Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ಅವನನ್ನು ನೋಡುವೆನು, ಈಗಲ್ಲ. ಆತನನ್ನು ದೃಷ್ಟಿಸುವೆನು, ಆದರೆ ಸಮೀಪದಲ್ಲಿ ಅಲ್ಲ. ಯಾಕೋಬ ವಂಶದವರಲ್ಲಿ ನಕ್ಷತ್ರವು ಉದಯಿಸುವುದು. ಇಸ್ರಾಯೇಲರಲ್ಲಿ ರಾಜದಂಡವು ಏಳುವುದು. ಅದು ಮೋವಾಬ್ಯರ ತಲೆಯನ್ನು ಸೀಳಿಹಾಕುವುದು ಸೇತನ ಎಲ್ಲಾ ಮಕ್ಕಳನ್ನು ಸಂಹರಿಸಿವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಒಬ್ಬಾತನನ್ನು ನೋಡುತ್ತಿದ್ದೇನೆ; ಆತ ಈಗಿನವನಲ್ಲ. ಆತ ಕಾಣಿಸುತ್ತಾನೆ, ಆದರೆ ಸಮೀಪದಲ್ಲಿಲ್ಲ. ನಕ್ಷತ್ರಪ್ರಾಯನೊಬ್ಬನು ಉದಯಿಸಿದ್ದಾನೆ ಯಕೋಬವಂಶದಲ್ಲಿ ರಾಜದಂಡ ಹಿಡಿದವನು ಕಂಡು ಬಂದಿದ್ದಾನೆ ಇಸ್ರಯೇಲರಲ್ಲಿ. ಆತ ಸೀಳಿಹಾಕಿದ್ದಾನೆ ಮೋವಾಬ್ಯರ ತಲೆಯನ್ನು; ಕೆಡವಿಬಿಟ್ಟಿದ್ದಾನೆ ಯುದ್ಧವೀರರೆಲ್ಲರನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಒಬ್ಬಾತನನ್ನು ನೋಡುತ್ತಿದ್ದೇನೆ, ಆತನು ಈಗಿನವನಲ್ಲ; ಆತನು ಕಾಣಿಸುತ್ತಾನೆ, ಆದರೆ ಸಮೀಪದಲ್ಲಿ ಅಲ್ಲ. ಯಾಕೋಬವಂಶದವರಲ್ಲಿ ನಕ್ಷತ್ರಪ್ರಾಯನೊಬ್ಬನು ಉದಯಿಸಿದ್ದಾನೆ; ಇಸ್ರಾಯೇಲ್ಯರಲ್ಲಿ ರಾಜದಂಡ ಹಿಡಿದವನು ಕಂಡುಬಂದಿದ್ದಾನೆ. ಅವನು ಮೋವಾಬ್ಯರ ತಲೆಯನ್ನು ಸೀಳಿಹಾಕಿದ್ದಾನೆ; ಯುದ್ಧವೀರರೆಲ್ಲರನ್ನೂ ಕೆಡವಿ ಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಬರುತ್ತಿರುವ ಒಬ್ಬನನ್ನು ನೋಡುತ್ತಿದ್ದೇನೆ. ಆದರೆ ಈಗಲ್ಲ. ಬರುತ್ತಿರುವ ಒಬ್ಬನನ್ನು ನೋಡುತ್ತಿದ್ದೇನೆ, ಆದರೆ ಬೇಗನೆ ಅಲ್ಲ. ಯಾಕೋಬನ ವಂಶದಿಂದ ನಕ್ಷತ್ರವೊಂದು ಬರುವುದು. ಇಸ್ರೇಲರಿಂದ ಅರಸನೊಬ್ಬನು ಬರುವನು. ಅವನು ಮೋವಾಬ್ಯರ ತಲೆಯನ್ನು ಜಜ್ಜುವನು. ಆ ಅರಸನು ಶೇತನ ಪುತ್ರರೆಲ್ಲರ ತಲೆಗಳನ್ನು ಜಜ್ಜುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ನಾನು ಅವನನ್ನು ನೋಡುವೆನು, ಈಗಲ್ಲ. ಅವನನ್ನು ದೃಷ್ಟಿಸುವೆನು, ಸಮೀಪದಲ್ಲಿ ಅಲ್ಲ. ಯಾಕೋಬನಿಂದ ನಕ್ಷತ್ರ ಉದಯಿಸುವುದು. ಇಸ್ರಾಯೇಲನಿಂದ ರಾಜದಂಡ ಏಳುವುದು. ಅದು ಮೋವಾಬಿನ ಮೂಲೆಗಳನ್ನು ಹೊಡೆದು, ಸೇಥನ ಎಲ್ಲಾ ಮಕ್ಕಳನ್ನು ಸಂಹರಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:17
33 ತಿಳಿವುಗಳ ಹೋಲಿಕೆ  

“ಯೇಸುವೆಂಬ ನಾನು ನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂ ಅವನ ಸಂತತಿಯೂ ಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.”


ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.


ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.


ನೋಡಿರಿ, ಆತನು ಮೇಘಗಳೊಂದಿಗೆ ಬರುತ್ತಾನೆ, ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್.


ಇದಲ್ಲದೆ ಪ್ರವಾದನವಾಕ್ಯವು ನಮಗೆ ಬಹುದೃಢವಾಗಿ ದೊರೆತಿದೆ. ಆ ದಿನವು ಅರುಣೋದಯವಾಗುವರೆಗೆ ಮತ್ತು ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಟ್ಟರೆ ಒಳ್ಳೆಯದು.


ಆ ವಂಶದಿಂದ ಮೂಲೆಗಲ್ಲು, ಆ ವಂಶದಿಂದ ಮೊಳೆ, ಆ ವಂಶದಿಂದ ಯುದ್ಧದ ಬಿಲ್ಲು, ಅಂತು ಆ ವಂಶದೊಳಗಿಂದ ಸಕಲ ಅಧಿಕಾರಿಗಳು ಉಂಟಾಗುವರು.


ದೇವರು ನಿನಗೆ ಕೊಟ್ಟಿರುವ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು; ನಿನ್ನ ರಾಜದಂಡವು ನ್ಯಾಯ ದಂಡವಾಗಿದೆ.


ಆದರೆ ಮಗನ ವಿಷಯದಲ್ಲಿಯಾದರೋ, “ದೇವರೇ ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿನ್ನ ರಾಜದಂಡವಾಗಿದೆ.


ಅವರ ಗತಿಯನ್ನು ಏನೆಂದು ಹೇಳಲಿ? ಇವರು ಕಾಯಿನನ ಮಾರ್ಗವನ್ನು ಹಿಡಿದವರೂ, ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಳುಗಿದವರೂ, ಕೋರಹನಂತೆ ಎದುರು ಮಾತನಾಡಿ ನಾಶವಾಗಿ ಹೋಗುವವರು ಆಗಿದ್ದಾರೆ.


ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿದನು. ಅವರು ದಾವೀದನಿಗೆ ದಾಸರಾಗಿ ಕಪ್ಪಕೊಡಬೇಕಾಯಿತು.


ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿ, ಅವರನ್ನು ನೆಲಕ್ಕೆ ಉರುಳಿಸಿ, ಹಗ್ಗದಿಂದ ಅಳತೆಮಾಡಿಸಿ, ಪ್ರತಿ ಮೂರನೆಯ ಎರಡು ಭಾಗದ ಜನರನ್ನು ಕೊಲ್ಲಿಸಿ, ಮೂರನೆ ಭಾಗದ ಜನರನ್ನು ಉಳಿಸಿದನು. ಉಳಿದ ಮೋವಾಬ್ಯರು ದಾವೀದನ ದಾಸರಾಗಿ ಅವನಿಗೆ ಕಪ್ಪಕೊಡಬೇಕಾಯಿತು.


ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ಪಲಾಯನವಾದವರು ಬಲಗುಂದಿದವರಾಗಿ ಹೆಷ್ಬೋನಿನ ನೆರಳಿನಲ್ಲಿ ನಿಂತಿದ್ದಾರೆ; ಆದರೆ ಸೀಹೋನನ ರಾಜ್ಯಕ್ಕೆ ಸೇರಿದ ಹೆಷ್ಬೋನಿನಿಂದಲೂ ಅಗ್ನಿಜ್ವಾಲೆ ಹೊರಟು ಮೋವಾಬಿನ ಹಣೆಯನ್ನೂ, ಯುದ್ಧವೀರರ ನೆತ್ತಿಯನ್ನೂ ನುಂಗಿಬಿಟ್ಟಿದೆ.


ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.


ಮೋವಾಬಿನ ಬಗ್ಗೆ ದೈವೋಕ್ತಿ. ಒಂದು ರಾತ್ರಿಯಲ್ಲಿ ಮೋವಾಬಿನ ಆರ್ ಪಟ್ಟಣವು ಹಾಳಾಗಿ ನಿರ್ಮೂಲವಾಯಿತು; ಹೌದು, ಒಂದು ರಾತ್ರಿಯಲ್ಲಿ ಮೋವಾಬಿನ ಕೀರ್ ಪಟ್ಟಣವೂ ಹಾಳಾಗಿ ನಿರ್ಮೂಲವಾಯಿತು.


ಯೆಹೋವನು ನಿನ್ನ ರಾಜದಂಡದ ಆಳ್ವಿಕೆಯನ್ನು ಚೀಯೋನಿನ ಹೊರಗೂ ಹಬ್ಬಿಸುವನು; ನಿನ್ನ ವೈರಿಗಳ ಮಧ್ಯದಲ್ಲಿ ದೊರೆತನ ಮಾಡು.


ಆದರೆ ಅಹಾಬನು ಮರಣಹೊಂದಿದ ನಂತರ ಮೋವಾಬ್ಯರ ಅರಸನು ಇಸ್ರಾಯೇಲರ ಅರಸನಿಗೆ ವಿರುದ್ಧವಾಗಿ ತಿರುಗಿಬಿದ್ದನು.


ಆಗ ಸೌಲನು ಪ್ರಜೆಗಳ ಮುಖಂಡರಿಗೆ, “ನೀವೆಲ್ಲರೂ ಇಲ್ಲಿ ಬಂದು, ಈ ಹೊತ್ತು ಪಾಪ ಯಾವುದರಿಂದ ಉಂಟಾಯಿತು ಎಂದು ವಿಚಾರಿಸಿ ಗೊತ್ತುಮಾಡಿರಿ.


ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ! ಕೆಮೋಷಿನ ಭಕ್ತರೇ, ನಿಮಗೆ ದುರ್ಗತಿಯುಂಟಾಯಿತು. ಆತನು ತನ್ನ ಗಂಡುಮಕ್ಕಳನ್ನು ದೇಶಭ್ರಷ್ಟರನ್ನಾಗಿ ಮಾಡಿದನು. ನಿನ್ನ ಹೆಣ್ಣುಮಕ್ಕಳನ್ನು ಸೆರೆಯವರನ್ನಾಗಿಯೂ ಮಾಡಿದ್ದಾನಲ್ಲಾ. ಅಮೋರಿಯರ ಅರಸನಾದ ಸೀಹೋನನಿಗೆ ಸೆರೆಯವರಾದರು.


ನಮ್ಮ ಕರ್ತನು ಯೆಹೂದ ಗೋತ್ರದಲ್ಲಿ ಜನಿಸಿಬಂದವನೆಂಬುದು ಸ್ಪಷ್ಟವಾಗಿದೆ. ಈ ಗೋತ್ರಕ್ಕೆ ಸಂಬಂಧಿಸಿದಂತೆ ಮೋಶೆಯು ಯಾಜಕರ ಕುರಿತಾಗಿ ಏನನ್ನೂ ಹೇಳಲಿಲ್ಲ.


ದೇವರ ಮಾತುಗಳನ್ನು ಕೇಳುವವನೂ, ಪರಾತ್ಪರನಾದ ದೇವರ ಜ್ಞಾನವನ್ನು ಪಡೆದವನೂ, ಪರವಶವಾಗಿ ಕಣ್ಣುತೆರೆದು, ಸರ್ವಶಕ್ತನ ದರ್ಶನವನ್ನು ಹೊಂದುವವನೂ ಆಗಿರುವ ಪುರುಷನು ನುಡಿದದ್ದು.


ದಾವೀದನು ಎದೋಮಿನಲ್ಲೆಲ್ಲಾ ಕಾವಲುದಂಡನ್ನಿರಿಸಿದನು. ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು.


ಮೋವಾಬನನ್ನು ಕುರಿತು ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಅಯ್ಯೋ ನೆಬೋ ಊರಿನ ಗತಿಯನ್ನು ಏನು ಹೇಳಲಿ! ಅದು ಹಾಳಾಯಿತು; ಕಿರ್ಯಾತಯಿಮು ಶತ್ರುವಿನ ಕೈಗೆ ಸಿಕ್ಕಿ ಮಾನಭಂಗ ಹೊಂದಿದೆ, ಮಿಸ್ಗಾಬ್ ಕೆಡವಲ್ಪಟ್ಟು ಅವಮಾನಕ್ಕೆ ಗುರಿಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು