ಅರಣ್ಯಕಾಂಡ 25:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವರು ಪೆಗೋರದ ವಿಷಯದಲ್ಲಿಯೂ, ಮಿದ್ಯಾನ್ಯರ ಅಧಿಪತಿಯ ಮಗಳಾದ ಕೊಜ್ಬೀ ಎಂಬ ಸ್ತ್ರೀಯ ವಿಷಯದಲ್ಲಿಯೂ ನಿಮ್ಮನ್ನು ಮೋಸಗೊಳಿಸಿ ಹಿಂಸಿಸಿದ್ದಾರೆ. ಆ ಸ್ತ್ರೀಯು ಪೆಗೋರದ ಘಟನೆಗಳ ನಿಮಿತ್ತ ಘೋರ ವ್ಯಾಧಿ ಉಂಟಾದಾಗ ಹತಳಾದವಳು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅವರು ಪೆಗೋರದಲ್ಲಿ ನಡೆದ ಘಟನೆಗಳಲ್ಲೂ ತಮ್ಮ ನಾಯಕನ ಮಗಳಾದ ಕೊಜ್ಜೀ ಎಂಬ ಸ್ವಕುಲಸ್ತ್ರೀಯ ವಿಷಯದಲ್ಲೂ ನಿಮ್ಮನ್ನು ಮೋಸಗೊಳಿಸಿದ್ದಾರೆ. ನಿಮಗೆ ಕೇಡುಮಾಡಿದ್ದಾರೆ,” ಎಂದರು. ಆ ಮಹಿಳೆ ಹತಳಾದುದು ಪೆಗೋರದ ಘಟನೆಗಳ ನಿಮಿತ್ತ ದೊಡ್ಡ ರೋಗ ಬಂದಾಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅವರು ಪೆಗೋರದ ಸಂಗತಿಯಲ್ಲಿಯೂ ತಮ್ಮ ಅಧಿಪತಿಯ ಮಗಳಾದ ಕೊಜ್ಬೀ ಎಂಬ ಸ್ವಕುಲ ಸ್ತ್ರೀಯ ಸಂಗತಿಯಲ್ಲಿಯೂ ನಿಮ್ಮನ್ನು ಮೋಸಗೊಳಿಸಿ ಹಿಂಸಿಸಿದರಲ್ಲಾ. (ಆ ಸ್ತ್ರೀಯು ಪೆಗೋರದ ಸಂಗತಿಯಿಂದ ಘೋರ ವ್ಯಾಧಿಯುಂಟಾದಾಗ ಹತವಾದಳು.) ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಯಾಕೆಂದರೆ ಅವರು ನಿಮ್ಮನ್ನು ವೈರಿಗಳೆಂದು ಪರಿಗಣಿಸಿ ಪೆಗೋರನ ಘಟನೆಯಲ್ಲಿ ನಿಮ್ಮನ್ನು ಮೋಸಗೊಳಿಸಿದರು. ಮಿದ್ಯಾನಿನ ನಾಯಕನೊಬ್ಬನ ಮಗಳೂ ತಮ್ಮ ರಕ್ತಸಂಬಂಧಿಯೂ ಆಗಿದ್ದ ಕೊಜ್ಬೀಯ ವಿಷಯದಲ್ಲಿಯೂ ಅವರು ನಿಮ್ಮನ್ನು ಮೋಸಗೊಳಿಸಿದರು. ಪೆಗೋರಿನ ಘಟನೆಯಿಂದ ಇಸ್ರೇಲರಿಗೆ ಕಾಯಿಲೆ ಉಂಟಾದಾಗ ಆ ಸ್ತ್ರೀಯೂ ಸತ್ತಳು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅವರು ಪೆಯೋರಿನ ವಿಷಯದಲ್ಲಿಯೂ, ಪೆಯೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಹತಳಾದ ತಮ್ಮ ಸಹೋದರಿಯಾಗಿಯೂ, ಮಿದ್ಯಾನ್ಯರ ಪ್ರಧಾನನ ಮಗಳಾಗಿಯೂ, ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರವ ಕೊಡುತ್ತಾರೆ,” ಎಂದರು. ಅಧ್ಯಾಯವನ್ನು ನೋಡಿ |