ಅರಣ್ಯಕಾಂಡ 23:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಬಂಡೆಗಳ ಶಿಖರದಿಂದ ನಾನು ಅವರನ್ನು ನೋಡುತ್ತೇನೆ; ಗುಡ್ಡದಿಂದ ಅವರನ್ನು ದೃಷ್ಟಿಸುತ್ತೇನೆ. ಆ ಜನಾಂಗವು ಪ್ರತ್ಯೇಕವಾಗಿ ವಾಸಿಸುವುದು. ಆ ಜನಾಂಗವು ಇತರ ಜನಾಂಗಗಳಂತೆ ಸಾಧಾರಣ ಜನರೆಂದು ಎಣಿಸಲ್ಪಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಾನವರನ್ನು ಕಂಡೆ ಬೆಟ್ಟದ ಶಿಖರದಿಂದ ನೋಡಿದೆನವರನ್ನು ಗುಡ್ಡದೆತ್ತರದಿಂದ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಬೆಟ್ಟದ ಶಿಖರದಿಂದ ನಾನು ಅವರನ್ನು ಕಂಡೆನು; ಗುಡ್ಡದಿಂದ ಅವರನ್ನು ನೋಡಿದೆನು. ಆ ಜನಾಂಗವು ತಾನು ಇತರ ಜನಾಂಗಗಳಂತಲ್ಲವೆಂದು ಭಾವಿಸಿಕೊಂಡು ಪ್ರತ್ಯೇಕವಾಗಿ ವಾಸಿಸುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಬೆಟ್ಟದ ಶಿಖರದಿಂದ ಅವರನ್ನು ನಾನು ನೋಡಿದೆನು; ಗುಡ್ಡದಿಂದ ಅವರನ್ನು ಕಂಡೆನು. ಅವರು ತಮ್ಮನ್ನು ಇತರ ಜನಾಂಗಗಳಿಗಿಂತ ಬೇರೆಯಾದವರು ಎಂದು ಪರಿಗಣಿಸಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಬೆಟ್ಟಗಳ ತುದಿಯಿಂದ ಅವರನ್ನು ನೋಡುತ್ತೇನೆ. ಎತ್ತರದ ಗುಡ್ಡಗಳಿಂದ ಅವರನ್ನು ದೃಷ್ಟಿಸಿದ್ದೇನೆ. ನಾನು ಆ ಪ್ರತ್ಯೇಕವಾಗಿ ವಾಸಿಸುವ ಜನರನ್ನು ನೋಡುತ್ತೇನೆ. ಆ ಜನಾಂಗವು ತಾನು ಇತರ ಜನಾಂಗಗಳಂತೆ ಸಾಧಾರಣವೆಂದು ಎಣಿಸುವುದಿಲ್ಲ. ಅಧ್ಯಾಯವನ್ನು ನೋಡಿ |
ಹಾಮಾನನು ಅರಸನಾದ ಅಹಷ್ವೇರೋಷನಿಗೆ, “ನಿನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗವಿರುತ್ತದೆ; ಅದು ಇತರ ಜನಾಂಗಗಳವರ ಮಧ್ಯದಲ್ಲಿ ಹರಡಿದ್ದರೂ ಎಲ್ಲರಿಂದ ಪ್ರತ್ಯೇಕವಾಗಿಯೇ ಇರುತ್ತದೆ. ಆ ಜನಾಂಗಗಳವರ ನಿಯಮಗಳು ಇತರ ಎಲ್ಲಾ ಜನಾಂಗಗಳವರ ನಿಯಮಗಳಿಗಿಂತ ಭಿನ್ನವಾಗಿರುತ್ತವೆ. ಅರಸನ ನಿಯಮಗಳನ್ನಂತೂ ಅವರು ಅನುಸರಿಸುವುದೇ ಇಲ್ಲ, ಅರಸನು ಅವರನ್ನು ಸುಮ್ಮನೆ ಬಿಡುವುದು ಉಚಿತವಲ್ಲ.