Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಆರೋನನನ್ನು ಮತ್ತು ಅವನ ಮಕ್ಕಳನ್ನು ನೇಮಿಸಬೇಕು. ಇತರರು ಆ ಕೆಲಸಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಯಾಜಕ ಸೇವಾವೃತ್ತಿಯನ್ನು ಕೈಗೊಳ್ಳುವುದಕ್ಕೆ ಆರೋನನನ್ನು ಹಾಗೂ ಅವನ ಮಕ್ಕಳನ್ನು ನೇಮಿಸು. ಬೇರೆ ಯಾರಾದರು ಆ ವೃತ್ತಿಗೆ ಕೈ ಹಾಕಿದರೆ ಅಂಥವನಿಗೆ ಮರಣ ಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯಾಜಕೋದ್ಯೋಗವನ್ನು ನಡಿಸುವದಕ್ಕೆ ಆರೋನನನ್ನೂ ಅವನ ಮಕ್ಕಳನ್ನೂ ನೇವಿುಸಬೇಕು. ಇತರನು ಆ ಕೆಲಸಕ್ಕೆ ಕೈಹಾಕಿದರೆ ಅವನಿಗೆ ಮರಣಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಆರೋನನನ್ನೂ ಅವನ ಪುತ್ರರನ್ನೂ ಯಾಜಕರನ್ನಾಗಿ ನೇಮಿಸು. ಅವರು ತಮ್ಮತಮ್ಮ ಯಾಜಕ ಉದ್ಯೋಗವನ್ನು ಕಾಪಾಡಿಕೊಳ್ಳಬೇಕು. ಯಾಜಕರ ಕರ್ತವ್ಯಗಳನ್ನು ಮಾಡಲು ಪವಿತ್ರ ವಸ್ತುಗಳ ಬಳಿಗೆ ಬರಲು ಬೇರೆ ಯಾವನಾದರೂ ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇದಲ್ಲದೆ ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಆರೋನನನ್ನೂ ಅವನ ಪುತ್ರರನ್ನೂ ನೇಮಿಸಬೇಕು. ಪರಕೀಯನು ಸಮೀಪಿಸಿದರೆ ಸಾಯಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:10
25 ತಿಳಿವುಗಳ ಹೋಲಿಕೆ  

ಗುಡಾರವು ಹೊರಡುವಾಗ ಲೇವಿಯರೇ ಅದನ್ನು ಬಿಚ್ಚಬೇಕು; ಇಳಿದುಕೊಳ್ಳುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು.


ದೇವದರ್ಶನದ ಗುಡಾರದ ಪೂರ್ವ ದಿಕ್ಕಿನಲ್ಲಿ ಅಂದರೆ ಸೂರ್ಯೋದಯವಾಗುವ ದಿಕ್ಕಿನಲ್ಲಿ ಮೋಶೆ, ಆರೋನನೂ ಮತ್ತು ಅವನ ಮಕ್ಕಳೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರು ಇಸ್ರಾಯೇಲರಿಗೋಸ್ಕರವಾಗಿ ದೇವಸ್ಥಾನವನ್ನು ನೋಡಿಕೊಳ್ಳಬೇಕು. ಇತರರು ಆ ಕೆಲಸಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು.


ಅದು ಸಭಾಸೇವೆಯ ರೂಪವಾಗಿದ್ದರೆ ಪ್ರಾಮಾಣಿಕವಾಗಿ ಸಭಾಸೇವೆಯನ್ನು ಮಾಡುತ್ತಾ ಇರೋಣ.


ನೀನೂ, ನಿನ್ನ ಸಂತತಿಯವರೂ ಯಾಜಕೋದ್ಯೋಗವನ್ನು ಕೈಕೊಂಡವರಾಗಿ ಯಜ್ಞವೇದಿಯ ಮತ್ತು ತೆರೆಯ ಒಳಗಿನ ಕಾರ್ಯಗಳನ್ನು ನಡೆಸಬೇಕು. ಅವುಗಳ ಸೇವಾಕಾರ್ಯವನ್ನು ನೀವೇ ಮಾಡಬೇಕು. ನಾನು ಯಾಜಕತ್ವವನ್ನು ನಿಮಗೆ ದಾನವಾಗಿ ಅನುಗ್ರಹಿಸಿದ್ದೇನೆ. ಇತರರು ಅದಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು” ಎಂದನು.


ಆತನು ಇನ್ನೂ ಭೂಮಿಯ ಮೇಲೆ ಇದ್ದಿದ್ದರೆ ಯಾಜಕನಾಗುತ್ತಿರಲಿಲ್ಲ. ಯಾಕೆಂದರೆ ಧರ್ಮಶಾಸ್ತ್ರದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವವರು ಇದ್ದಾರಲ್ಲಾ.


ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೇ ದೇವಜನರೊಂದಿಗೆ ಒಂದೇ ಸಂಸ್ಥಾನದವರೂ ದೇವರ ಮನೆಯವರೂ ಆಗಿದ್ದೀರಿ.


ನೀವು ನನ್ನ ಪರಿಶುದ್ಧ ವಸ್ತುಗಳನ್ನು ಕಾಯಲಿಲ್ಲ. ಈ ಮ್ಲೇಚ್ಛರನ್ನು ನನ್ನ ಪವಿತ್ರಾಲಯದಲ್ಲಿ ನನ್ನ ವಸ್ತುಗಳನ್ನು ಕಾಯುವುದಕ್ಕಾಗಿ ನೇಮಿಸಿಕೊಂಡಿರಿ; ನಿಮ್ಮ ದುರಾಚಾರಗಳು ಇನ್ನು ಸಾಕು.’


ಲೇವಿಯರು ನಿನ್ನ ಅಪ್ಪಣೆಯ ಪ್ರಕಾರ ನಡೆದು ಗುಡಾರವನ್ನು ಕಾಯಬೇಕು. ಆದರೆ ಪವಿತ್ರಸ್ಥಾನದ ವಸ್ತುಗಳ ಹತ್ತಿರವಾಗಲಿ ಅಥವಾ ಯಜ್ಞವೇದಿಯ ಹತ್ತಿರವಾಗಲಿ ಅವರು ಬರಬಾರದು, ಬಂದರೆ ಅವರು ಸಾಯುವುದು ಮಾತ್ರವಲ್ಲದೆ ನೀವೂ ಸಾಯುವಿರಿ.


ಆರೋನನ ಸಂತಾನಕ್ಕೆ ಸೇರದ ಬೇರೆ ಜನರು ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು. ಸಮರ್ಪಿಸಿದರೆ ಕೋರಹನಿಗೂ ಮತ್ತು ಅವನ ಸಮೂಹದವರಿಗೂ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವುದಕ್ಕೆ ಗುರುತಾಯಿತು.


ನಂತರ ಯೆಹೋವನ ಬಳಿಯಿಂದ ಬೆಂಕಿಹೊರಟು, ಧೂಪವನ್ನು ಅರ್ಪಿಸುತ್ತಿದ್ದ ಆ ಇನ್ನೂರೈವತ್ತು ಮಂದಿಯನ್ನು ದಹಿಸಬಿಟ್ಟಿತು.


ಆರೋನನಿಗೂ ಅವನ ಮಕ್ಕಳಿಗೂ ನಡುಕಟ್ಟುಗಳನ್ನು ಕಟ್ಟಿಸಿ ಮುಂಡಾಸಗಳನ್ನು ಇಡಬೇಕು. ಅಂದಿನಿಂದ ಯಾಜಕತ್ವವು ಅವರಿಗೆ ಶಾಶ್ವತವಾದ ಹಕ್ಕಾಗಿರುವುದು. ಹೀಗೆ ಆರೋನನೂ ಅವನ ಮಕ್ಕಳೂ ಯಾಜಕ ಸೇವೆಗೆ ಪ್ರತಿಷ್ಠಿತರಾಗಿರುವರು.


ಸೊಲೊಮೋನನು ಯೆರೂಸಲೇಮಿನಲ್ಲಿ ಯೆಹೋವನ ಆಲಯವನ್ನು ಕಟ್ಟುವ ತನಕ ಅವರು ದೇವದರ್ಶನದ ಗುಡಾರವೆಂಬ ಆಲಯದ ಮುಂದೆ ತಮ್ಮ ಕ್ರಮಾನುಸಾರವಾಗಿ ವಾದ್ಯ ಸೇವೆಯನ್ನು ನಡೆಸುತ್ತಿದ್ದರು.


ಆಗ ಯೆಹೋವನು ಉಜ್ಜನ ಮೇಲೆ ಕೋಪಗೊಂಡು, ಈ ತಪ್ಪಿಗೆ ಅವನನ್ನು ಸಂಹರಿಸಿದನು. ಅವನು ಅಲ್ಲೇ ದೇವರ ಮಂಜೂಷದ ಬಳಿಯಲ್ಲಿ ಸತ್ತನು.


ಬೇತ್ ಷೆಮೆಷಿನವರು ಯೆಹೋವನ ಮಂಜೂಷದಲ್ಲಿ ಇಣಕಿ ನೋಡಿದ್ದರಿಂದ ಯೆಹೋವನು ಅವರಲ್ಲಿ ಎಪ್ಪತ್ತು ಮಂದಿಯನ್ನು ಸಾಯಿಸಿದನು. ಯೆಹೋವನು ತಮ್ಮಲ್ಲಿ ಮಹಾನಾಶನವನ್ನು ಉಂಟುಮಾಡಿದ್ದರಿಂದ ಬೇತ್ ಷೆಮೆಷಿನವರು ಗೋಳಾಡಿದರು.


“‘ಯಾಜಕನಲ್ಲದೆ ಇತರರು ನೈವೇದ್ಯದ ಪದಾರ್ಥವನ್ನು ಊಟಮಾಡಬಾರದು. ಯಾಜಕನ ಬಳಿಯಲ್ಲಿರುವ ಅತಿಥಿಯಾಗಲಿ ಅಥವಾ ಕೂಲಿಯಾಳಾಗಲಿ ಅದನ್ನು ಊಟಮಾಡಬಾರದು.


ಯೆಹೋವನು ಮೋಶೆಯ ಸಂಗಡ ಮಾತನಾಡಿ ಅವನಿಗೆ ಹೇಳಿದ್ದೇನೆಂದರೆ,


ಆತನು ನಿನ್ನನ್ನೂ, ನಿನ್ನ ಸ್ವಕುಲದವರಾದ ಲೇವಿಯರನ್ನೂ ತನ್ನ ಹತ್ತಿರ ಬರಮಾಡಿಕೊಂಡಿದ್ದಾನೆ. ನೀವು ಸಹ ಯಾಜಕತ್ವವನ್ನು ಬಯಸುತ್ತಿರೋ?


ಈ ಮೀಕನು ಏಫೋದನ್ನೂ ವಿಗ್ರಹಗಳನ್ನೂ ಮಾಡಿಸಿ, ಅವುಗಳನ್ನು ತಾನು ಕಟ್ಟಿಸಿದ ದೇವಸ್ಥಾನದಲ್ಲಿಟ್ಟು, ತನ್ನ ಮಕ್ಕಳಲ್ಲಿ ಒಬ್ಬನನ್ನು ಅರ್ಚಕ ಸೇವೆಗಾಗಿ ಪ್ರತಿಷ್ಠಿಸಿದನು.


ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕುಲಗಳಲ್ಲಿ ಇವರನ್ನೂ ಮತ್ತು ಇವರ ತರುವಾಯ ಇವರ ಸಂತತಿಯವರನ್ನೂ ತನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ಸೇವೆ ಮಾಡುವುದಕ್ಕೆ ತಾನೇ ನೇಮಿಸಿಕೊಂಡನಲ್ಲಾ.


ಇದಲ್ಲದೆ ಅವನು ಪೂಜಾಗಿರಿಗಳ ಮೇಲೆ ಗುಡಿಗಳನ್ನು ಕಟ್ಟಿಸಿ, ಲೇವಿಯರಲ್ಲದ ಸಾಮಾನ್ಯ ಜನರನ್ನು ಯಾಜಕರನ್ನಾಗಿ ನೇಮಿಸಿದನು.


ನಾನು, “ನನ್ನಂಥ ಪುರುಷನು ಓಡಿಹೋಗುವುದು ಯೋಗ್ಯವೋ? ಇದಲ್ಲದೆ, ನನ್ನಂಥವನು ಪ್ರಾಣರಕ್ಷಣೆಗಾಗಿ ಗರ್ಭಗುಡಿ ಪ್ರವೇಶಿಸಬಹುದೇ? ನಾನು ಬರುವುದಿಲ್ಲ” ಎಂದು ಉತ್ತರಕೊಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು