Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 25:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆ ಸ್ತ್ರೀಯರು ತಮ್ಮ ದೇವತೆಗಳಿಗೆ ಮಾಡಿದ ಔತಣದ ಯಜ್ಞಗಳಿಗೆ ಇಸ್ರಾಯೇಲರನ್ನು ಆಹ್ವಾನಿಸಿದರು. ಇವರು ಆ ಭೋಜನವನ್ನು ಮಾಡಿ ಅವರ ದೇವತೆಗಳಿಗೆ ನಮಸ್ಕರಿಸುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆ ಮಹಿಳೆಯರು ತಮ್ಮ ದೇವತೆಗಳಿಗೆ ಮಾಡಿದ ಬಲಿಔತಣಗಳಲ್ಲಿ ಭಾಗಿಗಳಾಗಲು ಇಸ್ರಯೇಲರನ್ನು ಆಹ್ವಾನಿಸುತ್ತಿದ್ದರು. ಇವರು ಪ್ರಸಾದ ಸ್ವೀಕರಿಸಿ ಆ ದೇವತೆಗಳಿಗೆ ತಲೆಬಾಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆ ಸ್ತ್ರೀಯರು ತಮ್ಮ ದೇವತೆಗಳಿಗೆ ಮಾಡಿದ ಔತಣದ ಯಜ್ಞಗಳಿಗೆ ಇಸ್ರಾಯೇಲ್ಯರನ್ನು ಕರಿಸಲು ಇವರು ಆ ಭೋಜನವನ್ನು ಮಾಡಿ ಅವರ ದೇವತೆಗಳಿಗೆ ನಮಸ್ಕರಿಸುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2-3 ಮೋವಾಬ್ ಸ್ತ್ರೀಯರು ತಮ್ಮ ಸುಳ್ಳುದೇವರಿಗೆ ಮಾಡಿದ ಔತಣಯಜ್ಞಗಳಿಗೆ ಅವರನ್ನು ಆಮಂತ್ರಿಸಿದರು. ಆದ್ದರಿಂದ ಇಸ್ರೇಲರು ಅವರ ಯಜ್ಞಗಳ ಆಹಾರವನ್ನು ತಿಂದರು ಮತ್ತು ಅವರ ದೇವರನ್ನು ಪೂಜಿಸಿದರು. ಈ ರೀತಿ ಇಸ್ರೇಲರು ಸುಳ್ಳುದೇವರಾದ ಪೆಗೋರ್ ಬಾಳನ ಭಕ್ತರಾದರು. ಹೀಗಾಗಿ ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆ ಮಹಿಳೆಯರು ಇಸ್ರಾಯೇಲರನ್ನು ತಮ್ಮ ದೇವರುಗಳ ಬಲಿಗಳಿಗೆ ಕರೆದರು. ಇವರು ತಿಂದು ಅವರ ದೇವರುಗಳಿಗೆ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 25:2
19 ತಿಳಿವುಗಳ ಹೋಲಿಕೆ  

ಆದರೆ ಅನ್ಯಜನರು ತಾವು ಅರ್ಪಿಸುವ ಬಲಿಗಳನ್ನು ದೇವರಿಗಲ್ಲ, ದೆವ್ವಗಳಿಗೆ ಅರ್ಪಿಸುತ್ತಾರೆಂಬುದು ನನ್ನ ಅಭಿಪ್ರಾಯವು. ನೀವು ದೆವ್ವಗಳೊಡನೆ ಪಾಲುಗಾರರಾಗಿರಬೇಕೆಂಬುದು ನನ್ನ ಇಷ್ಟವಲ್ಲ.


ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.


ಕಾಡಿನಲ್ಲಿ ದ್ರಾಕ್ಷಿಯ ಹಣ್ಣು ಸಿಕ್ಕಿದಂತೆ ಇಸ್ರಾಯೇಲು ನನಗೆ ಸಿಕ್ಕಿತು; ಹೊಸದಾಗಿ ಫಲಕ್ಕೆ ಬಂದ ಅಂಜೂರದ ಗಿಡದಲ್ಲಿ ಮೊದಲು ಮಾಗಿದ ಹಣ್ಣನ್ನು ಕಂಡ ಹಾಗೆ ನಿಮ್ಮ ಪೂರ್ವಿಕರನ್ನು ಕಂಡೆನು. ಆದರೆ ಅವರು ಬಾಳ್ ಪೆಗೋರಿಗೆ ಬಂದು ಬಾಳ್ ದೇವತೆಯ ಭಕ್ತರಾಗಿ ದೀಕ್ಷೆಗೊಂಡು, ತಾವು ಪ್ರೀತಿಸಿದ ದೇವತೆಯ ಹಾಗೆ ಅಸಹ್ಯರಾದರು.


ಅವರು ತಮ್ಮನ್ನು ಬಾಳ್ ಪೆಗೋರನ ಸೇವೆಗೆ ಒಪ್ಪಿಸಿ, ಮೂರ್ತಿಗಳಿಗೆ ಯಜ್ಞ ಮಾಡಿದ್ದನ್ನು ಊಟಮಾಡಿದರು.


ನಾವು ಪೆಗೋರದಲ್ಲಿ ಅಪರಾಧಿಗಳಾದದ್ದು ಸಾಕಾಗಲಿಲ್ಲವೋ? ಅದರ ದೆಸೆಯಿಂದ ಯೆಹೋವನ ಸಭೆಗೆ ವ್ಯಾಧಿ ಬಂದರೂ ನಾವು ಇನ್ನೂ ಅದರಿಂದ ಪೂರ್ಣ ಶುದ್ಧರಾಗಲಿಲ್ಲ.


ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ. ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ ಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು ಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ.


ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ, ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಇಸ್ರಾಯೇಲರನ್ನು ಉಳಿಸುವೆನು” ಎಂದು ಹೇಳಿದನು.


ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ ಅನ್ಯದೇವತೆಗಳಿಗೆ ಅಡ್ಡಬಿದ್ದು ಸೇವಿಸಿದರೆ ಯೆಹೋವನ ಕೋಪಾಗ್ನಿಯು ನಿಮ್ಮ ಮೇಲೆ ಉರಿಯುವುದು ಮತ್ತು ಆತನು ಕೊಟ್ಟ ಒಳ್ಳೆಯ ದೇಶದಿಂದ ನೀವು ತೆಗೆದುಹಾಕಲ್ಪಟ್ಟು ಬೇಗನೆ ನಾಶವಾದೀರಿ” ಎಂದನು.


ಉಳಿದಿರುವ ಈ ಅನ್ಯಜನಾಂಗಗಳ ಜೊತೆಯಲ್ಲಿ ಇಜ್ಜೋಡಾಗಬೇಡಿರಿ. ಅವರ ದೇವತೆಗಳ ಹೆಸರನ್ನು ಹೇಳಿ ಆರಾಧಿಸಲೂ ಬಾರದು ಪ್ರಮಾಣಮಾಡಲೂ ಬಾರದು. ಅವುಗಳಿಗೆ ಅಡ್ಡ ಬಿದ್ದು ಸೇವಿಸಲೂ ಬಾರದು.


ಅವರ ನೈವೇದ್ಯಗಳ ಕೊಬ್ಬನ್ನು ತಿಂದು ಮತ್ತು ಅವರು ಸಮರ್ಪಿಸಿದ ಪಾನದ್ರವ್ಯಗಳನ್ನು ಕುಡಿದ ದೇವತೆಗಳು ಎಲ್ಲಿ? ಅವರೇ ನಿಮ್ಮ ಸಹಾಯಕ್ಕೆ ಬರಲಿ; ಅವರೇ ನಿಮ್ಮನ್ನು ಕಾಯಲಿ.


ಅವರ ದೇವತೆಗಳಿಗೆ ನೀವು ಅಡ್ಡಬಿದ್ದು ನಮಸ್ಕರಿಸಲೂ ಬಾರದು, ಅವರ ಆಚರಣೆಗಳನ್ನು ಅನುಸರಿಸಲೇ ಬಾರದು. ಆ ಜನಗಳನ್ನು ನಿರ್ಮೂಲಮಾಡಿ ವಿಗ್ರಹಸ್ತಂಭಗಳನ್ನು ನಾಶಮಾಡಬೇಕು.


ಯೆಹೋವನೊಬ್ಬನಿಗೇ ಹೊರತಾಗಿ ಬೇರೊಬ್ಬ ದೇವರಿಗೆ ಯಜ್ಞ ಅರ್ಪಿಸುವವನು ಸಂಪೂರ್ಣವಾಗಿ ನಾಶವಾಗಬೇಕು.


ಆದುದರಿಂದ ಮರುದಿನದಲ್ಲಿ ಜನರು ಬೆಳಿಗ್ಗೆ ಎದ್ದು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು. ಆನಂತರ ಜನರು ತಿನ್ನುವುದಕ್ಕೂ ಕುಡಿಯುವುದಕ್ಕೂ ಕುಳಿತುಕೊಂಡರು. ಆಮೇಲೆ ಕುಣಿದಾಡಲು ಎದ್ದರು.


ಇದಲ್ಲದೆ ಅಮ್ಮೋನ್ಯರ ಮಧ್ಯದೊಳಗೂ, ಮೋವಾಬ್ ಮತ್ತು ಎದೋಮ್ ಮೊದಲಾದ ದೇಶಗಳಲ್ಲಿಯೂ ಚದುರಿ ಹೋಗಿದ್ದ ಯೆಹೂದ್ಯರೆಲ್ಲರೂ ಬಾಬೆಲಿನ ಅರಸನು ಯೆಹೂದದಲ್ಲಿ ಕೆಲವರನ್ನು ಉಳಿಸಿ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನೆಂಬ


ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನೂ ಮತ್ತು ಬೆಯೋರನ ಮಗನಾದ ಬಿಳಾಮನು ಹೇಳಿದ ಉತ್ತರವನ್ನೂ ಜ್ಞಾಪಕಮಾಡಿಕೊಳ್ಳಿರಿ. ಯೆಹೋವನ ಧರ್ಮಕಾರ್ಯಗಳು ನಿಮ್ಮ ಗ್ರಹಿಕೆಗೆ ಬರುವ ಹಾಗೆ ನೀವು ಶಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದದ್ದನ್ನೆಲ್ಲಾ ಸ್ಮರಿಸಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು