Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 27:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆಹೋವನ ಚಿತ್ತವನ್ನು ತಿಳಿದುಕೊಳ್ಳುವುದಕ್ಕೆ ಅವನು ಮಹಾಯಾಜಕನಾದ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಯೆಹೋವನ ಸನ್ನಿಧಿಯಲ್ಲಿ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನೂ ಮತ್ತು ಇಸ್ರಾಯೇಲರ ಸರ್ವಸಮೂಹದವರೂ ಅವನ ಮಾತಿನಂತೆ ಹೊರಡಬೇಕು, ಹಿಂತಿರುಗಬೇಕು, ಅವನ ಮಾತಿನಂತೆ ನಡೆಯಬೇಕು.” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದೈವೇಚ್ಛೆಯನ್ನು ತಿಳಿದುಕೊಳ್ಳಲು ಅವನು ಮಹಾಯಾಜಕ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಸರ್ವೇಶ್ವರನ ಸನ್ನಿಧಿಯಲ್ಲಿ ‘ಊರಿಮ್’ ಎಂಬ ವಸ್ತುವಿನ ಮೂಲಕ ಅವನ ಪರವಾಗಿ ವಿಚಾರಿಸುವನು, ಯೆಹೋಶುವನು ಮತ್ತು ಇಸ್ರಾಯೇಲ್ ಸಮಾಜದವರೆಲ್ಲರು ಅವನ ಮಾತಿನಂತೆ ಹೊರಡಬೇಕು ಹಾಗು ಹಿಂದಿರುಗಬೇಕು,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 [ಯೆಹೋವನ ಚಿತ್ತವನ್ನು ತಿಳುಕೊಳ್ಳುವದಕ್ಕೆ] ಅವನು ಮಹಾಯಾಜಕನಾದ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಯೆಹೋವನ ಸನ್ನಿಧಿಯಲ್ಲಿ ಊರೀಮ್ ಎಂಬ ವಸ್ತುವಿನ ಮೂಲಕ ಅವನಿಗೋಸ್ಕರ ವಿಚಾರಣೆಮಾಡುವನು. ಯೆಹೋಶುವನೂ ಇಸ್ರಾಯೇಲ್ಯರ ಸರ್ವಸಮೂಹದವರೂ ಅವನ ಮಾತಿನಂತೆ ಹೊರಡಲೂಬೇಕು ಬರಲೂಬೇಕು ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆಹೋಶುವನು ತೀರ್ಮಾನವೇನಾದರೂ ಮಾಡಬೇಕಾದರೆ ಅವನು ಯಾಜಕನಾದ ಎಲ್ಲಾಜಾರನ ಬಳಿಗೆ ಹೋಗಲಿ, ಎಲ್ಲಾಜಾರನು ಊರೀಮಿನಿಂದ ಯೆಹೋವನ ಉತ್ತರವನ್ನು ಪಡೆಯುವನು. ಆಗ ಯೆಹೋಶುವನೂ ಇಸ್ರೇಲರೆಲ್ಲರೂ ದೇವರು ಹೇಳುವ ಕಾರ್ಯಗಳನ್ನು ಮಾಡುವರು. ಆತನು, ‘ಯುದ್ಧಕ್ಕೆ ಹೋಗಿರಿ’ ಎಂದು ಹೇಳಿದರೆ ಅವರು ಯುದ್ಧಕ್ಕೆ ಹೋಗುವರು. ಆತನು, ‘ಮನೆಗೆ ಹೋಗಿರಿ’ ಎಂದು ಹೇಳಿದರೆ ಅವರು ಮನೆಗೆ ಹೋಗುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವನು ಯಾಜಕನಾದ ಎಲಿಯಾಜರನ ಮುಂದೆ ನಿಲ್ಲಬೇಕು. ಎಲಿಯಾಜರನು ಯೆಹೋವ ದೇವರ ಮುಂದೆ ಊರೀಮ್ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನ ಆಜ್ಞೆಯ ಪ್ರಕಾರವೇ ಅವನು ಮತ್ತು ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲರ ಸಮೂಹವೂ ಹೊರಡಬೇಕು ಹಾಗು ಹಿಂದಿರುಗಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 27:21
23 ತಿಳಿವುಗಳ ಹೋಲಿಕೆ  

ಅವನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದರೂ, ಆತನು ಅವನಿಗೆ ಕನಸುಗಳಿಂದಾಗಲಿ ಊರೀಮಿನಿಂದಾಗಲಿ, ಪ್ರವಾದಿಗಳಿಂದಾಗಲಿ ಉತ್ತರ ಕೊಡಲೇ ಇಲ್ಲ.


ಆಗ ಇಸ್ರಾಯೇಲ್ಯರು ಅವರ ಬುತ್ತಿಯಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಯೆಹೋವನನ್ನು ವಿಚಾರಿಸಲಿಲ್ಲ.


ದೈವನಿರ್ಣಯವನ್ನು ತಿಳಿಸುವ ಊರೀಮ್ ತುಮ್ಮೀಮ್‌ ಆ ಎದೆಯ ಪದಕದಲ್ಲಿ ಇಡಬೇಕು. ಆರೋನನು ಯೆಹೋವನ ಸನ್ನಿಧಿಗೆ ಹೋಗುವಾಗ ಅವು ಅವನ ಎದೆಯ ಮೇಲೆ ಇರುವವು. ಇಸ್ರಾಯೇಲರು ಕೈಕೊಳ್ಳಬೇಕಾದ ದೈವನಿರ್ಣಯವನ್ನು ಆರೋನನು ಹೀಗೆ ತನ್ನ ಹೃದಯದ ಮೇಲೆ ಯೆಹೋವನ ಸನ್ನಿಧಿಯಲ್ಲಿ ಯಾವಾಗಲೂ ಧರಿಸಿಕೊಂಡಿರಬೇಕು.


ಊರೀಮ್ ಮತ್ತು ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳನ್ನು ಭೋಜನ ಮಾಡಬಾರದೆಂಬುದಾಗಿ ದೇಶಾಧಿಪತಿಯು ಆಜ್ಞಾಪಿಸಿದನು.


ಊರೀಮ್ ಮತ್ತು ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳಲ್ಲಿ ಭೋಜನ ಮಾಡಬಾರದೆಂಬುದಾಗಿ ದೇಶಾಧಿಪತಿಯು ತೀರ್ಪುಮಾಡಿದನು.


ಅಹೀಮೆಲೆಕನ ಮಗನಾದ ಎಬ್ಯಾತಾರನಿಗೆ, “ದಯವಿಟ್ಟು ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ” ಎಂದು ಹೇಳಲು ಅವನು ತಂದನು.


ಸೌಲನು ತನಗೆ ಕೇಡುಮಾಡಬೇಕೆಂದಿದ್ದಾನೆ ಎಂಬುದನ್ನು ದಾವೀದನು ತಿಳಿದು ಯಾಜಕನಾದ ಎಬ್ಯಾತಾರನಿಗೆ, “ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ” ಎಂದನು.


ಇಸ್ರಾಯೇಲ್ಯರು ಹೋಗಿ ಯೆಹೋವನ ಮುಂದೆ ಅಳುತ್ತಾ, “ನಾವು ತಿರುಗಿ ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಮಾಡಬೇಕೋ?” ಎಂದು ಕೇಳಲು, ಆತನು, “ಹೋಗಿ ಯುದ್ಧಮಾಡಿರಿ” ಅಂದನು.


ಇಸ್ರಾಯೇಲ್ಯರು ಬೇತೇಲಿಗೆ ಹೋಗಿ, “ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ದೇವರಾದ ಯೆಹೋವನನ್ನು ಕೇಳಲು ಆತನು, “ಮೊದಲು ಯೆಹೂದ ಕುಲದವರು ಹೋಗಲಿ” ಎಂದು ಹೇಳಿದನು.


ಯೆಹೋಶುವನು ಮರಣಹೊಂದಿದ ನಂತರ ಇಸ್ರಾಯೇಲ್ಯರು “ಕಾನಾನ್ಯರೊಡನೆ ಯುದ್ಧಮಾಡುವುದಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ಯೆಹೋವನನ್ನು ಕೇಳಲು


ಲೇವಿ ಕುಲದ ವಿಷಯದಲ್ಲಿ, “ಯೆಹೋವನೇ ನಿನ್ನ ನಿರ್ಣಯವನ್ನು ತಿಳಿಸುವ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳು ನಿನ್ನ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀನು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿಯಲ್ಲಾ; ಮೆರೀಬದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದಮಾಡಿದಿ.


ಯೆಹೋವನು ಅವರ ಮುಂದಾಗಿ ಹೋಗಲಿ ಅಥವಾ ಅವರನ್ನು ಮುನ್ನಡೆಸಲು, ಮುಂದಾಗಿ ಬರಲಿ ಅವರನ್ನು ಹಿಂದಕ್ಕೆ ಕರೆದುಕೊಂಡು ಬರಲು, ಒಬ್ಬ ನಾಯಕನನ್ನು ನೇಮಿಸು ನಿನ್ನವರಾದ ಈ ಜನ ಸಮೂಹವು ಕುರುಬನಿಲ್ಲದ ಕುರಿಗಳಂತೆ ಆಗಬಾರದು” ಎಂದು ಬೇಡಿದನು.


ಅವನು ಎದೆಯ ಮೇಲೆ ಪದಕವನ್ನು ಬಿಗಿದು ಆರೋನನಿಗೆ ಹಾಕಿ ಅದರೊಳಗೆ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳನ್ನು ಇಟ್ಟನು.


ಮೋಶೆಯು ಅವರ ವಿಜ್ಞಾಪನೆಯನ್ನು ಯೆಹೋವನ ಸಮ್ಮುಖದಲ್ಲಿ ವಿಚಾರಿಸಿದನು.


ಇಸ್ರಾಯೇಲರ ಸಮೂಹದವರೆಲ್ಲರೂ ಅವನಿಗೆ ವಿಧೇಯರಾಗಿರುವಂತೆ ನಿನ್ನ ಬಗ್ಗೆ ಇರುವ ಗೌರವವನ್ನು ಅವನಿಗೆ ಕೊಡಬೇಕು.


ಯೆಹೋವನ ಅಪ್ಪಣೆಯ ಪ್ರಕಾರ ಮೋಶೆಯು ಯೆಹೋಶುವನನ್ನು ಮಹಾಯಾಜಕನಾದ ಎಲ್ಲಾಜಾರನ ಮತ್ತು ಸರ್ವಸಮೂಹದವರ ಮುಂದೆ ನಿಲ್ಲಿಸಿದನು.


ಸೌಲನು ಯಾಜಕನೊಡನೆ ಮಾತನಾಡುತ್ತಿರುವಷ್ಟರಲ್ಲಿ ಫಿಲಿಷ್ಟಿಯರ ಸೈನ್ಯದ ಗದ್ದಲವು ಬಲು ಹೆಚ್ಚಾಯಿತು. ಆಗ ಸೌಲನು ಯಾಜಕನಿಗೆ, “ನಿನ್ನ ಕೈಯನ್ನು ತೆಗೆ” ಎಂದು ಹೇಳಿ


ದಾವೀದನ ಕಾಲದಲ್ಲಿ ಮೂರು ವರ್ಷಗಳ ವರೆಗೂ ಎಡಬಿಡದೆ ಬರವಿತ್ತು. ದಾವೀದನು ಯೆಹೋವನನ್ನು ವಿಚಾರಿಸಲು ಆತನು, “ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೆಯೂ, ಅವನ ಮನೆಯವರ ಮೇಲೆಯೂ ರಕ್ತಾಪರಾಧವಿದೆ” ಎಂದು ಉತ್ತರ ಕೊಟ್ಟನು.


ಜ್ಞಾನಾನುಸಾರವಾಗಿ ಮಾತನಾಡುವುದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರನಾದ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳುವುದು ಧರ್ಮ. ನೀವೋ ದಾರಿತಪ್ಪಿದ್ದೀರಿ;


ಅವರು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಮೋಶೆ, ಮಹಾಯಾಜಕನಾದ ಎಲ್ಲಾಜಾರ್, ಕುಲಾಧಿಪತಿಗಳು, ಸರ್ವಸಮೂಹದವರೆಲ್ಲರ ಮುಂದೆ ನಿಂತು ಅವರಿಗೆ,


ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಮುಂದೆ ಹೋಗುವನು; ಆತನು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವುದರಿಂದ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. ಯೆಹೋವನು ಆಜ್ಞಾಪಿಸಿದಂತೆ ಯೆಹೋಶುವನು ನಿಮ್ಮ ನಾಯಕನಾಗಿ ನದಿಯನ್ನು ದಾಟಿಹೋಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು