ಅರಣ್ಯಕಾಂಡ 28:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, ‘ನನಗೆ ಸುಗಂಧಹೋಮಮಾಡುವುದಕ್ಕಾಗಿ ಇಸ್ರಾಯೇಲರು ನನಗೋಸ್ಕರ ತರುವ ಆಹಾರವನ್ನು ನೇಮಕವಾದ ಕಾಲಗಳಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ಅವರಿಗೆ ಆಜ್ಞಾಪಿಸು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ನನಗೆ ಸಮರ್ಪಿಸಬೇಕಾದ ಬಲಿಗಳನ್ನು, ಅಂದರೆ ದಹನಬಲಿಗಾಗಿ ಇಸ್ರಯೇಲರು ನನಗೆ ತರುವ ಆಹಾರವನ್ನು ತಕ್ಕ ಕಾಲದಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ವಿಧಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನನಗೆ ಸಮರ್ಪಿಸಬೇಕಾದ ಯಜ್ಞಗಳನ್ನು ಅಂದರೆ ನನಗೆ ಸುಗಂಧಹೋಮ ಮಾಡುವದಕ್ಕಾಗಿ ಇಸ್ರಾಯೇಲ್ಯರು ನನಗೋಸ್ಕರ ತರುವ ಆಹಾರವನ್ನು ತಕ್ಕ ಕಾಲಗಳಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ಅವರಿಗೆ ಆಜ್ಞಾಪಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ನೀನು ಇಸ್ರೇಲರಿಗೆ ಈ ಆಜ್ಞೆಯನ್ನು ಕೊಡು. ನೀವು ಎಚ್ಚರಿಕೆಯಾಗಿದ್ದು ನೇಮಿತ ಕಾಲಗಳಲ್ಲಿ ನನಗೆ ಅರ್ಪಿಸತಕ್ಕ ಧಾನ್ಯಸಮರ್ಪಣೆಗಳನ್ನು ನನಗೆ ಸುಗಂಧ ಹೋಮಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, ‘ನನಗೆ ಸುವಾಸನೆಗೋಸ್ಕರ ಅರ್ಪಿಸುವ ಅಂದರೆ, ದಹನಬಲಿಗಾಗಿ ಆಹಾರವನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವಂತೆ ನೀವು ನೋಡಿಕೊಳ್ಳಿರಿ.’ ಅಧ್ಯಾಯವನ್ನು ನೋಡಿ |
ಉತ್ಸವಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮ ಪಶು, ಧಾನನೈವೇದ್ಯ ಪಾನನೈವೇದ್ಯ, ಇವುಗಳನ್ನು ಒದಗಿಸುವುದು ಅರಸನ ಕರ್ತವ್ಯವಾಗಿದೆ; ಇಸ್ರಾಯೇಲ್ ವಂಶದ ದೋಷ ನಿವಾರಣೆಗಾಗಿ ಅವನು ದೋಷಪರಿಹಾರಕ ಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮ ಪಶು, ಸಮಾಧಾನ ಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು.