Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 29:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 “‘ಎಂಟನೆಯ ದಿನದಲ್ಲಿ ದೇವಾರಾಧನೆಗೆ ಸಭೆ ಕೂಡಿಬರಬೇಕು. ಅದರಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ‘ಎಂಟನೆಯ ದಿನ, ದೇವಾರಾಧನೆಗೆ ಸಭೆಕೂಡಬೇಕು. ಅಂದು ಯಾವ ದುಡಿಮೆಯನ್ನೂ ಮಾಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಎಂಟನೆಯ ದಿನದಲ್ಲಿ ದೇವಾರಾಧನೆಗೆ ಸಭೆಕೂಡಬೇಕು. ಅದರಲ್ಲಿ ಯಾವ ಉದ್ಯೋಗವನ್ನೂ ನಡಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 “ಎಂಟನೆಯ ದಿನದಲ್ಲಿ ಮುಕ್ತಾಯ ಸಭಾಕೂಟವಿರುವುದು. ಆ ದಿನದಲ್ಲಿ ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 “ ‘ಎಂಟನೆಯ ದಿನದಲ್ಲಿ ನೀವು ಹಬ್ಬದ ಸಭೆಯಾಗಿ ಕೂಡಿಬರಬೇಕು. ದೈನಂದಿನ ಕೆಲಸವನ್ನು ನೀವು ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 29:35
8 ತಿಳಿವುಗಳ ಹೋಲಿಕೆ  

ಆ ಏಳು ದಿನಗಳಲ್ಲಿಯೂ ನೀವು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಎಂಟನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆಸೇರಬೇಕು, ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಅದು ಸಭೆಸೇರುವ ದಿನವಾದುದರಿಂದ ಆ ದಿನದಲ್ಲಿ ಯಾವ ಉದ್ಯೋಗವನ್ನು ಮಾಡಬಾರದು.


ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.


ನೀವು ನಿತ್ಯ ಸರ್ವಾಂಗಹೋಮಕ್ಕಾಗಿ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.


ಎಜ್ರನು ಮೊದಲನೆಯ ದಿನದಿಂದ ಕೊನೆಯ ದಿನದವರೆಗೆ ಪ್ರತಿದಿನವೂ ದೇವರ ಧರ್ಮನಿಯಮಗಳನ್ನು ಜನರಿಗೋಸ್ಕರ ಪಾರಾಯಣ ಮಾಡುತ್ತಿದ್ದನು. ಏಳು ದಿನಗಳವರೆಗೂ ಉತ್ಸವದ ಜಾತ್ರೆ ನಡೆಯಿತು. ನಿಯಮದ ಪ್ರಕಾರ ಎಂಟನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆ ಸೇರಿತು.


“‘ತುತ್ತೂರಿಗಳ ಧ್ವನಿಯಿಂದ ಪ್ರಕಟವಾಗುವ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನೂ ನಡೆಸದೆ ದೇವಾರಾಧನೆಗಾಗಿ ಸಭೆಕೂಡಬೇಕು.


“‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ನೀವು ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಆ ದಿನ ಮೊದಲುಗೊಂಡು ಏಳು ದಿನಗಳವರೆಗೆ ಯೆಹೋವನಿಗೆ ಉತ್ಸವವನ್ನು ಆಚರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು