹೋಲಿಕೆ  

ಗಿಲ್ಯಾದು ಅಧರ್ಮಮಯವೋ? ಅದು ಶೂನ್ಯದ ಗತಿಗೆ ಬರುವುದು; ಗಿಲ್ಗಾಲಿನಲ್ಲಿ ಗೋಮೇಧವು ನಡೆಯುವುದೋ? ಅಲ್ಲಿನ ಯಜ್ಞವೇದಿಗಳು ಹೊಲದ ನೇಗಿಲ ಗೆರೆಗಳಲ್ಲಿ ಕಲ್ಲುಕುಪ್ಪೆಗಳಾಗಿ ಸಿಕ್ಕುವವು.


ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೊಟ್ಟು ಕೂಲಿಯನ್ನು ಗೊತ್ತುಮಾಡಿದಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಗಿ ಪೂಜೆಮಾಡುವರು.


ಮೋಶೆಯು ಮೋವಾಬ್ಯರ ಮೈದಾನದಿಂದ ಯೆರಿಕೋ ಪಟ್ಟಣಕ್ಕೆ ಎದುರಾಗಿರುವ ನೆಬೋ ಪರ್ವತಕ್ಕೆ ಹೋಗಿ ಪಿಸ್ಗಾ ಎಂಬ ಬೆಟ್ಟದ ಶಿಖರವನ್ನು ಹತ್ತಿದನು. ಆಗ ಯೆಹೋವನು ಕಾನಾನ್ ದೇಶವನ್ನೆಲ್ಲಾ ಅಂದರೆ ದಾನ್ ಪಟ್ಟಣದ ವರೆಗೂ ಗಿಲ್ಯಾದ್ ಸೀಮೆ,


ಅರಾಬಾ ಎಂಬ ತಗ್ಗಿನಲ್ಲಿ ಪಿಸ್ಗಾ ಬೆಟ್ಟದ ಬುಡದಲ್ಲಿರುವ ಅರಾಬ್ ಸಮುದ್ರದ ವರೆಗೆ ಯೊರ್ದನ್ ನದಿಯ ಆಚೆ ಇರುವ ಭಾಗವನ್ನೆಲ್ಲಾ ಸ್ವಾಧೀನಮಾಡಿಕೊಂಡಿದ್ದರು.


ಆದರೆ ಪಿಸ್ಗಾ ಬೆಟ್ಟವನ್ನು ಹತ್ತಿ ತುದಿಯಲ್ಲಿ ನಿಂತು, ನಾಲ್ಕು ದಿಕ್ಕುಗಳಲ್ಲಿ ಸುತ್ತಲೂ ಇರುವ ದೇಶವನ್ನು ಕಣ್ಣು ತುಂಬಾ ನೋಡಬಹುದು.


ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿಯೂ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಸಿದ್ಧಮಾಡು” ಎಂದು ಹೇಳಿದನು


ಬಾಮೋತಿನಿಂದ ಮೋವಾಬ್ಯರ ಬಯಲಿನಲ್ಲಿರುವ ತಗ್ಗಿನಿಂದ ಪಿಸ್ಗಾ ಎಂಬ ಬೆಟ್ಟದ ತುದಿಗೆ ಬಂದರು. ಅಲ್ಲಿಂದ ಯೆಷೀಮೋನ್ ಮರಳುಗಾಡು ಕಾಣಿಸುತ್ತದೆ.


ಆಗ ಬಾಲಾಕನು, “ದಯಮಾಡಿ ನನ್ನ ಕೂಡ ಇನ್ನೊಂದು ಸ್ಥಳಕ್ಕೆ ಬಾ. ಅಲ್ಲಿಂದ ಅವರನ್ನು ನೋಡಬಹುದು. ಆದರೆ ಅವರೆಲ್ಲರನ್ನು ನೋಡದೆ ಸಮೀಪದಲ್ಲಿ ಇರುವವರನ್ನು ಮಾತ್ರ ನೋಡುವಿ. ಅಲ್ಲಿ ನನಗಾಗಿ ಅವರನ್ನು ಶಪಿಸಬೇಕು” ಎಂದನು.


ಬಿಳಾಮನು ಬಾಲಾಕನಿಗೆ, “ನೀನು ಇಲ್ಲೇ ಸರ್ವಾಂಗಹೋಮ ಮಾಡಿರುವ ಸ್ಥಳದಲ್ಲಿ ನಿಂತುಕೋ. ನಾನು ಆ ಕಡೆಗೆ ಹೋಗಿ ಯೆಹೋವನನ್ನು ಎದುರುಗೊಳ್ಳುವೆನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು