Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ‘ಬಾಲಾಕನು ನನಗೆ ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರವನ್ನು ದಾನಮಾಡಿದರೂ ನಾನು ಯೆಹೋವನ ಆಜ್ಞೆಯನ್ನು ಮೀರಿ ನನ್ನ ಇಷ್ಟದಂತೆ ಒಳ್ಳೇಯದನ್ನಾದರೂ, ಕೆಟ್ಟದ್ದನ್ನಾದರೂ ಮಾಡಲಾರೆ. ಯೆಹೋವನು ಏನು ಹೇಳುತ್ತಾನೋ ಅದನ್ನೇ ಮಾತನಾಡುವೆನು ಎಂದು ಹೇಳಲಿಲ್ಲವೋ?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮಾಡುವೆನೆಂದು ನೀನು ನನ್ನ ಬಳಿಗೆ ಕಳಿಸಿದ ದೂತರಿಗೆ ನಾನು ಹೇಳಲಿಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ‘ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿಬಂಗಾರಗಳನ್ನು ಕೊಟ್ಟರೂ, ನನ್ನ ಹೃದಯದಿಂದ ಒಳ್ಳೆಯದನ್ನಾದರೂ, ಕೆಟ್ಟದ್ದನ್ನಾದರೂ ಮಾಡುವುದಕ್ಕೆ ಯೆಹೋವ ದೇವರ ಆಜ್ಞೆಯನ್ನು ಮೀರಲಾರೆನು. ಯೆಹೋವ ದೇವರು ಏನು ಹೇಳುತ್ತಾರೋ, ಅದನ್ನೇ ಹೇಳುವೆನೆಂದು ನಾನು ಹೇಳಲಿಲ್ಲವೋ’? ಈಗ, ನನ್ನ ಜನರ ಬಳಿಗೆ ಹೋಗುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:13
6 ತಿಳಿವುಗಳ ಹೋಲಿಕೆ  

ಆ ರಾತ್ರಿ ದೇವರು ಬಿಳಾಮನ ಬಳಿಗೆ ಬಂದು, “ಆ ಮನುಷ್ಯರು ನಿನ್ನನ್ನು ಕರೆಯುವುದಕ್ಕೆ ಬಂದಿರುವುದರಿಂದ ಎದ್ದು ಅವರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಆಜ್ಞಾಪಿಸುವ ಪ್ರಕಾರವೇ ನೀನು ಮಾಡಬೇಕು” ಎಂದನು.


ಅದಕ್ಕೆ ಬಿಳಾಮನು ಬಾಲಾಕನ ಸೇವಕರಿಗೆ, “ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರ ಕೊಟ್ಟರೂ ನಾನು ನನ್ನ ದೇವರಾದ ಯೆಹೋವನ ಆಜ್ಞೆಯನ್ನು ಮೀರಿ ಸಣ್ಣ ಕೆಲಸವನ್ನಾಗಲಿ, ದೊಡ್ಡ ಕೆಲಸವನ್ನಾಗಲಿ ಮಾಡಲಾರೆನು.


ಆಗ ಮೋಶೆ ಜನರಿಗೆ, “ಈ ಕಾರ್ಯಗಳೆಲ್ಲಾ ನನ್ನ ಆಲೋಚನೆಯಿಂದ ಆಗಲಿಲ್ಲವೆಂದೂ ಮತ್ತು ಯೆಹೋವನೇ ಇವುಗಳನ್ನು ನಡಿಸುವುದಕ್ಕೆ ನನ್ನನ್ನು ಕಳುಹಿಸಿದನೆಂದೂ ನೀವೇ ತಿಳಿದುಕೊಳ್ಳುವಿರಿ.


ಆದರೆ ದೇವರ ಮನುಷ್ಯನು ಅರಸನಿಗೆ, “ನೀನು ನನಗೆ ನಿನ್ನ ಆಸ್ತಿಯಲ್ಲಿ ಅರ್ಧವನ್ನು ಕೊಟ್ಟರೂ, ನಾನು ನಿನ್ನ ಸಂಗಡ ಬರುವುದಿಲ್ಲ. ಇಲ್ಲಿ ಅನ್ನ ಪಾನಗಳನ್ನು ತೆಗೆದುಕೊಳ್ಳುವುದಿಲ್ಲ.


ಅದಕ್ಕೆ ಮೀಕಾಯೆಹುವು, “ಯೆಹೋವನಾಣೆ, ಯೆಹೋವನು ಹೇಳುವುದನ್ನೇ ನುಡಿಯುತ್ತೇನೆ” ಎಂದು ಉತ್ತರಕೊಟ್ಟನು.


ಬಿಳಾಮನು ಅವರಿಗೆ, “ಈ ರಾತ್ರಿ ನೀವು ಇಲ್ಲಿಯೇ ಇಳಿದುಕೊಂಡಿರಿ. ಯೆಹೋವನು ನನಗೆ ಹೇಳುವ ಮಾತುಗಳನ್ನು ನಿಮಗೆ ತಿಳಿಸುವೆನು” ಎಂದು ಹೇಳಿದನು. ಆಗ ಆ ರಾತ್ರಿ ಮೋವಾಬ್ಯರ ಪ್ರಧಾನರು ಬಿಳಾಮನ ಬಳಿಯಲ್ಲಿ ಇಳಿದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು