Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನು ಬಿಳಾಮನಿಗೆ ಎದುರಾಗಿ ಬಂದು ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟನು. ಆಗ ಅವನು ಹೇಳಿದ್ದೇನೆಂದರೆ, “ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ ಹೀಗೆ ಹೇಳಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರ ಬಿಳಾಮನಿಗೆ ದರ್ಶನಕೊಟ್ಟು ಅವನು ಹೇಳಬೇಕಾದುದನ್ನು ಕಲಿಸಿಕೊಟ್ಟು, “ನೀನು ಬಾಲಾಕನ ಬಳಿಗೆ ಹಿಂದಿರುಗಿ ನಾನು ಹೇಳಿದಂತೆಯೇ ತಿಳಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನು ಬಿಳಾಮನಿಗೆ ಎದುರಾಗಿ ಬಂದು ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು - ನೀನು ಬಾಲಾಕನ ಬಳಿಗೆ ತಿರಿಗಿ ಹೋಗಿ ಹೀಗೆ ಹೀಗೆ ಹೇಳಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನು ಬಿಳಾಮನಿಗೆ ಎದುರಾಗಿ ಬಂದು ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು, “ನೀನು ಬಾಲಾಕನ ಬಳಿಗೆ ಮತ್ತೆ ಹೋಗಿ ಹೀಗೆ ಹೇಳಬೇಕು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಯೆಹೋವ ದೇವರು ಬಿಳಾಮನ ಎದುರಿಗೆ ಬಂದು ಅವನ ಬಾಯಿಯೊಳಗೆ ವಾಕ್ಯವನ್ನಿಟ್ಟು, “ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ ನಾನು ಹೇಳಿದಂತೆಯೇ ತಿಳಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:16
7 ತಿಳಿವುಗಳ ಹೋಲಿಕೆ  

ಯೆಹೋವನು ಬಿಳಾಮನಿಗೆ ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು, “ನೀನು ಬಾಲಾಕನ ಬಳಿಗೆ ಹಿಂತಿರುಗಿ ಹೋಗಿ ಹೀಗೆ ಹೇಳಬೇಕು” ಎಂದು ಆಜ್ಞಾಪಿಸಿದನು.


ಇಸ್ರಾಯೇಲರಿಗೆ ಶುಭವಾಗಬೇಕೆಂಬುದು ಯೆಹೋವನ ಚಿತ್ತವೆಂದು ಬಿಳಾಮನು ತಿಳಿದು ಮೊದಲಿನಂತೆ ಶಕುನ ನೋಡುವುದಕ್ಕೆ ಹೋಗದೆ ಅರಣ್ಯದ ಕಡೆಗೆ ಮುಖವನ್ನು ತಿರುಗಿಸಿಕೊಂಡನು.


ಯೆಹೋವನ ದೂತನು ಬಿಳಾಮನಿಗೆ, “ಈ ಮನುಷ್ಯರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಹೇಳುವ ಮಾತನ್ನೇ ಹೊರತು ಬೇರೆ ಯಾವುದನ್ನೂ ಹೇಳಬಾರದು” ಎಂದು ಹೇಳಿದನು. ಬಿಳಾಮನು ಬಾಲಾಕನ ಪ್ರಧಾನರ ಜೊತೆಯಲ್ಲಿ ಹೊರಟುಹೋದನು.


ಆ ರಾತ್ರಿ ದೇವರು ಬಿಳಾಮನ ಬಳಿಗೆ ಬಂದು, “ಆ ಮನುಷ್ಯರು ನಿನ್ನನ್ನು ಕರೆಯುವುದಕ್ಕೆ ಬಂದಿರುವುದರಿಂದ ಎದ್ದು ಅವರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಆಜ್ಞಾಪಿಸುವ ಪ್ರಕಾರವೇ ನೀನು ಮಾಡಬೇಕು” ಎಂದನು.


ಬಿಳಾಮನು ಬಾಲಾಕನಿಗೆ, “ನೀನು ಇಲ್ಲೇ ಸರ್ವಾಂಗಹೋಮ ಮಾಡಿರುವ ಸ್ಥಳದಲ್ಲಿ ನಿಂತುಕೋ. ನಾನು ಆ ಕಡೆಗೆ ಹೋಗಿ ಯೆಹೋವನನ್ನು ಎದುರುಗೊಳ್ಳುವೆನು” ಎಂದು ಹೇಳಿದನು.


ಬಿಳಾಮನು ಬಾಲಾಕನ ಬಳಿಗೆ ಬಂದಾಗ ಬಾಲಾಕನು ತಾನು ಸರ್ವಾಂಗಹೋಮವನ್ನು ಸಮರ್ಪಿಸಿದ ವೇದಿಯ ಹತ್ತಿರ ನಿಂತಿದ್ದನು. ಮೋವಾಬ್ಯರ ಪ್ರಧಾನರು ಅವನ ಸಂಗಡ ಇದ್ದರು. ಬಾಲಾಕನು, “ಯೆಹೋವನು ಏನು ಹೇಳಿದ್ದಾನೆ?” ಎಂದನು.


ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೋಸ್ಕರ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು