ಅರಣ್ಯಕಾಂಡ 28:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನೀವು ಪ್ರತಿನಿತ್ಯವೂ ಯೆಹೋವನಿಗೆ ಸುಗಂಧಕರವಾದ ಈ ಸರ್ವಾಂಗಹೋಮವನ್ನು ಮಾಡಬೇಕೆಂಬುದಾಗಿ ಸೀನಾಯಿ ಬೆಟ್ಟದಲ್ಲಿ ನೇಮಕವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನೀವು ಪ್ರತಿನಿತ್ಯವು ಸರ್ವೇಶ್ವರನಿಗೆ ಸುಗಂಧಕರವಾದ ಈ ದಹನಬಲಿಯನ್ನು ಮಾಡಬೇಕೆಂದು ಸೀನಾಯಿ ಬೆಟ್ಟದಲ್ಲೇ ನೇಮಕವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನೀವು ಪ್ರತಿನಿತ್ಯವೂ ಯೆಹೋವನಿಗೆ ಸುಗಂಧಕರವಾದ ಈ ಸರ್ವಾಂಗಹೋಮವನ್ನು ಮಾಡಬೇಕೆಂಬದಾಗಿ ಸೀನಾಯಿ ಬೆಟ್ಟದಲ್ಲಿ ನೇಮಕವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 (ಈ ಸರ್ವಾಂಗಹೋಮವನ್ನು ಸೀನಾಯಿ ಬೆಟ್ಟದ ಮೇಲೆ ಯೆಹೋವನಿಗೆ ತ್ಯಾಗಮಯವಾದ ಕಾಣಿಕೆಯಾಗಿಯೂ ಸುಗಂಧ ವಾಸನೆಯಾಗಿಯೂ ಕ್ರಮವಾಗಿ ಅರ್ಪಿಸಲಾಯಿತು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಇದು ಸೀನಾಯಿ ಪರ್ವತದಲ್ಲಿ ಯೆಹೋವ ದೇವರಿಗೆ ಸುವಾಸನೆಯ ದಹನಬಲಿಗಾಗಿ ನೇಮಿಸಿದ ನಿತ್ಯ ದಹನಬಲಿಯು. ಅಧ್ಯಾಯವನ್ನು ನೋಡಿ |
ಈಗ ನಾನು ನನ್ನ ದೇವರಾದ ಯೆಹೋವನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಿ, ಇಸ್ರಾಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ, ಆತನ ಸನ್ನಿಧಿಯಲ್ಲಿ ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೂ, ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡುವುದಕ್ಕೂ, ಉದಯಕಾಲದಲ್ಲಿಯೂ, ಸಾಯಂಕಾಲದಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಯ ದಿನಗಳಲ್ಲಿಯೂ, ನಮ್ಮ ದೇವರಾದ ಯೆಹೋವನ ಹಬ್ಬಗಳಲ್ಲಿಯೂ ಇವುಗಳಲ್ಲಿ ಸರ್ವಾಂಗಹೋಮವನ್ನರ್ಪಿಸುವುದಕ್ಕೂ ಈ ಆಲಯವನ್ನು ಆತನಿಗೋಸ್ಕರ ಪ್ರತಿಷ್ಠಿಸಬೇಕೆಂದಿದ್ದೇನೆ.