Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ, “ಬಾಲಾಕನು ನನ್ನನ್ನು ಆರಾಮಿನಿಂದ ಕರೆಯಿಸಿದನು, ಮೋವಾಬ್ಯರ ಅರಸನು ಪೂರ್ವ ಪರ್ವತಗಳಿಂದ ನನ್ನನ್ನು ಬರಮಾಡಿದನು, ‘ನೀನು ಬಂದು ಯಾಕೋಬ ವಂಶದವರನ್ನು ನನಗಾಗಿ ಶಪಿಸಬೇಕು.’ ‘ಇಸ್ರಾಯೇಲರನ್ನು ಎದುರಿಸುವುದಕ್ಕೆ ಬಾ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಬಾಲಾಕನು ನನ್ನನ್ನು ಕರೆಸಿದ ಅರಾಮಿನಿಂದ ಮೋವಾಬರಸ ನನ್ನ ಬರಮಾಡಿದ ಮೂಡಲಗುಡ್ಡೆಗಳಿಂದ. ‘ನನ್ನ ಪರವಾಗಿ ಯಕೋಬವಂಶಜರನ್ನು ಶಪಿಸೆಂದ’ ‘ಹಾಕು ಇಸ್ರಯೇಲರಿಗೆ ಧಿಕ್ಕಾರ’ ಎಂದು ಹೇಳಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಬಿಳಾಮನು ಪದ್ಯರೂಪವಾಗಿ ನುಡಿದದ್ದೇನಂದರೆ - ಬಾಲಾಕನು ನನ್ನನ್ನು ಅರಾವಿುನಿಂದ ಕರಿಸಿದನು; ಮೋವಾಬ್ಯರ ಅರಸನು ಮೂಡಲಬೆಟ್ಟಗಳಿಂದ ನನ್ನನ್ನು ಬರಮಾಡಿದನು. ನೀನು ಬಂದು ಯಾಕೋಬವಂಶದವರನ್ನು ನನಗೋಸ್ಕರ ಶಪಿಸಬೇಕು; ಇಸ್ರಾಯೇಲ್ಯರಿಗೆ ದುರ್ಗತಿಯುಂಟಾಗಲಿ ಎಂದು ಆಕ್ರೋಶಿಸಬೇಕು ಎಂದು ನನಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಬಿಳಾಮನು ಹೀಗೆ ಹೇಳಿದನು: “ಮೋವಾಬ್ಯರ ಅರಸನಾದ ಬಾಲಾಕನು ನನ್ನನ್ನು ಅರಾಮಿನ ಪೂರ್ವ ದಿಕ್ಕಿನ ಬೆಟ್ಟಗಳಿಂದ ನನ್ನನ್ನು ಕರೆಸಿದನು. ‘ನೀನು ಬಂದು ನನಗೋಸ್ಕರ ಯಾಕೋಬ್ಯರನ್ನು ಶಪಿಸು; ಇಸ್ರೇಲರ ವಿರುದ್ಧ ಮಾತನಾಡು’ ಎಂದು ಬಾಲಾಕನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಅವನು ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಬಾಲಾಕನು ನನ್ನನ್ನು ಅರಾಮಿನಿಂದಲೂ, ಮೋವಾಬಿನ ಅರಸನು ಪೂರ್ವ ಪರ್ವತಗಳಿಂದಲೂ ಕರೆಯಿಸಿ, ‘ನನಗೋಸ್ಕರ ಯಾಕೋಬನನ್ನು ಶಪಿಸಿ ಬಾ, ಇಸ್ರಾಯೇಲನ್ನು ಎದುರಿಸುವುದಕ್ಕೆ ಬಾ,’ ಎಂದು ನನಗೆ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:7
31 ತಿಳಿವುಗಳ ಹೋಲಿಕೆ  

ಯಾಕೆಂದರೆ ನೀವು ಐಗುಪ್ತದೇಶದಿಂದ ಬಂದಾಗ ಅಮ್ಮೋನಿಯರು ಅನ್ನಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; ಮೋವಾಬ್ಯರು ನಿಮ್ಮನ್ನು ಶಪಿಸುವುದಕ್ಕಾಗಿ ಬೆಯೋರನ ಮಗನಾದ ಬಿಳಾಮನಿಗೆ ಹಣಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮಿನ ಪೆತೋರ್ ಊರಿನಿಂದ ಅವನನ್ನು ಕರೆಯಿಸಿದರು.


ಹೀಗೆ ಪ್ರವಾದಿಸಿದನು, “ಬೆಯೋರನ ಮಗನಾದ ಬಿಳಾಮನು ಹೇಳಿದ್ದು, ಮನೋದೃಷ್ಟಿಯಿಂದ ನೋಡುವ ಪುರುಷನು ನುಡಿದದ್ದು.


ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ, “ಬಾಲಾಕನೇ, ಎದ್ದು ಕಿವಿಗೊಟ್ಟು ಕೇಳು. ಚಿಪ್ಪೋರನ ಮಗನೇ, ನನ್ನ ಮಾತನ್ನು ಲಾಲಿಸು.


ಆ ದಿನದಲ್ಲಿ ಜನರು ನಿಮ್ಮ ವಿಷಯವಾಗಿ ಅಪಹಾಸ್ಯ ಮಾಡಿ ಲಾವಣಿಕಟ್ಟಿ ಹಾಡುವರು. ‘ಅಯ್ಯೋ, ನಾವು ತೀರಾ ಸೂರೆಹೋದೆವಲ್ಲಾ ಯೆಹೋವನು ನಮ್ಮವರ ಸ್ವತ್ತನ್ನು ಪರಾಧೀನಮಾಡುತ್ತಿದ್ದಾನೆ. ಅಯ್ಯೋ, ಅದನ್ನು ನಮ್ಮಿಂದ ತೊಲಗಿಸಿದ್ದಾನಲ್ಲಾ, ನಮ್ಮ ಭೂಮಿಯನ್ನು ದೇವದ್ರೋಹಿಗಳಿಗೆ ಹಂಚಿಕೊಟ್ಟಿದ್ದಾನೆ’” ಎಂದು ಶೋಕಗೀತವಾಗಿ ಹಾಡುವರು.


ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು. ಪೂರ್ವಕಾಲದ ಗೂಢಾರ್ಥಗಳನ್ನು ಬಹಿರಂಗಪಡಿಸುವೆನು.


ತರುವಾಯ ಯೋಬನು ಪ್ರಸ್ತಾಪವನ್ನೆತ್ತಿ ಇಂತೆಂದನು,


ಅವನು ಮತ್ತೂ ಕಡೆಯದಾಗಿ ಪ್ರವಾದಿಸಿದ್ದೇನೆಂದರೆ, “ಅಯ್ಯೋ! ದೇವರು ಹೀಗೆ ಮಾಡುವಾಗ ಯಾರು ಉಳಿಯುವರು?


ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದನು, “ಬೆಯೋರನ ಮಗನಾದ ಬಿಳಾಮನಿಗುಂಟಾದ ದೈವೋಕ್ತಿ, ಮನೋದೃಷ್ಟಿಯಿಂದ ನೋಡುವ ಪುರುಷನು ನುಡಿದದ್ದು.


ಯೇಸು ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದ್ದಾನೆ ಎಂದು ಅವರು ತಿಳಿದುಕೊಂಡು ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡುತ್ತಿದ್ದರು. ಆದರೆ ಜನರಿಗೆ ಭಯಪಟ್ಟು ಆತನನ್ನು ಬಿಟ್ಟುಹೋದರು.


ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು.”


ಕುಪ್ಪಳಿಸುತ್ತಿರುವ ಗುಬ್ಬಿಯಂತೆ, ಹಾರಾಡುವ ಬಾನಕ್ಕಿಯ ಹಾಗೆ, ಕಾರಣವಿಲ್ಲದೆ ಕೊಟ್ಟ ಶಾಪವು ಎರಗಿ ನಿಲ್ಲದು.


ಆಗ ಯೋಬನು ಮತ್ತೆ ಪ್ರಸ್ತಾಪಿಸಿ ಹೀಗೆಂದನು,


ಎರಡನೆಯವನು ಅಹೋಹ್ಯನಾದ ದೋದೋ ಎಂಬುವವನ ಮಗನಾಗಿರುವ ಎಲ್ಲಾಜಾರನು. ಫಿಲಿಷ್ಟಿಯರು ಯುದ್ಧಕ್ಕೆ ಕೂಡಿಕೊಂಡಾಗ ಅವರನ್ನು ನಿಂದಿಸುವುದಕ್ಕೆ ದಾವೀದನ ಜೊತೆಯಲ್ಲಿ ಹೋದ ಮೂರು ಮಂದಿ ಶೂರರಲ್ಲಿ ಇವನೂ ಒಬ್ಬನಾಗಿದ್ದನು.


ಹೀಗೆ, “ನಾನು ಬಾಯಿದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಲೋಕದ ಆರಂಭದಿಂದ ಮರೆಯಾಗಿದ್ದವುಗಳನ್ನು ಗೋಚರಪಡಿಸುವೆನು” ಎಂದು ಪ್ರವಾದಿಯ ಮುಖಾಂತರ ನುಡಿದ ಮಾತು ನೆರವೇರಿತು.


“ಆದರೆ ಹೀಗೆ ಅವನ ದುರಾಶೆಯ ಪಾಶಕ್ಕೆ ಗುರಿಯಾದವರು ಅವನ ಬಗ್ಗೆ ತಿಳಿದು ಗೇಲಿ, ಅಪಹಾಸ್ಯದ ಲಾವಣಿ ಗೀತೆಗಳನ್ನು ರಚಿಸಿ ಹಾಡುವರು. ‘ಅನ್ಯರ ವಸ್ತುಗಳನ್ನು ಅಡವಿಟ್ಟುಕೊಂಡು ಐಶ್ವರ್ಯ ಸಂಪಾದಿಸುವವನ ಗತಿಯನ್ನು ಏನೆಂದು ಹೇಳುವುದು, ಅವನು ಎಷ್ಟು ಕಾಲ ಹೀಗೆ ಮಾಡುವನು!’


“ಆಗ ನಾನು, ‘ಅಯ್ಯೋ, ಕರ್ತನಾದ ಯೆಹೋವನೇ, ಇವನು ಒಗಟುಗಾರನಲ್ಲವೇ?’ ಎಂದು ಈ ಜನರು ನನ್ನ ವಿಷಯವಾಗಿ ಅಂದುಕೊಳ್ಳುತ್ತಾರೆ” ಎಂಬುದಾಗಿ ಅರಿಕೆಮಾಡಿದೆನು.


“ನರಪುತ್ರನೇ, ನೀನು ಇಸ್ರಾಯೇಲ್ ವಂಶದವರಿಗೆ ಈ ಸಾಮ್ಯವನ್ನು ಒಗಟಾಗಿ ಹೇಳು,


ಅವನು ಇಸ್ರಾಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮಿಯಾನನ ಮಗ ಯೋನಾತಾನನು ಅವನನ್ನು ಕೊಂದು ಹಾಕಿದನು.


ಆಗ ದಾವೀದನು ಅವನಿಗೆ, “ನೀನು ಈಟಿ, ಕತ್ತಿ, ಬರ್ಜಿಗಳೊಡನೆ ನನ್ನ ಬಳಿಗೆ ಬರುತ್ತೀ. ನಾನಾದರೋ ನೀನು ಹೀಯಾಳಿಸಿದಂಥ ಸೇನಾಧೀಶ್ವರನೂ, ಇಸ್ರಾಯೇಲ್ಯರ ಯುದ್ಧಭಟರ ದೇವರೂ ಆಗಿರುವ ಯೆಹೋವನ ನಾಮದೊಡನೆ ನಿನ್ನ ಬಳಿಗೆ ಬಂದಿದ್ದೇನೆ.


ನಿನ್ನ ಸೇವಕನಿಂದ ಕೊಲ್ಲಲ್ಪಟ್ಟ ಸಿಂಹಕ್ಕೂ, ಕರಡಿಗೂ ಆದ ಗತಿಯೇ ಜೀವಸ್ವರೂಪನಾದ ದೇವರ ಸೈನ್ಯವನ್ನು ನಿಂದಿಸುವಂಥ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು.


ಮತ್ತು ಅವನು, “ಈಹೊತ್ತು ಇಸ್ರಾಯೇಲ ಸೈನ್ಯದವರನ್ನು ಕುರಿತು. ನನ್ನೊಡನೆ ಕಾಳಗಕ್ಕೆ ನಿಮ್ಮಲ್ಲಿಂದ ಒಬ್ಬ ಮನುಷ್ಯನನ್ನು ಕಳುಹಿಸಿರಿ ನೋಡೋಣ” ಎಂದು ಸವಾಲು ಹಾಕಿದನು.


ಬಳಿಕ ಅವನು ಕೇನ್ಯರನ್ನು ನೋಡಿ ಅವರ ವಿಷಯದಲ್ಲಿ ಪ್ರವಾದಿಸಿದ್ದೇನೆಂದರೆ, “ನಿಮ್ಮ ನಿವಾಸ ಸ್ಥಳವು ಶಾಶ್ವತವಾಗಿಯೇ ತೋರುತ್ತದೆ, ಬೆಟ್ಟದ ತುದಿಯಲ್ಲಿ ಗೂಡನ್ನು ಮಾಡಿಕೊಂಡಿದ್ದೀರಿ.


ಏಕೆಂದರೆ ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು. ನೀನು ಏನು ಹೇಳಿದರೂ ಅದನ್ನು ಮಾಡುತ್ತೇನೆ. ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸಬೇಕು’” ಎಂದನು.


‘ಒಂದು ಜನಾಂಗವು ಐಗುಪ್ತ ದೇಶದಿಂದ ಹೊರಟು ಬಂದಿದೆ. ಅವರು ಭೂಮಿಯನ್ನೆಲ್ಲಾ ಆವರಿಸಿಕೊಂಡಿದ್ದಾರೆ; ನೀನು ಬಂದು ಅವರಿಗೆ ಶಾಪಕೊಡಬೇಕು; ಕೊಟ್ಟರೆ ಅವರನ್ನು ಸೋಲಿಸಿ ಹೊರಡಿಸಿಬಿಡುವುದಕ್ಕೆ ನನ್ನಿಂದ ಆಗುವುದು’” ಎಂದು ಹೇಳಿಕಳುಹಿಸಿದ್ದಾನೆ ಎಂದು ಉತ್ತರಕೊಟ್ಟನು.


ಯಾಕೋಬನು ತನ್ನ ತಂದೆತಾಯಿಗಳ ಮಾತಿಗೆ ವಿಧೇಯನಾಗಿ ಪದ್ದನ್ ಅರಾಮಿಗೆ ಹೋದದ್ದನ್ನೂ ಸಹ ಏಸಾವನು ನೋಡಿದನು.


ಪದ್ದನ್ ಅರಾಮ್ ದೇಶದಲ್ಲಿರುವ ನಿನ್ನ ತಾಯಿಯ ತಂದೆಯಾದ ಬೆತೂವೇಲನ ಮನೆಗೆ ಹೊರಟು ಹೋಗು. ಅಲ್ಲಿ ನಿನ್ನ ತಾಯಿಯ ಸಹೋದರನಾದ ಲಾಬಾನನ ಹೆಣ್ಣು ಮಕ್ಕಳಲ್ಲಿ ಒಬ್ಬಳನ್ನು ಮದುವೆ ಮಾಡಿಕೋ.


ಶೇಮನ ಮಕ್ಕಳು - ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್ ಎಂಬವರು.


ಬಿಳಾಮನು ಬಾಲಾಕನ ಬಳಿಗೆ ಹಿಂತಿರುಗಿ ಬಂದಾಗ ಬಾಲಾಕನು ತಾನು ಸರ್ವಾಂಗಹೋಮವನ್ನು ಸಮರ್ಪಿಸಿದ್ದ ಯಜ್ಞವೇದಿಯ ಹತ್ತಿರ ನಿಂತಿದ್ದನು. ಮೋವಾಬ್ಯರ ಪ್ರಧಾನರೆಲ್ಲರೂ ಅವನ ಬಳಿಯಲ್ಲಿದ್ದರು.


ಕೇಡಿನ ದಿನಗಳಲ್ಲಿ ಏಕೆ ಭಯಪಡಬೇಕು? ಶತ್ರುಗಳು ಮೋಸದಿಂದ ಸುತ್ತಿಕೊಂಡಿರುವಾಗ ನಾನು ಏಕೆ ಹೆದರಬೇಕು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು