ಅರಣ್ಯಕಾಂಡ 25:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವನು ಇಸ್ರಾಯೇಲನ ಹಿಂದೆ ಹೋಗಿ ಅವನು ಮಲಗುವ ಕೋಣೆಯನ್ನು ಪ್ರವೇಶಿಸಿ ಅವರಿಬ್ಬರನ್ನೂ ಅಂದರೆ ಆ ಇಸ್ರಾಯೇಲನನ್ನೂ ಮತ್ತು ಆ ಸ್ತ್ರೀಯನ್ನೂ ಒಂದೇ ಬಾರಿಗೆ ಹೊಟ್ಟೆಯನ್ನು ತಿವಿದು ಕೊಂದುಹಾಕಿದನು. ಆಗ ಇಸ್ರಾಯೇಲರಿಗೆ ಉಂಟಾಗಿದ್ದ ವ್ಯಾಧಿಯು ನಿಂತು ಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆ ಇಸ್ರಯೇಲ ವ್ಯಕ್ತಿಯ ಹಿಂದೆಯೇ ಹೋಗಿ, ಅವನ ಒಳಕೋಣೆಯನ್ನು ಹೊಕ್ಕು ಅವರಿಬ್ಬರನ್ನು, ಅಂದರೆ ಆ ಇಸ್ರಯೇಲನನ್ನು ಮತ್ತು ಆ ಮಹಿಳೆಯನ್ನು ಒಂದೇ ಬಾರಿಗೆ ಹೊಟ್ಟೆಯಲ್ಲಿ ತಿವಿದುಕೊಂದನು. ಹೀಗೆ ಇಸ್ರಯೇಲರಿಗೆ ಒದಗಿದ್ದ ಜಾಡ್ಯ ನಿಂತುಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆ ಇಸ್ರಾಯೇಲ್ಯನ ಹಿಂದೆ ಹೋಗಿ ಅವನು ಮಲಗುವ ಕೋಣೆಯನ್ನು ಹೊಕ್ಕು ಅವರಿಬ್ಬರನ್ನೂ ಅಂದರೆ ಆ ಇಸ್ರಾಯೇಲ್ಯನನ್ನೂ ಆ ಸ್ತ್ರೀಯನ್ನೂ ಒಂದೇ ಏಟಿನಿಂದ ಹೊಟ್ಟೆಯಲ್ಲಿ ತಿವಿದು ಕೊಂದನು. ಆಗ ಇಸ್ರಾಯೇಲ್ಯರಿಗುಂಟಾಗಿದ್ದ ವ್ಯಾಧಿ ನಿಂತುಹೋಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆ ಇಸ್ರೇಲನನ್ನು ಹಿಂಬಾಲಿಸಿ ಮಲಗುವ ಕೋಣೆಯೊಳಗೆ ಹೋಗಿ ಅವನನ್ನೂ ಆ ಮಿದ್ಯಾನ್ ಸ್ತ್ರೀಯನ್ನೂ ಒಂದೇ ಏಟಿನಿಂದ ಹೊಟ್ಟೆಯಲ್ಲಿ ತಿವಿದು ಕೊಂದನು. ಆಗ ಇಸ್ರೇಲರಿಗುಂಟಾದ ವ್ಯಾಧಿ ನಿಂತುಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ, ಇಸ್ರಾಯೇಲಿನವನನ್ನೂ ಆ ಮಹಿಳೆಯನ್ನೂ ಒಂದೇ ಬಾರಿಗೆ ಇಬ್ಬರ ಹೊಟ್ಟೆಯನ್ನು ತಿವಿದನು. ಹೀಗೆ ಇಸ್ರಾಯೇಲರಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು. ಅಧ್ಯಾಯವನ್ನು ನೋಡಿ |