Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಈಗ ನಾನು ನನ್ನ ಜನರ ಬಳಿಗೆ ಹೋಗುತ್ತೇನೆ. ಆದರೆ ಕಡೆಗೆ ಆ ಜನರು ನಿನ್ನ ಜನರಿಗೆ ಮುಂದಿನ ದಿನಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗಲಿ, ನಾನು ನನ್ನ ಸ್ವಜನರ ಬಳಿಗೆ ತೆರಳುತ್ತೇನೆ. ಆದರೆ ಈ ಜನರು ನಿನ್ನ ಜನರಿಗೆ ಕೊನೆಗೆ ಏನು ಮಾಡುವರೋ ಅದನ್ನು ತಿಳಿಸುತ್ತೇನೆ ಕೇಳು,” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗಲಿ; ನಾನು ನನ್ನ ಸ್ವಜನರ ಬಳಿಗೆ ಹೋಗುತ್ತೇನೆ. ಆದರೆ ಕಡೆಗೆ ಆ ಜನರು ನಿನ್ನ ಜನರಿಗೆ ಏನು ಮಾಡುವರೋ ಅದನ್ನು ನಿನಗೆ ತಿಳಿಸುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಗಲಿ, ನಾನು ನನ್ನ ಸ್ವಜನರ ಬಳಿಗೆ ಹೋಗುತ್ತೇನೆ. ಆದರೆ ಮುಂದೆ ಆ ಜನರು ನಿನ್ನ ಜನರಿಗೆ ಏನು ಮಾಡುವರೋ ಅದನ್ನು ನಿನಗೆ ತಿಳಿಸುತ್ತೇನೆ, ಕೇಳು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಬಾ, ಈ ಜನರು ನಿನ್ನ ಜನರಿಗೆ ಕಡೇ ದಿವಸಗಳಲ್ಲಿ ಏನು ಮಾಡುವರೋ, ಅದನ್ನು ನಿನಗೆ ತಿಳಿಸುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:14
16 ತಿಳಿವುಗಳ ಹೋಲಿಕೆ  

ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನೂ ಮತ್ತು ಬೆಯೋರನ ಮಗನಾದ ಬಿಳಾಮನು ಹೇಳಿದ ಉತ್ತರವನ್ನೂ ಜ್ಞಾಪಕಮಾಡಿಕೊಳ್ಳಿರಿ. ಯೆಹೋವನ ಧರ್ಮಕಾರ್ಯಗಳು ನಿಮ್ಮ ಗ್ರಹಿಕೆಗೆ ಬರುವ ಹಾಗೆ ನೀವು ಶಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದದ್ದನ್ನೆಲ್ಲಾ ಸ್ಮರಿಸಿಕೊಳ್ಳಿರಿ.


ಯಾಕೋಬನು ತನ್ನ ಮಕ್ಕಳನ್ನು ಕರೆಯಿಸಿ ಅವರಿಗೆ, ನೀವೆಲ್ಲರೂ ಕೂಡಿ ಬನ್ನಿರಿ. ಮುಂದಿನ ದಿನಗಳಲ್ಲಿ ನಿಮಗೆ ಸಂಭವಿಸುವುದನ್ನು ನಿಮಗೆ ತಿಳಿಸುತ್ತೇನೆ.


ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ. ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ ಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು ಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ.


ಆದರೆ ಕಡೆ ದಿನಗಳಲ್ಲಿ ಕಠಿಣಕಾಲಗಳು ಬರುವವೆಂಬುದನ್ನು ತಿಳಿದುಕೋ.


ಆದರೆ ರಹಸ್ಯಗಳನ್ನು ಪ್ರಕಟಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಆತನು ಪರಲೋಕದಲ್ಲಿದ್ದಾನೆ. ಮುಂದೆ ನಡೆಯತಕ್ಕದ್ದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ.


ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವ ತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


“ಕಡೆ ದಿನಗಳಲ್ಲಿ ನಾನು ಎಲ್ಲಾ ಜನರ ಮೇಲೆ ನನ್ನ ಆತ್ಮವನ್ನು ಸುರಿಸುವೆನು, ಆಗ ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು;


ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ಮತ್ತು ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು. ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ, ಆತನ ದಯೆಯನ್ನೂ ಭಯಭಕ್ತಿಯಿಂದ ಪಡೆಯುವರು.


ಉಳಿದು ಅಂತ್ಯಕಾಲದಲ್ಲಿ ನಿನ್ನ ಜನರಿಗಾಗುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆನು; ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವುಂಟು” ಎಂದು ಹೇಳಿದನು.


ಇದು ಯೆಹೋವನ ನುಡಿ. ಆದರೂ ಕಟ್ಟಕಡೆಯಲ್ಲಿ ಏಲಾಮಿನ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.”


ಆದರೂ ಅಂತ್ಯದಲ್ಲಿ ನಾನು ಮೋವಾಬಿನ ದುರವಸ್ಥೆಯನ್ನು ತಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ”. ಮೋವಾಬಿನ ವಿಷಯವಾದ ನ್ಯಾಯತೀರ್ಪು ಇದೇ.


ಅವರು ಕೈದಿಗಳ ಗುಂಪಿನಂತೆ ನೆಲಮಾಳಿಗೆಯೊಳಕ್ಕೆ ಒಟ್ಟಿಗೆ ತಳ್ಳಲ್ಪಟ್ಟು ಅದರಲ್ಲಿ ಮುಚ್ಚಲ್ಪಡುವರು. ಬಹಳ ದಿನಗಳ ನಂತರ ದಂಡನೆಗೆ ಗುರಿಯಾಗುವರು.


ನಾನು ಅವನನ್ನು ನೋಡುವೆನು, ಈಗಲ್ಲ. ಆತನನ್ನು ದೃಷ್ಟಿಸುವೆನು, ಆದರೆ ಸಮೀಪದಲ್ಲಿ ಅಲ್ಲ. ಯಾಕೋಬ ವಂಶದವರಲ್ಲಿ ನಕ್ಷತ್ರವು ಉದಯಿಸುವುದು. ಇಸ್ರಾಯೇಲರಲ್ಲಿ ರಾಜದಂಡವು ಏಳುವುದು. ಅದು ಮೋವಾಬ್ಯರ ತಲೆಯನ್ನು ಸೀಳಿಹಾಕುವುದು ಸೇತನ ಎಲ್ಲಾ ಮಕ್ಕಳನ್ನು ಸಂಹರಿಸಿವುದು.


ತರುವಾಯ ಬಿಳಾಮನು ಸ್ವದೇಶಕ್ಕೆ ತಿರುಗಿ ಹೋದನು, ಬಾಲಾಕನೂ ಹೊರಟುಹೋದನು.


ಇಸ್ರಾಯೇಲ್ಯರು ಕತ್ತಿಯಿಂದ ಸಂಹರಿಸಿದವರಲ್ಲಿ ಬೆಯೋರನ ಮಗನೂ ಶಕುನ ನೋಡುವವನಾಗಿದ್ದ ಬಿಳಾಮನೂ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು