Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 29:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದರಲ್ಲಿ ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ದೋಷವಿಲ್ಲದ ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಂದು ನೀವು ಸರ್ವೇಶ್ವರನಿಗೇ ಸುಗಂಧಕರವಾದ ಒಂದು ಹೋರಿ ದಹನಬಲಿಗಾಗಿ ಕಳಂಕರಹಿತವಾದ ಒಂದು ಹೋರಿ, ಒಂದು ಟಗರು ಮತ್ತು ವರ್ಷದ ಏಳು ಕುರಿಗಳನ್ನು ಹಾಗು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅದರಲ್ಲಿ ನೀವು ಯೆಹೋವನಿಗೆ ಸುವಾಸನೆಯನ್ನುಂಟುಮಾಡುವ ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ವರುಷದ ಕುರಿ ಇವುಗಳನ್ನೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅದರಲ್ಲಿ ನೀವು ಯೆಹೋವನಿಗೆ ಸುಗಂಧಕರವಾದ ಸರ್ವಾಂಗಹೋಮಕ್ಕಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ ಸಮರ್ಪಿಸಬೇಕು. ಇವುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೀವು ಯೆಹೋವ ದೇವರಿಗೆ ಸುವಾಸನೆಗಾಗಿ ದೋಷವಿಲ್ಲದ ಒಂದು ಎಳೆಯ ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ ದಹನಬಲಿಯಾಗಿ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 29:2
9 ತಿಳಿವುಗಳ ಹೋಲಿಕೆ  

ನೀವು ನಿತ್ಯ ಸರ್ವಾಂಗಹೋಮಕ್ಕಾಗಿ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.


ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನು ಸಮರ್ಪಿಸಬೇಕು.


ಆ ದಿನದಲ್ಲಿ ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕೋಸ್ಕರ ಸರ್ವಾಂಗಹೋಮಕ್ಕಾಗಿ ಎರಡು ಹೋರಿ, ಒಂದು ಟಗರು, ಒಂದು ವರ್ಷದ ಏಳು ಕುರಿಗಳು ಇವುಗಳನ್ನೂ,


ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ಎರಡು ಹೋರಿಗಳನ್ನೂ, ಒಂದು ಟಗರನ್ನೂ ಮತ್ತು ಒಂದು ವರ್ಷದ ಏಳು ಕುರಿಗಳನ್ನೂ ಸಮರ್ಪಿಸಬೇಕು. ಈ ಪಶುಗಳೂ ಪೂರ್ಣಾಂಗವಾಗಿ ದೋಷವಿಲ್ಲದೆಯೇ ಇರಬೇಕು.


“‘ತುತ್ತೂರಿಗಳ ಧ್ವನಿಯಿಂದ ಪ್ರಕಟವಾಗುವ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನೂ ನಡೆಸದೆ ದೇವಾರಾಧನೆಗಾಗಿ ಸಭೆಕೂಡಬೇಕು.


ಧಾನ್ಯನೈವೇದ್ಯಕ್ಕಾಗಿ ಆ ಹೋರಿಗೆ ಎಣ್ಣೆ ಬೆರೆಸಿದ ಒಂಭತ್ತು ಸೇರು ಹಿಟ್ಟನ್ನು, ಟಗರಿಗೆ ಎಣ್ಣೆ ಬೆರೆಸಿದ ಆರು ಸೇರು ಹಿಟ್ಟನ್ನು,


“‘ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವುದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನ್ನನ್ನು ಯೆಹೋವನು ಮೆಚ್ಚುವಂತೆ ದೇವದರ್ಶನದ ಗುಡಾರದ ಬಾಗಿಲಿಗೆ ಅದನ್ನು ತರಬೇಕು.


ಏಳನೆಯ ತಿಂಗಳಿನ ಮೊದಲನೆಯ ದಿನದಿಂದ ಯೆಹೋವನಿಗೆ ಸರ್ವಾಂಗಹೋಮಗಳನ್ನು ಅರ್ಪಿಸತೊಡಗಿದರು. ಆಗ ಯೆಹೋವನ ಆಲಯದ ಅಸ್ತಿವಾರವು ಇನ್ನೂ ಹಾಕಲ್ಪಟ್ಟಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು