Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಕುಟುಂಬಗಳ ಪ್ರಕಾರ ಯೋಸೇಫನ ಮಕ್ಕಳು ಮನಸ್ಸೆ ಮತ್ತು ಎಫ್ರಾಯೀಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಜೋಸೆಫನ ಮಕ್ಕಳು ಮನಸ್ಸೆ ಮತ್ತು ಎಫ್ರಾಯಿಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಯೋಸೇಫನ ಮಕ್ಕಳು ಮನಸ್ಸೆ ಎಫ್ರಾಯೀಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೋಸೇಫನ ಇಬ್ಬರು ಗಂಡುಮಕ್ಕಳು: ಮನಸ್ಸೆ ಮತ್ತು ಎಫ್ರಾಯೀಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಕುಟುಂಬಗಳ ಪ್ರಕಾರ ಯೋಸೇಫನ ಪುತ್ರರು: ಮನಸ್ಸೆ, ಎಫ್ರಾಯೀಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:28
9 ತಿಳಿವುಗಳ ಹೋಲಿಕೆ  

ಐಗುಪ್ತ ದೇಶದಲ್ಲಿ ಯೋಸೇಫನಿಗೆ ಓನ್ ಪಟ್ಟಣದ ಪುರೋಹಿತನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದವರು ಮನಸ್ಸೆ ಮತ್ತು ಎಫ್ರಾಯೀಮ್.


ಐಗುಪ್ತ ದೇಶಕ್ಕೆ ನಿನ್ನ ಬಳಿಗೆ ಬರುವುದಕ್ಕಿಂತ ಮೊದಲು ಇಲ್ಲಿ ಹುಟ್ಟಿದ ನಿನ್ನಿಬ್ಬರು ಮಕ್ಕಳು ನನಗೆ ಮಕ್ಕಳಾಗಿರಬೇಕು. ರೂಬೇನ್ ಸಿಮೆಯೋನರು ನನ್ನ ಮಕ್ಕಳಾಗಿರುವಂತೆಯೆ ಎಫ್ರಾಯೀಮ್ ಮನಸ್ಸೆಯರೂ ನನ್ನ ಮಕ್ಕಳಾಗಿರಲಿ.


ಮನಸ್ಸೆ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.


ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆಯುವ ಫಲ ಇವೆಲ್ಲವುಗಳಲ್ಲಿ ಶ್ರೇಷ್ಠವಾದದ್ದೂ ಮತ್ತು (ಹೋರೇಬ್ ಬೆಟ್ಟದಲ್ಲಿನ) ಪೊದೆಯಲ್ಲಿ ವಾಸಿಸಿದಾತನ ದಯೆಯೂ ಯೋಸೇಫ್ ವಂಶದವರ ಪಾಲಿಗೆ ಬರಲಿ; ಅಣ್ಣತಮ್ಮಂದಿರಿಗೆ ಪ್ರಭುವಾಗಿರುವ ಮತ್ತು ಕುಲದವರ ಶಿರಸ್ಸಾಗಿರುವ ಇವನ ಮೇಲೆ ಆಶೀರ್ವಾದ ಉಂಟಾಗಲಿ.


ಯೋಸೇಫನ ಮಕ್ಕಳಾದ ಮನಸ್ಸೆ ಮತ್ತು ಎಫ್ರಾಯೀಮ್ ಎಂಬ ಎರಡು ಕುಲಗಳಾಗಿ ಅವರು ಎಣಿಸಲ್ಪಟ್ಟಿದ್ದರಲ್ಲಾ; ಲೇವಿಯರಿಗೆ ಕೆಲವು ಪಟ್ಟಣಗಳೂ ಹಾಗೂ ಅವರ ದನಕುರಿಗಳಿಗೋಸ್ಕರ ಅಲ್ಲಿನ ಕೆಲವು ಹುಲ್ಲುಗಾವಲುಗಳನ್ನೂ ಬಿಟ್ಟರೆ ಬೇರೇನೂ ಸಿಕ್ಕಲಿಲ್ಲ.


ಮನಸ್ಸೆ ಕುಲದ ಅರ್ಧಜನರು ಬಾಷಾನಿನಿಂದ ಬಾಳ್ ಹೆರ್ಮೋನ್, ಸೆನೀರ್, ಹೆರ್ಮೋನ್ ಗಿರಿ ಇವುಗಳ ವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತ್ಯಗಳಲ್ಲಿ ವಾಸಿಸಿದರು.


ಮನಸ್ಸೆಯ ಸಂತಾನದವರು: ಅರಾಮ್ಯಳಾದ ಮನಸ್ಸೆಯ ಉಪಪತ್ನಿಯಿಂದ ಅಷ್ರೀಯೇಲ ಮತ್ತು ಮಾಕೀರನನ್ನು ಮನಸ್ಸೆ ಪಡೆದನು. ಮಾಕೀರನು ಗಿಲ್ಯಾದನ ತಂದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು