Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 29:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 “‘ನೀವು ಯೆಹೋವನಿಗೆ ಕಾಣಿಕೆಯಾಗಿ ಹರಕೆಯನ್ನು ತೀರಿಸುವುದಕ್ಕಾಗಲಿ ಮಾಡುವ ಸರ್ವಾಂಗಹೋಮ, ಧಾನ್ಯದ್ರವ್ಯ ನೈವೇದ್ಯ, ಪಾನದ್ರವ್ಯ, ಸಮಾಧಾನಯಜ್ಞ ಇವುಗಳನ್ನಲ್ಲದೆ ಹಬ್ಬಗಳ ದಿನಗಳಲ್ಲಿ ಮೇಲೆ ಸೂಚಿಸಿರುವ ಯಜ್ಞಗಳನ್ನೂ ಹೆಚ್ಚಾಗಿ ಮಾಡಬೇಕು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ‘ನೀವು ಕಾಣಿಕೆಯಾಗಿ ಆಗಲಿ, ಹರಕೆಯನ್ನು ತೀರಿಸುವುದಕ್ಕಾಗಿ ಆಗಲಿ ಮಾಡುವ ದಹನಬಲಿ, ಧಾನ್ಯನೈವೇದ್ಯ, ಪಾನಾರ್ಪಣೆ, ಸಮಾಧಾನಬಲಿ ಇವುಗಳನ್ನು ಮಾತ್ರವಲ್ಲದೆ ಹಬ್ಬದ ದಿನಗಳಲ್ಲಿ ಮೇಲೆ ಸೂಚಿಸಿರುವ ಬಲಿಗಳನ್ನು ಹೆಚ್ಚಾಗಿ ಮಾಡಬೇಕು’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ನೀವು ಕಾಣಿಕೆಯಾಗಿಯಾಗಲಿ ಹರಕೆಯನ್ನು ತೀರಿಸುವದಕ್ಕಾಗಿಯಾಗಲಿ ಮಾಡುವ ಸರ್ವಾಂಗಹೋಮ, ಧಾನ್ಯದ್ರವ್ಯ ನೈವೇದ್ಯ, ಪಾನದ್ರವ್ಯಾರ್ಪಣೆ, ಸಮಾಧಾನಯಜ್ಞ ಇವುಗಳನ್ನಲ್ಲದೆ ಹಬ್ಬಗಳ ದಿನಗಳಲ್ಲಿ ಮೇಲೆ ಸೂಚಿಸಿರುವ ಯಜ್ಞಗಳನ್ನೂ ಹೆಚ್ಚಾಗಿ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 “ಮೇಲೆ ತಿಳಿಸಿರುವ ಸಾರ್ವಜನಿಕ ಯಜ್ಞಗಳನ್ನು ಇಡೀ ಸಮುದಾಯಕ್ಕೋಸ್ಕರ ಹಬ್ಬದ ದಿನಗಳಲ್ಲಿ ನಿಮ್ಮ ಸರ್ವಾಂಗಹೋಮಗಳನ್ನಾಗಿಯೂ ಧಾನ್ಯಾರ್ಪಣೆಗಳನ್ನಾಗಿಯೂ ಪಾನದ್ರವ್ಯಾರ್ಪಣೆಗಳನ್ನಾಗಿಯೂ ಮತ್ತು ಸಮಾಧಾನಯಜ್ಞಗಳನ್ನಾಗಿಯೂ ಅರ್ಪಿಸಬೇಕು. ನಿಮ್ಮ ವೈಯಕ್ತಿಕ ಹರಕೆಯ ಅರ್ಪಣೆ ಮತ್ತು ಸ್ವಯಿಚ್ಛಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 “ ‘ಇದಲ್ಲದೆ ನಿಮ್ಮ ಹರಕೆಯನ್ನೂ ನಿಮ್ಮ ಉಚಿತವಾದ ಬಲಿಗಳನ್ನೂ ನಿಮ್ಮ ದಹನಬಲಿಗಳನ್ನೂ ನಿಮ್ಮ ಧಾನ್ಯಪಾನ ಅರ್ಪಣೆಗಳನ್ನೂ ನಿಮ್ಮ ಸಮಾಧಾನ ಬಲಿಗಳನ್ನೂ ನೀವು ನಿಮ್ಮ ಹಬ್ಬಗಳಲ್ಲಿ ಯೆಹೋವ ದೇವರಿಗೆ ಮಾಡತಕ್ಕೆ ಸಮರ್ಪಣೆಗಳು ಇವೇ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 29:39
20 ತಿಳಿವುಗಳ ಹೋಲಿಕೆ  

“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳು ಇವೇ; ಈ ದಿನಗಳಲ್ಲಿ ದೇವಾರಾಧನೆಗಾಗಿ ಜನರು ಸಭೆಸೇರಿಬರಬೇಕೆಂದು ಸಾರಬೇಕು. ನಾನು ನೇಮಿಸಿರುವ ಹಬ್ಬದ ದಿನಗಳು ಇವೇ.


ಇದಲ್ಲದೆ, ಅರಸನು ಯೆಹೋವನ ಧರ್ಮಶಾಸ್ತ್ರದ ವಿಧಿಗನುಸಾರವಾಗಿ ಪ್ರಾತಃಕಾಲ, ಸಾಯಂಕಾಲ, ಸಬ್ಬತ್ ದಿನ, ಅಮಾವಾಸ್ಯೆ ಹಾಗು ಹಬ್ಬಗಳಲ್ಲಿ ಸಮರ್ಪಣೆಯಾಗತಕ್ಕ ಸರ್ವಾಂಗಹೋಮಗಳಿಗಾಗಿ ಆಗಬೇಕಾದ ಎಲ್ಲವನ್ನು ತನ್ನ ಸ್ವಂತ ಆಸ್ತಿಯಿಂದಲೇ ಸಲ್ಲಿಸಬೇಕು ಎಂದು ಸೂಚಿಸಿದನು.


ಸಬ್ಬತ್ ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ ಯೆಹೋವನ ಮುಂದೆ ತಪ್ಪದೆ ನಡೆಯುವ ಸರ್ವಾಂಗಹೋಮ, ಸಮರ್ಪಣೆಯ ಹೊತ್ತಿನಲ್ಲಿ ಯೆಹೋವನಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸುವುದೂ ಇವೇ.


ನಿಮ್ಮ ಅಮಾವಾಸ್ಯೆಗಳನ್ನೂ, ಹುಣ್ಣಿಮೆಹಬ್ಬ, ಉತ್ಸವ ದಿನಗಳನ್ನೂ ದ್ವೇಷಿಸುತ್ತೇನೆ; ಇವು ನನಗೆ ಭಾರ; ಸಹಿಸಲು ಬೇಸರ.


ಆ ಹಣವು ದೇವರ ಸನ್ನಿಧಿಯಲ್ಲಿ ಇಡತಕ್ಕ ರೊಟ್ಟಿ, ನಿತ್ಯಧಾನ್ಯ, ನೈವೇದ್ಯ ಇವುಗಳಿಗಾಗಿಯೂ, ನಿತ್ಯ ಸರ್ವಾಂಗಹೋಮ, ಸಬ್ಬತ್ ದಿನ, ಅಮಾವಾಸ್ಯೆ ಮತ್ತು ಜಾತ್ರೆ ಉತ್ಸವ ಇವುಗಳಲ್ಲಿ ಮಾಡಬೇಕಾಗಿರುವ ಸರ್ವಾಂಗಹೋಮ, ಸಮಾಧಾನಯಜ್ಞ, ಇಸ್ರಾಯೇಲರ ದೋಷಪರಿಹಾರಕ ಯಜ್ಞ ಇವುಗಳಿಗಾಗಿಯೂ ನಮ್ಮ ದೇವರ ದೇವಾಲಯಕ್ಕೆ ಸಂಬಂಧವಾದ ಬೇರೆ ಎಲ್ಲಾ ಕೆಲಸಕಾರ್ಯಗಳಿಗಾಗಿಯೂ ವೆಚ್ಚವಾಗಬೇಕು.


ಅಂದಿನಿಂದ ನಿತ್ಯ ಸರ್ವಾಂಗಹೋಮ, ಅಮಾವಾಸ್ಯೆ, ಯೆಹೋವನ ಎಲ್ಲಾ ಉತ್ಸವದಿನ ಇವುಗಳಲ್ಲಿ ನೇಮಕವಾದ ಸರ್ವಾಂಗಹೋಮಗಳೂ, ಜನರು ಸ್ವ ಇಚ್ಛೆಯಿಂದ ತಂದುಕೊಟ್ಟ ಯಜ್ಞಗಳೂ ಯೆಹೋವನಿಗೆ ಸಮರ್ಪಣೆಯಾಗುತ್ತಾ ಬಂದವು.


“‘ಜನರು ಯೆಹೋವನಿಗೆ ಅರ್ಪಿಸುವ ಸಮಾಧಾನಯಜ್ಞದ ನಿಯಮಗಳು ಇವೇ.


ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.


ನೀವು ಸಮರ್ಪಿಸುವ ಸರ್ವಾಂಗಹೋಮ, ಯಜ್ಞಪಶುಗಳನ್ನೂ, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆ ಕಾಣಿಕೆಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲ ಮರಿಗಳನ್ನೂ ಆ ಸ್ಥಳಕ್ಕೆ ಮಾತ್ರ ತರಬೇಕು.


ಹರಕೆಮಾಡಿಕೊಂಡ ನಾಜೀರರ ವ್ರತ ನಿಯಮವು ಇದೇ. ಅವರು ತಮ್ಮ ವ್ರತಪೂರ್ತಿಗಾಗಿ ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆ ಇದೇ. ಅವರು ತಮ್ಮ ಶಕ್ತಿಗನುಸಾರ ಹೆಚ್ಚಾಗಿಯೂ ಕೊಡಬಹುದು. ಆದರೆ ತಾವು ಕೊಡುತ್ತೆವೆಂದು ಹರಕೆಮಾಡಿದಷ್ಟು ವ್ರತವಿಧಿಗನುಸಾರವಾಗಿ ಕೊಡಲೇಬೇಕು.”


ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಅದು ದೋಷಪರಿಹಾರಕ ದಿನವಾಗಿದೆ, ಅದರಲ್ಲಿ ನಿಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರಕ ಆಚರಣೆ ನಡೆಯುವುದು.


ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.


ಯೆಹೋವನು ಮಾಡಿದ ಈ ಎಲ್ಲಾ ಆಜ್ಞೆಗಳನ್ನು ಮೋಶೆ ಇಸ್ರಾಯೇಲರಿಗೆ ತಿಳಿಸಿದನು.


ನೀವು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ, ನಾನು ಅದನ್ನು ಸ್ವೀಕರಿಸುವುದಿಲ್ಲ, ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸಿದ ಕೊಬ್ಬಿದ ಪಶುಗಳನ್ನು ನೋಡುವುದಿಲ್ಲ.


ಯೆಹೋವನಿಗೆ ಒಪ್ಪಿಸಬೇಕಾದ ಕಪ್ಪ, ಕಾಣಿಕೆ, ಹರಕೆ ಇವುಗಳನ್ನು ನೀವು ಯೆಹೋವನು ನೇಮಿಸಿರುವ ಸಬ್ಬತ್ ದಿನದಲ್ಲಿ ಮಾತ್ರವಲ್ಲದೆ ಮೇಲೆ ಸೂಚಿಸಿರುವ ಹಬ್ಬದ ದಿನಗಳಲ್ಲಿಯೂ ಸಮರ್ಪಿಸಬೇಕು.


“ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, ‘ನನಗೆ ಸುಗಂಧಹೋಮಮಾಡುವುದಕ್ಕಾಗಿ ಇಸ್ರಾಯೇಲರು ನನಗೋಸ್ಕರ ತರುವ ಆಹಾರವನ್ನು ನೇಮಕವಾದ ಕಾಲಗಳಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ಅವರಿಗೆ ಆಜ್ಞಾಪಿಸು.’


ಮೂಡಣದಿಕ್ಕಿನ ದ್ವಾರಪಾಲಕನಾಗಿದ್ದ ಇಮ್ನನ ಮಗನಾದ ಕೋರೆ ಎಂಬ ಲೇವಿಯನು, ಜನರು ಸ್ವಂತ ಇಚ್ಛೆಯಿಂದ ದೇವರಿಗೆ ಕಾಣಿಕೆಯಾಗಿ ಸಮರ್ಪಿಸುತ್ತಿದ್ದ ವಸ್ತುಗಳ ಮೇಲ್ವಿಚಾರಕನಾಗಿದ್ದನು. ಅಲ್ಲದೆ ಯೆಹೋವನ ನೈವೇದ್ಯಕ್ಕಾಗಿ ಪ್ರತ್ಯೇಕಿಸಲ್ಪಟ್ಟ ದ್ರವ್ಯ, ಮಹಾಪರಿಶುದ್ಧ ವಸ್ತು, ಇವುಗಳನ್ನು ಹಂಚಿಕೊಡುವವನೂ ಆಗಿದ್ದನು.


ಇದಲ್ಲದೆ ಶಾಸ್ತ್ರದಲ್ಲಿ ಬರೆದಿರುವಂತೆ ಅವರು ಪರ್ಣಶಾಲೆಗಳ ಜಾತ್ರೆಯನ್ನು ಆಚರಿಸಿ, ಪ್ರತಿದಿನ ನಿಗದಿಪಡಿಸಿದ ವಿಧಿಗನುಸಾರವಾದ ಸರ್ವಾಂಗಹೋಮಗಳನ್ನು ಅರ್ಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು