Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದಕಾರಣ ನನ್ನನ್ನು ಬಿಟ್ಟು ನಿನ್ನ ಊರಿಗೆ ಹೋಗಿಬಿಡು. ನಿನ್ನನ್ನು ಬಹಳವಾಗಿ ಸನ್ಮಾನಿಸಿ ಘನಪಡಿಸುವೆನೆಂದು ಹೇಳಿಕೊಂಡೆನು. ಆದರೆ ನಿನಗೆ ಸನ್ಮಾನಮಾಡದಂತೆ ಯೆಹೋವನು ಅಡ್ಡಿಮಾಡಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆದುದರಿಂದ ನಿನ್ನ ಊರಿಗೆ ತೆರಳು. ನಿನ್ನನ್ನು ಬಹಳವಾಗಿಸನ್ಮಾನಿಸಬೇಕೆಂದಿದ್ದೆ. ಆದರೆ ನಿನಗೆ ಸನ್ಮಾನ ಕೂಡದೆಂದು ಸರ್ವೇಶ್ವರ ಆಜ್ಞೆಮಾಡಿದ್ದಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆದಕಾರಣ ನಿನ್ನ ಊರಿಗೆ ಹೋಗಿಬಿಡು; ನಿನ್ನನ್ನು ಬಹಳವಾಗಿ ಘನಪಡಿಸುವೆನೆಂದು ಹೇಳಿಕೊಂಡೆನು; ಆದರೆ ನಿನಗೆ ಘನತೆಯುಂಟಾಗದಂತೆ ಯೆಹೋವನು ಅಡ್ಡಿಮಾಡಿದ್ದಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದ್ದರಿಂದ ನೀನೀಗ ನೇರವಾಗಿ ಮನೆಗೆ ಹೋಗಿಬಿಡು. ನಿನಗೆ ಹೆಚ್ಚು ಹಣ ಕೊಡುವುದಾಗಿ ಆಲೋಚಿಸಿದ್ದೆನು. ಆದರೆ ನೀನು ನಿನ್ನ ಬಹುಮಾನವನ್ನು ಕಳೆದುಕೊಳ್ಳುವಂತೆ ಯೆಹೋವನು ಮಾಡಿದನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಈಗ ನಿನ್ನ ಸ್ಥಳಕ್ಕೆ ಓಡಿಹೋಗು. ನಾನು ನಿನ್ನನ್ನು ಬಹು ಗೌರವಿಸಬೇಕೆಂದಿದ್ದೆ. ಆದರೆ ಇಗೋ, ಯೆಹೋವ ದೇವರು ನಿನಗೆ ಘನತೆ ಬಾರದಂತೆ ತಡೆದಿದ್ದಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:11
10 ತಿಳಿವುಗಳ ಹೋಲಿಕೆ  

ಏಕೆಂದರೆ ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು. ನೀನು ಏನು ಹೇಳಿದರೂ ಅದನ್ನು ಮಾಡುತ್ತೇನೆ. ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸಬೇಕು’” ಎಂದನು.


ಬಾಲಾಕನು ಬಿಳಾಮನನ್ನು ಕಂಡಾಗ, “ನಿನ್ನನ್ನು ಅವಸರದಿಂದ ಕರೆಯುವುದಕ್ಕೆ ದೂತರನ್ನು ಕಳುಹಿಸಿದೆನಲ್ಲಾ? ನೀನು ಏಕೆ ಆಗಲೇ ಬರಲಿಲ್ಲ? ನಿನ್ನನ್ನು ಘನಪಡಿಸುವುದಕ್ಕೆ ನಾನು ಸಮರ್ಥನಲ್ಲವೆಂದು ಭಾವಿಸುತ್ತೀಯೋ?” ಎಂದನು.


ನೀವು ಪ್ರಯಾಸಪಟ್ಟು ಮಾಡಿದವುಗಳನ್ನು, ಕಳೆದುಕೊಳ್ಳದೆ ಪೂರ್ಣ ಪ್ರತಿಫಲವನ್ನು ಹೊಂದುವಂತೆ ಜಾಗರೂಕರಾಗಿರಿ.


ಇಷ್ಟೇ ಅಲ್ಲದೆ, ನನ್ನ ಕರ್ತನಾದ ಕ್ರಿಸ್ತಯೇಸುವನ್ನರಿಯುವುದೇ ಅತಿ ಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿಮಿತ್ತ ನಾನು ಎಲ್ಲವನ್ನೂ ಕಳೆದುಕೊಂಡು ಅವುಗಳನ್ನು ಕಸವೆಂದೆಣಿಸುತ್ತೇನೆ.


ಆದರೆ ಪೇತ್ರನು ಅವನಿಗೆ, “ನಿನ್ನ ಬೆಳ್ಳಿಯು ನಿನ್ನ ಕೂಡ ಹಾಳಾಗಿಹೋಗಲಿ. ದೇವರ ವರವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಭಾವಿಸುತ್ತೀಯೋ?


ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆಹೊಡೆದು ಅವನಿಗೆ, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆದೆನು. ಆದರೆ ಇಗೋ, ನೀನು ಅವರನ್ನು ಮೂರು ಸಾರಿಯೂ ಆಶೀರ್ವದಿಸಿದೆ.


ಅದಕ್ಕೆ ಬಿಳಾಮನು ಬಾಲಾಕನಿಗೆ, “ನೀನು ನನ್ನ ಬಳಿ ಕಳುಹಿಸಿದ ಸೇವಕನಿಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು