Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವು ಧಾನ್ಯನೈವೇದ್ಯಕ್ಕಾಗಿ ಒಂದುವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ, ಮೂರು ಸೇರು ಹಿಟ್ಟನ್ನು ಬೆರೆಸಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಬೆಳಿಗ್ಗೆ ಆ ಕುರಿಯೊಂದಿಗೆ ಧಾನ್ಯ ನೈವೇದ್ಯಕ್ಕಾಗಿ ಒಂದುವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನು ಮತ್ತು ಮೂರು ಸೇರು ಗೋದಿಹಿಟ್ಟನ್ನು ಬೆರೆಸಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 [ಹೊತ್ತಾರೆಯ ಕುರಿಯೊಂದಿಗೆ] ನೀವು ಧಾನ್ಯನೈವೇದ್ಯಕ್ಕಾಗಿ ಒಂದುವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋದಿಹಿಟ್ಟನ್ನೂ ಬೆರಸಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಹೊತ್ತಾರೆಯ ಸಮರ್ಪಣೆಯೊಂದಿಗೆ ನೀವು ಧಾನ್ಯಸಮರ್ಪಣೆಗಾಗಿ ಒಂದೂವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋಧಿಹಿಟ್ಟನ್ನೂ ಬೆರೆಸಿ ಸಮರ್ಪಿಸಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಧಾನ್ಯ ಅರ್ಪಣೆಗಾಗಿ ಸುಮಾರು ಒಂದು ಲೀಟರ್ ಕುಟ್ಟಿ ತೆಗೆದ ಓಲಿವ್ ಎಣ್ಣೆಯನ್ನು ಸುಮಾರು ಒಂದುವರೆ ಕಿಲೋಗ್ರಾಂ ಗೋಧಿಹಿಟ್ಟಿಗೆ ಬೆರೆಸಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:5
8 ತಿಳಿವುಗಳ ಹೋಲಿಕೆ  

“‘ಯಾವನಾದರೂ ಯೆಹೋವನಿಗೆ ಧಾನ್ಯನೈವೇದ್ಯವನ್ನು ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಿನದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯ್ದು ಅದರ ಮೇಲೆ ಧೂಪವನ್ನು ಇಡಬೇಕು.


ಓಮೆರ್ ಎಂಬುದು ಏಫಾದಲ್ಲಿ ಹತ್ತನೆಯ ಒಂದು ಪಾಲು ಹಿಡಿಯುವಂಥ ಒಂದು ಅಳತೆಯ ಮಾಪನವಾಗಿದೆ.


ಹೊತ್ತಾರೆಯಲ್ಲಿ ಒಂದು ಕುರಿಯನ್ನು, ಸಾಯಂಕಾಲದಲ್ಲಿ ಒಂದು ಕುರಿಯನ್ನೂ ಸಮರ್ಪಿಸಬೇಕು.


ನೀವು ಪ್ರತಿನಿತ್ಯವೂ ಯೆಹೋವನಿಗೆ ಸುಗಂಧಕರವಾದ ಈ ಸರ್ವಾಂಗಹೋಮವನ್ನು ಮಾಡಬೇಕೆಂಬುದಾಗಿ ಸೀನಾಯಿ ಬೆಟ್ಟದಲ್ಲಿ ನೇಮಕವಾಯಿತು.


ಅದರೊಂದಿಗೆ ಪ್ರತಿ ದಿನ ಬೆಳಗ್ಗೆ ಧಾನ್ಯ ನೈವೇದ್ಯವಾಗಿ ಐದು ಸೇರು ಗೋದಿಹಿಟ್ಟನ್ನೂ, ಅದನ್ನು ಕಲಸುವುದಕ್ಕೆ ಎರಡು ಸೇರು ಎಣ್ಣೆಯನ್ನೂ ನೀನು ಸಮರ್ಪಿಸಬೇಕು. ಇವುಗಳನ್ನು ಪ್ರತಿನಿತ್ಯವೂ ಯೆಹೋವನಿಗೆ ಧಾನ್ಯನೈವೇದ್ಯವಾಗಿ ಅರ್ಪಿಸತಕ್ಕದ್ದು. ಇದು ಶಾಶ್ವತ ನಿಯಮವಾಗಿದೆ.


ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ. ಎಪ್ಪತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು