ಅರಣ್ಯಕಾಂಡ 27:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇವರೂ ಇಲ್ಲದಿದ್ದರೆ ಕುಲದವರಲ್ಲಿ ಸಮೀಪಬಂಧುವಿಗೆ ಕೊಡಬೇಕು. ಇವನೇ ಆ ಸ್ವತ್ತನ್ನು ಅನುಭವಿಸಲಿ. ಯೆಹೋವನು ಮೋಶೆಗೆ ಅಪ್ಪಣೆಮಾಡಿದ ಈ ತೀರ್ಮಾನವು ಇಸ್ರಾಯೇಲರಿಗೆ ನ್ಯಾಯನಿಯಮಗಳಾಗಿರಬೇಕು.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಇವರೂ ಇಲ್ಲದಿದ್ದರೆ ಕುಲದವರಲ್ಲಿ ಸಮೀಪ ಬಂಧುವಿಗೆ ಸೇರಬೇಕು; ಇವನೇ ಅದನ್ನು ಅನುಭೋಗಿಸಲಿ. ಸರ್ವೇಶ್ವರನಾದ ನಾನು ನಿನಗೆ ಅಪ್ಪಣೆಮಾಡಿದ ಈ ತೀರ್ಮಾನವು ಇಸ್ರಯೇಲರಿಗೆ ನ್ಯಾಯವಿಧಿಯಾಗಿರಲಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಇವರೂ ಇಲ್ಲದಿದ್ದರೆ ಕುಲದವರಲ್ಲಿ ಸಮೀಪ ಬಂಧುವಿಗೆ ಕೊಡಬೇಕು; ಇವನೇ ಅದನ್ನು ಅನುಭೋಗಿಸಲಿ. ಯೆಹೋವನು ಮೋಶೆಗೆ ಅಪ್ಪಣೆಮಾಡಿದ ಈ ತೀರ್ಮಾನವು ಇಸ್ರಾಯೇಲ್ಯರಿಗೆ ನ್ಯಾಯವಿಧಿಯಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅವನ ತಂದೆಗೆ ಸಹೋದರರಿಲ್ಲದಿದ್ದರೆ, ಅವನ ಸ್ವಂತ ಕುಲದ ಅತಿ ಸಮೀಪದ ಸಂಬಂಧಿಕನಿಗೆ ಅದನ್ನು ವಹಿಸಿಕೊಡಬೇಕು. ಆಗ ಅವನು ಅದನ್ನು ಸ್ವಾಧೀನಪಡಿಸಿಕೊಳ್ಳುವನು. ಯೆಹೋವನು ಮೋಶೆಗೆ ಆಜ್ಞಾಪಿಸಿದ ಈ ನಿರ್ಧಾರವು ಇಸ್ರೇಲರಿಗೆ ಕಾನೂನು ಬದ್ಧವಾದ ವಿಧಿಯಾಗಿದೆ.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವನ ಕುಟುಂಬದೊಳಗೆ ಅವನಿಗೆ ಹೆಚ್ಚಾಗಿ ಸಮೀಪವಾದ ಬಂಧುವಿಗೆ ಅವನ ಸೊತ್ತನ್ನು ಕೊಡಬೇಕು. ಅವನೇ ಅದನ್ನು ಪಡೆದುಕೊಳ್ಳಲಿ. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ, ಇದು ಇಸ್ರಾಯೇಲರಿಗೆ ನ್ಯಾಯದ ಕಟ್ಟಳೆಯಾಗಿರಬೇಕು,’ ” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |