Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 27:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇಸ್ರಾಯೇಲರ ಸಮೂಹದವರೆಲ್ಲರೂ ಅವನಿಗೆ ವಿಧೇಯರಾಗಿರುವಂತೆ ನಿನ್ನ ಬಗ್ಗೆ ಇರುವ ಗೌರವವನ್ನು ಅವನಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಸಮಾಜದವರೆಲ್ಲರು ಅವನಿಗೆ ವಿಧೇಯರಾಗಿ ಇರುವಂತೆ ನಿನಗಿರುವ ಗೌರವವನ್ನು ಅವನಿಗೆ ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಸಮೂಹದವರೆಲ್ಲರೂ ಅವನಿಗೆ ವಿಧೇಯರಾಗುವಂತೆ ನಿನಗಿರುವ ಗೌರವವನ್ನು ಅವನಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಇಸ್ರೇಲರ ಇಡೀ ಸಮುದಾಯವು ವಿಧೇಯರಾಗುವಂತೆ ನಿನ್ನ ಅಧಿಕಾರಗಳಲ್ಲಿ ಸ್ವಲ್ಪವನ್ನು ಅವನಿಗೆ ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇಸ್ರಾಯೇಲರ ಸಮಸ್ತ ಸಭೆಯು ಅವನಿಗೆ ವಿಧೇಯರಾಗುವಂತೆ, ನಿನಗಿರುವ ಗೌರವವನ್ನು ಅವನಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 27:20
11 ತಿಳಿವುಗಳ ಹೋಲಿಕೆ  

ಯೆಹೋವನು ಇಸ್ರಾಯೇಲರೆಲ್ಲರಿಗೆ ಗೊತ್ತಾಗುವಂತೆ ಸೊಲೊಮೋನನನ್ನು ಅಭಿವೃದ್ಧಿಪಡಿಸಿ ಅವನಿಗಿಂತ ಮೊದಲು ಇಸ್ರಾಯೇಲರನ್ನು ಆಳಿದ ಎಲ್ಲಾ ಅರಸರ ವೈಭವಕ್ಕಿಂತಲೂ ಹೆಚ್ಚಿನ ವೈಭವವನ್ನು ಅವನಿಗೆ ಅನುಗ್ರಹಿಸಿದನು.


ಅಂದಿನಿಂದ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲು ಅರಸನಾಗಿ ಯೆಹೋವನ ಸಿಂಹಾಸನದಲ್ಲಿ ಕುಳಿತುಕೊಂಡು ವೃದ್ಧಿಯಾಗುತ್ತಾ ಬಂದನು. ಅರಸನಾದ ಸೊಲೊಮೋನನಿಗೆ ಇಸ್ರಾಯೇಲರೆಲ್ಲರೂ ವಿಧೇಯರಾಗಿ ನಡೆಯುವವರಾದರು.


ದೂರದಲ್ಲಿ ನಿಂತಿದ್ದ ಯೆರಿಕೋವಿನ ಪ್ರವಾದಿ ಮಂಡಳಿಯವರು ಇದನ್ನು ಕಂಡು, “ಎಲೀಯನಿಗಿದ್ದ ಆತ್ಮವು ಎಲೀಷನ ಮೇಲೆ ಬಂದಿದೆ” ಎಂದು ತಿಳಿದುಕೊಂಡು ಅವನನ್ನು ಎದುರುಗೊಂಡು, ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು.


ಸೌಲನು ಸಮುವೇಲನನ್ನು ಬಿಟ್ಟು ಹೊರಟ ಕೂಡಲೆ ದೇವರು ಅವನಿಗೆ ನೂತನ ಹೃದಯವನ್ನು ಕೊಟ್ಟನು. ಅದೇ ದಿನದಲ್ಲಿ ಆ ಎಲ್ಲಾ ಗುರುತುಗಳು ಸಂಭವಿಸಿದವು.


ಆಗ ಯೆಹೋವನ ಆತ್ಮವು ನಿನ್ನ ಮೇಲೆಯೂ ಬರುವುದರಿಂದ ನೀನೂ ಅವರೊಂದಿಗೆ ಪ್ರವಾದಿಸುವಿ. ನೀನು ಮಾರ್ಪಟ್ಟ ಮನುಷ್ಯನಾಗುವಿ.


ನಾನು ಅಲ್ಲಿಗೆ ಇಳಿದು ಬಂದು ನಿನ್ನ ಸಂಗಡ ಮಾತನಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮದಲ್ಲಿ ಸ್ವಲ್ಪವನ್ನು ಅವರಿಗೂ ಪಾಲುಕೊಡುವೆನು. ಆಗ ನೀನೊಬ್ಬನೇ ಈ ಜನರ ಹೊಣೆಯನ್ನು ವಹಿಸಬೇಕಾಗಿರುವುದಿಲ್ಲ; ನಿನ್ನ ಜೊತೆಯಲ್ಲಿ ಇವರೂ ಜವಾಬ್ದಾರಿ ವಹಿಸುವರು.”


ಅವನನ್ನು ಮಹಾಯಾಜಕನಾದ ಎಲ್ಲಾಜಾರನ ಮತ್ತು ಸಮೂಹದವರೆಲ್ಲರ ಮುಂದೆ ನಿಲ್ಲಿಸಿ ಅವನ ಮೇಲೆ ಕೈಯಿಟ್ಟು ಅವರ ಎದುರಿನಲ್ಲೇ ಅಧಿಕಾರವನ್ನು ಕೊಡಬೇಕು.


ಯೆಹೋವನ ಚಿತ್ತವನ್ನು ತಿಳಿದುಕೊಳ್ಳುವುದಕ್ಕೆ ಅವನು ಮಹಾಯಾಜಕನಾದ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಯೆಹೋವನ ಸನ್ನಿಧಿಯಲ್ಲಿ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನೂ ಮತ್ತು ಇಸ್ರಾಯೇಲರ ಸರ್ವಸಮೂಹದವರೂ ಅವನ ಮಾತಿನಂತೆ ಹೊರಡಬೇಕು, ಹಿಂತಿರುಗಬೇಕು, ಅವನ ಮಾತಿನಂತೆ ನಡೆಯಬೇಕು.” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು