Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 25:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇಸ್ರಾಯೇಲರಲ್ಲಿ ಒಬ್ಬನು ಮೋಶೆ ಮತ್ತು ಇಸ್ರಾಯೇಲರ ಸರ್ವಸಮೂಹದವರ ಎದುರಿನಲ್ಲಿಯೇ ತನ್ನ ಸಹೋದರರೊಳಗೆ ಒಬ್ಬ ಮಿದ್ಯಾನ್ ಸ್ತ್ರೀಯನ್ನು ತನ್ನ ಮನೆಯೊಳಗೆ ಕರೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇಸ್ರಯೇಲರ ಸರ್ವಸಮುದಾಯದವರು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ವಿಲಾಪಿಸುತ್ತಿದ್ದರು. ಇಸ್ರಯೇಲನಾದ ಒಬ್ಬ ವ್ಯಕ್ತಿ ಮೋಶೆಗೂ ಸರ್ವಸಮೂಹದವರಿಗೂ ಕಾಣುವಂತೆ ಒಬ್ಬ ಮಿದ್ಯಾನ್ ಮಹಿಳೆಯನ್ನು ತನ್ನ ಮನೆಯೊಳಗೆ ಕರೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇಸ್ರಾಯೇಲ್ಯರ ವರ್ಗಸಮೂಹದವರು ದೇವದರ್ಶನದ ಗುಡಾರದ ಬಾಗಲಿನ ಹತ್ತಿರ ಅಳುತ್ತಿರುವಾಗ ಇಸ್ರಾಯೇಲ್ಯನಾದ ಒಬ್ಬ ಮನುಷ್ಯನು ಮೋಶೆಗೂ ಸರ್ವಸಮೂಹದವರಿಗೂ ಎದುರಾಗಿಯೇ ಒಬ್ಬ ವಿುದ್ಯಾನ್ ಸ್ತ್ರೀಯನ್ನು ತನ್ನ ಕುಲದವರ ಬಳಿಗೆ ಕರಕೊಂಡು ಬರುವದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಗ ಮೋಶೆ ಮತ್ತು ಇಡೀ ಇಸ್ರೇಲ್ ಸಮುದಾಯವು ಒಟ್ಟಾಗಿ ಸೇರಿಬಂದು ದೇವದರ್ಶನಗುಡಾರದ ಬಾಗಿಲಲ್ಲಿ ಅಳುತ್ತಿದ್ದರು. ಅಷ್ಟರಲ್ಲಿ ಇಸ್ರೇಲ್ ಮನುಷ್ಯನೊಬ್ಬನು ಮಿದ್ಯಾನ್ ಸ್ತ್ರೀಯೊಬ್ಬಳನ್ನು ತನ್ನ ಸಂಬಂಧಿಕರ ಬಳಿಗೆ ಕರೆದುಕೊಂಡು ಬಂದನು. ಮೋಶೆಯ ಮತ್ತು ಎಲ್ಲಾ ಜನರ ಕಣ್ಣೆದುರಿನಲ್ಲೇ ಅವನು ಹೀಗೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಇಸ್ರಾಯೇಲರಲ್ಲಿ ಒಬ್ಬನು ಮೋಶೆಗೆ ಹಾಗೂ ದೇವದರ್ಶನ ಗುಡಾರದ ಮುಂದೆ ಅಳುತ್ತಿರುವ ಇಸ್ರಾಯೇಲರ ಸಮಸ್ತ ಸಮೂಹಕ್ಕೂ ಕಾಣುವ ಹಾಗೆ ಒಬ್ಬ ಮಿದ್ಯಾನ್ ಮಹಿಳೆಯನ್ನು ಕರೆತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 25:6
24 ತಿಳಿವುಗಳ ಹೋಲಿಕೆ  

ಯೆಹೋವನ ಸೇವಕರಾದ ಯಾಜಕರು, ದ್ವಾರಮಂಟಪಕ್ಕೂ, ಯಜ್ಞವೇದಿಯ ನಡುವೆ ಅಳುತ್ತಾ ಹೀಗೆ ಹೇಳಲಿ, “ಯೆಹೋವನೇ, ನಿನ್ನ ಜನರನ್ನು ಕರುಣಿಸು, ಅನ್ಯಜನಾಂಗಗಳು ನಿಂದಿಸುವುದಕ್ಕೆ ನಿನ್ನ ಬಾಧ್ಯತೆಯನ್ನು ದೂಷಣೆಗೆ ಗುರಿಮಾಡಬೇಡ. ‘ಅವರ ದೇವರು ಎಲ್ಲಿ?’ ಎಂದು ಅವರು ಏಕೆ ನಿಂದಿಸಬೇಕು.”


ಮೋವಾಬ್ಯರ ಅರಸನು ಮಿದ್ಯಾನ್ಯರ ಹಿರಿಯರಿಗೆ, “ದನಗಳು ಅಡವಿಯ ಹುಲ್ಲನ್ನೆಲ್ಲಾ ಮೇಯುವಂತೆ ಈ ಸಮೂಹವು ನಮ್ಮನ್ನೂ, ನಮ್ಮ ಸುತ್ತಲಿರುವ ಎಲ್ಲರನ್ನೂ ನಾಶಮಾಡುವ ಹಾಗಿದೆ” ಎಂದು ಹೇಳಿದರು.


ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ.


ಯೆಹೂದಿಯು ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಹಾಗೆಲ್ಲಾ ಅರಸನು ಆಯಾ ಭಾಗಗಳನ್ನು ಕತ್ತರಿಯಿಂದ ಕತ್ತರಿಸಿ ಸುರುಳಿಯು ಸಂಪೂರ್ಣವಾಗಿ ಸುಟ್ಟುಹೋಗುವ ತನಕ ಅದನ್ನು ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಹಾಕುತ್ತಾ ಬಂದನು.


ಅಸಹ್ಯ ಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ನುಡಿಯುತ್ತಾನೆ.


ಆದಕಾರಣ ಹದಮಳೆಗೆ ಅಡ್ಡಿಯಾಯಿತು, ಹಿಂಗಾರೂ ಆಗಲಿಲ್ಲ; ಆದರೂ ನೀನು ವ್ಯಭಿಚಾರಿಯಾಗಿ ನಾಚಿಕೆಗೆಟ್ಟಿದ್ದಿ.


ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು, ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು. ಕಣ್ಣೀರು ಸುರಿಸಿ, ಗೋಳಾಡಿರಿ, ತಲೆಬೋಳಿಸಿಕೊಳ್ಳಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂಬುದೇ.


ಯೆಹೋವನ ದೂತನು ಈ ಮಾತುಗಳನ್ನು ಹೇಳಿದಾಗ ಇಸ್ರಾಯೇಲರೆಲ್ಲರೂ ಬಹಳವಾಗಿ ದುಃಖಿಸಿ ಗಟ್ಟಿಯಾಗಿ ಅತ್ತರು.


“ನೀನು ಇಸ್ರಾಯೇಲರಿಗೋಸ್ಕರ ಮಿದ್ಯಾನ್ಯರಿಗೆ ಪ್ರತಿದಂಡನೆಯನ್ನು ಮಾಡಬೇಕು. ಅನಂತರ ನೀನು ಪೂರ್ವಿಕರ ಬಳಿಗೆ ಸೇರಬೇಕು” ಎಂದು ಹೇಳಿದನು.


ಅಷ್ಟರಲ್ಲಿ ಮಿದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು. ಅವರು ಯೋಸೇಫನನ್ನು ಗುಂಡಿಯೊಳಗಿಂದ ಮೇಲೆ ಎತ್ತಿ ಆ ಇಷ್ಮಾಯೇಲ್ಯರಿಗೆ ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಅವನನ್ನು ಮಾರಿದರು. ಅವರು ಅವನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದರು.


ಮೋಶೆ ಹೇಳಿದಂತೆ ಆರೋನನು ಧೂಪಾರತಿಯನ್ನು ತೆಗೆದುಕೊಂಡು ಸಮೂಹದವರ ಮಧ್ಯಕ್ಕೆ ಓಡಿದಾಗ ಘೋರವ್ಯಾಧಿಯು ಜನರೊಳಗೆ ಪ್ರಾರಂಭವಾಗಿತ್ತು. ಆದುದರಿಂದ ಅವನು ಧೂಪಹಾಕಿ ಜನರಿಗೋಸ್ಕರ ದೋಷಪರಿಹಾರವನ್ನು ಮಾಡಿದನು.


ಅವರು ಮೊದಲು ಮಿದ್ಯಾನಿಗೂ, ಆ ಮೇಲೆ ಪಾರಾನಿಗೂ ಬಂದರು. ಅಲ್ಲಿಂದ ಕೆಲವು ಜನರು ಪಾರಾನಿನ ಜನರನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಐಗುಪ್ತದ ಅರಸನಾದ ಫರೋಹನ ಬಳಿಗೆ ಬಂದರು. ಫರೋಹನು ಹದದನಿಗೆ ಆಹಾರವನ್ನು, ಮನೆಯನ್ನೂ ಮತ್ತು ಭೂಮಿಯನ್ನೂ ಕೊಟ್ಟನು.


ದುಷ್ಟರಿಗೆ ವಿರುದ್ಧವಾಗಿ ನನಗೋಸ್ಕರ ಏಳುವವರು ಯಾರು? ಕೆಡುಕರಿಗೆ ವಿರುದ್ಧವಾಗಿ ನನಗೋಸ್ಕರ ಎದ್ದು ನಿಲ್ಲುವವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು