Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 25:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವ ಪ್ರಕಾರ ಮಹಾಯಾಜಕನಾದ ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನಾದ ಫೀನೆಹಾಸನು ನನ್ನ ಗೌರವವನ್ನು ಕಾಪಾಡಿದ್ದರಿಂದ ಇಸ್ರಾಯೇಲರ ಮೇಲಿದ್ದ ನನ್ನ ಕೋಪವನ್ನು ತೊಲಗಿಸಿದ್ದಾನೆ. ಹೀಗಿರುವುದರಿಂದ ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವುದಕ್ಕಾಗಿ ಇಸ್ರಾಯೇಲರನ್ನು ನಿರ್ಮೂಲಮಾಡಬೇಕಾದ ಅಗತ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಮಹಾಯಾಜಕ ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಇಸ್ರಯೇಲರ ಮೇಲೆ ನನಗಿದ್ದ ಕೋಪವನ್ನು ತೊಲಗಿಸಿದ್ದಾನೆ. ನನ್ನ ಬಗ್ಗೆ ಅವನೊಬ್ಬನೆ ಅಭಿಮಾನವನ್ನು ವ್ಯಕ್ತಪಡಿಸಿದ್ದಾನೆ. ನನ್ನ ಗೌರವವನ್ನು ಕಾಪಾಡಿಕೊಳ್ಳಲು ಇನ್ನು ಇಸ್ರಯೇಲರನ್ನು ನಿರ್ಮೂಲ ಮಾಡಬೇಕಾದ ಅಗತ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಯಾಜಕನಾದ ಆರೋನನ ಮೊಮ್ಮಗನೂ, ಎಲಿಯಾಜರನ ಮಗ ಫೀನೆಹಾಸನು ಇಸ್ರಾಯೇಲರಲ್ಲಿ ನನಗೋಸ್ಕರ ಆಸಕ್ತನಾಗಿದ್ದು, ನಾನು ನನ್ನ ರೋಷದಿಂದ ಅವರನ್ನು ನಾಶಮಾಡದ ಹಾಗೆ, ನನ್ನ ಕೋಪವನ್ನು ಅವರ ಮೇಲಿನಿಂದ ತಿರುಗಿಸಿಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 25:11
24 ತಿಳಿವುಗಳ ಹೋಲಿಕೆ  

ಅವರು ತಮ್ಮ ಪೂಜಾಸ್ಥಳಗಳಿಂದ ಆತನನ್ನು ಬೇಸರಗೊಳಿಸಿ, ವಿಗ್ರಹಗಳಿಂದ ರೇಗಿಸಿದರು.


ಅವರು ದೇವರಲ್ಲದವುಗಳ ಮೂಲಕ ನನ್ನನ್ನು ರೇಗಿಸಿದ್ದರಿಂದ ನಾನು ಜನಾಂಗವಲ್ಲದವರ ಮೂಲಕ ಅವರಲ್ಲಿ ಕೋಪಹುಟ್ಟಿಸುವೆನು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳ ಮೂಲಕ ನನ್ನನ್ನು ಸಿಟ್ಟಿಗೆಬ್ಬಿಸಿದ್ದರಿಂದ ನಾನು ಸದಾಚಾರವಿಲ್ಲದ ಜನರ ಮೂಲಕ ಅವರನ್ನು ಸಿಟ್ಟಿಗೆಬ್ಬಿಸುವೆನು.


ಅವರು ಅನ್ಯದೇವರುಗಳನ್ನು ಪೂಜಿಸಿ ಆತನನ್ನು ರೇಗಿಸಿದರು; ನಿಷಿದ್ಧಾಚಾರಗಳನ್ನು ನಡಿಸಿ ಆತನಿಗೆ ಸಿಟ್ಟೇರಿಸಿದರು.


ಯಾಕೆಂದರೆ ದೇವರಲ್ಲಿರುವಂಥ ಚಿಂತೆಯಿಂದಲೇ ನಾನು ನಿಮ್ಮ ವಿಷಯದಲ್ಲಿ ಚಿಂತಿಸುತ್ತೇನೆ. ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ಧ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯಮಾಡಿಸಿದ್ದೇನಲ್ಲ.


ಕರ್ತನಿಗೆ ಕೋಪವನ್ನುಂಟುಮಾಡಿ ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೋ?


ಯೆಹೋವನು ಇಂತೆನ್ನುತ್ತಾನೆ, “ಹೀಗಿರಲು ನನಗಾಗಿ ಕಾದುಕೊಂಡಿರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದು ಬಿಡುವುದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ, ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವುದಷ್ಟೇ.


ಯೆಹೋವನ ರೌದ್ರದ ದಿನದಲ್ಲಿ ಅವರ ಬೆಳ್ಳಿ, ಬಂಗಾರಗಳೂ ಕೂಡಾ ಅವರನ್ನು ರಕ್ಷಿಸಲಾರವು; ಆತನ ರೋಷಾಗ್ನಿಯು ದೇಶವನ್ನೆಲ್ಲಾ ನುಂಗಿಬಿಡುವುದು; ಆತನು ದೇಶನಿವಾಸಿಗಳೆಲ್ಲರನ್ನೂ ಕೊನೆಗಾಣಿಸುವನು, ಹೌದು, ಘೋರವಾಗಿ ನಿರ್ಮೂಲಮಾಡುವನು!


ಯೆಹೂದ್ಯರು ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅವರು ತಮ್ಮ ಪೂರ್ವಿಕರಿಗಿಂತಲೂ ದುಷ್ಟರಾಗಿ ಆತನನ್ನು ರೇಗಿಸಿದರು.


ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.


ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿಧೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು.”


ಯೆಹೋವನು ಸ್ವಗೌರವವನ್ನು ಕಾಪಾಡಿಕೊಳ್ಳುವ ದೇವರು. ಆತನು ಮುಯ್ಯಿತೀರಿಸುವವನು; ಹೌದು ಯೆಹೋವನು ಮುಯ್ಯಿತೀರಿಸುವವನು, ಕೋಪಭರಿತನು; ಯೆಹೋವನು ತನ್ನ ವಿರೋಧಿಗಳಿಗೆ ಮುಯ್ಯಿತೀರಿಸುತ್ತಾನೆ. ತನ್ನ ಶತ್ರುಗಳ ಮೇಲೆ ದೀರ್ಘರೋಷವಿಡುತ್ತಾನೆ.


ವ್ಯಭಿಚಾರ ಮಾಡುವಂಥ, ರಕ್ತಸುರಿಸುವಂಥ ಹೆಂಗಸರಿಗೆ ತಕ್ಕ ದಂಡನೆಗಳನ್ನು ನಾನು ನಿನಗೆ ವಿಧಿಸಿ ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ನಿನ್ನ ರಕ್ತವನ್ನು ಸುರಿಸುವೆನು.


ಫೀನೆಹಾಸನು ಎದ್ದು ಅವರನ್ನು ದಂಡಿಸಲು, ಆ ವ್ಯಾಧಿಯು ನಿಂತುಹೋಯಿತು.


ಆದುದರಿಂದ ಆತನು ಅವರನ್ನು ಸಂಹರಿಸುವೆನು ಎನ್ನಲು, ಆತನು ಆರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ, ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು.


ಅವರು ಅ ಎಲಬುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದ ನಂತರ ದೇಶದ ಮೇಲೆ ದೇವರಿಗಿದ್ದ ಕೋಪವು ಶಾಂತವಾಗಿ, ಅವನು ಅವರ ಪ್ರಾರ್ಥನೆಗಳಿಗೆ ಉತ್ತರಕೊಟ್ಟನು.


ಆಗ ಯೆಹೋಶುವನು ಅವರಿಗೆ, “ನೀವು ಯೆಹೋವನನ್ನು ಸೇವಿಸಲು ಶಕ್ತರಲ್ಲ. ಯೆಹೋವನು ಪರಿಶುದ್ಧನು; ತನಗೆ ಸಲ್ಲಿಸಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ದೇವರು; ಆತನು ನಿಮ್ಮ ಪಾಪ, ಅಪರಾಧಗಳನ್ನೂ, ಕ್ಷಮಿಸುವುದಿಲ್ಲ.


ಯೆಹೋವನು ಅಂಥವನನ್ನು ಎಂದಿಗೂ ಕ್ಷಮಿಸದೆ ಬಹಳ ಮಹಾಕೋಪದಿಂದ, ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವನು.


ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದೆ ಉರಿಯುವ ಬೆಂಕಿಯಂತೆ ದ್ರೋಹಿಗಳನ್ನು ದಹಿಸಿಬಿಡುವವನಾಗಿದ್ದಾನೆಂದು ತಿಳಿಯಿರಿ.


ಏಕೆಂದರೆ ತೀಕ್ಷ್ಣತೆಯುಳ್ಳವನು ಎಂಬ ಹೆಸರುಳ್ಳ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದ್ದರಿಂದ ನೀವು ಬೇರೆ ಯಾವ ದೇವರ ಮುಂದೆಯೂ ಅಡ್ಡಬೀಳಬಾರದು.


ಒಬ್ಬನು ತನ್ನ ಹೊಲದಲ್ಲಾಗಲಿ, ದ್ರಾಕ್ಷಿತೋಟದಲ್ಲಾಗಲಿ ತನ್ನ ದನಗಳನ್ನು ಮೇಯಿಸಿ, ಮತ್ತೊಬ್ಬನ ಹೊಲದಲ್ಲಾಗಲಿ, ದ್ರಾಕ್ಷಿತೋಟದಲ್ಲಾಗಲಿ ಮೇಯುವಂತೆ ಮಾಡಿದರೆ, ತನ್ನ ಹೊಲದ ಅಥವಾ ದ್ರಾಕ್ಷಿತೋಟದ ಉತ್ತಮ ಭಾಗವನ್ನು ಅವನಿಗೆ ಈಡು ಕೊಡಬೇಕು.


ಆಗ ಯೆಹೋವನು ಮೋಶೆಯ ಸಂಗಡ ಮಾತನಾಡಿ,


ಅದಕ್ಕೆ ಮೊದಲು ಗಿಲ್ಯಾದಿನಲ್ಲಿರುವ ರೂಬೇನ್ಯರ, ಗಾದ್ಯರ ಹಾಗೂ ಮನಸ್ಸೆ ಕುಲದ ಅರ್ಧಜನರ ಬಳಿಗೆ ಮಹಾಯಾಜಕ ಎಲಿಯಾಜರನ ಮಗನಾದ ಫೀನೆಹಾಸನನ್ನು


ಅವನು ಮಾಡಿದ್ದು ತಲಾತಲಾಂತರಕ್ಕೂ ನೀತಿಯೆಂದು ಎಣಿಸಲ್ಪಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು