ಅರಣ್ಯಕಾಂಡ 26:65 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201965 ಅವರೆಲ್ಲರೂ ಅರಣ್ಯದಲ್ಲಿಯೇ ಸಾಯುವರೆಂದು ಯೆಹೋವನು ಅವರ ವಿಷಯದಲ್ಲಿ ಹೇಳಿದ್ದನು. ಆದುದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)65 ಏಕೆಂದರೆ ನಿಶ್ಚಯವಾಗಿ ಅವರು ಮರುಭೂಮಿಯಲ್ಲೇ ಸಾಯುವರೆಂದು ಸರ್ವೇಶ್ವರ ಸ್ವಾಮಿ ಹೇಳಿದ್ದರು. ಆದ್ದರಿಂದ ಯೆಫುನ್ನೆಯ ಮಗ ಕಾಲೇಬ್ ಮತ್ತು ನೂನನ ಮಗ ಯೆಹೋಶುವ ಇವರಿಬ್ಬರನ್ನು ಬಿಟ್ಟರೆ ಅವರಲ್ಲಿ ಯಾರೂ ಉಳಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)65 ಅವರೆಲ್ಲರೂ ಅರಣ್ಯದಲ್ಲಿಯೇ ಸಾಯುವರೆಂದು ಯೆಹೋವನು ಅವರ ವಿಷಯದಲ್ಲಿ ಹೇಳಿದ್ದನಷ್ಟೆ; ಆದದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರೇ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್65 ಯೆಹೋವನು ಅವರೆಲ್ಲರೂ ಮರುಭೂಮಿಯಲ್ಲಿಯೇ ಸಾಯುವರೆಂದು ಹೇಳಿದ್ದನು. ಆದ್ದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ65 ಏಕೆಂದರೆ ಅವರು ಮರುಭೂಮಿಯಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಯೆಹೋವ ದೇವರು ಅವರಿಗೆ ಹೇಳಿದ್ದರು. ಈ ಪ್ರಕಾರ ಯೆಫುನ್ನೆಯ ಮಗ ಕಾಲೇಬನೂ ನೂನನ ಮಗ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನೂ ಉಳಿಯಲಿಲ್ಲ. ಅಧ್ಯಾಯವನ್ನು ನೋಡಿ |