Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ನಾನು ಇಸ್ರಾಯೇಲರಲ್ಲಿ ಚೊಚ್ಚಲಾದ ಗಂಡಸರಿಗೆ ಬದಲಾಗಿ ಲೇವಿಯರನ್ನು ತೆಗೆದುಕೊಂಡಿದ್ದೇನೆ ಎಂದು ತಿಳಿದುಕೋ. ಆದುದರಿಂದ ಲೇವಿಯರು ನನ್ನ ಸೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ನಾನು ಇಸ್ರಯೇಲರಲ್ಲಿ ಜೇಷ್ಠಪುತ್ರರಿಗೆ ಬದಲಾಗಿ ಲೇವಿಯರನ್ನೇ ಆರಿಸಿಕೊಂಡಿದ್ದೇನೆಂದು ತಿಳಿ. ಆದುದರಿಂದ ಲೇವಿಯರು ನನಗೆ ಸೇರಿದವರು, ನನ್ನ ಸೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಇಸ್ರೇಲಿನ ಪ್ರತಿ ಕುಟುಂಬವು ತನ್ನ ಚೊಚ್ಚಲ ಮಗನನ್ನು ನನಗೆ ಕೊಡಬೇಕೆಂದು ನಿನಗೆ ಹೇಳಿದ್ದೆ. ಆದರೆ ನನ್ನ ಸೇವೆಮಾಡುವುದಕ್ಕೆ ಈಗ ನಾನು ಲೇವಿಯರನ್ನು ಆರಿಸಿಕೊಂಡಿದ್ದೇನೆ. ಅವರು ನನ್ನವರಾಗಿರುವರು. ಆದ್ದರಿಂದ ಬೇರೆ ಎಲ್ಲಾ ಇಸ್ರೇಲರು ತಮ್ಮ ಚೊಚ್ಚಲು ಗಂಡುಮಕ್ಕಳನ್ನು ನನಗೆ ಕೊಡಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಪ್ರತಿಯೊಬ್ಬ ಇಸ್ರಾಯೇಲಿನ ಮಹಿಳೆಯ ಜೇಷ್ಠ ಮಗನಿಗೆ ಬದಲಾಗಿ ಇಸ್ರಾಯೇಲರೊಳಗಿಂದ ಲೇವಿಯರನ್ನು ತೆಗೆದುಕೊಂಡಿದ್ದೇನೆ. ಲೇವಿಯರು ನನಗೆ ಸೇರಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:12
8 ತಿಳಿವುಗಳ ಹೋಲಿಕೆ  

ಇಸ್ರಾಯೇಲರಲ್ಲಿ ಇವರು ನನಗೆ ಸಂಪೂರ್ಣವಾಗಿ ಸಮರ್ಪಿತರಾದವರು. ಇಸ್ರಾಯೇಲರಲ್ಲಿ ಚೊಚ್ಚಲ ಮಕ್ಕಳಿಗೆ ಬದಲಾಗಿ ನಾನು ಲೇವಿಯರನ್ನು ನನ್ನ ಸ್ವಂತಕ್ಕಾಗಿ ತೆಗೆದುಕೊಂಡಿದ್ದೇನೆ.


ಇಸ್ರಾಯೇಲರಲ್ಲಿರುವ ಚೊಚ್ಚಲಾದವರಿಗೆ ಬದಲಾಗಿ ಲೇವಿಯರನ್ನೂ ಇಸ್ರಾಯೇಲರ ಚೊಚ್ಚಲು ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನೂ ನನಗೋಸ್ಕರ ತೆಗೆದುಕೋ, ನಾನೇ ಯೆಹೋವನು” ಎಂದನು.


ಇಗೋ, ನಾನು ಇಸ್ರಾಯೇಲರೊಳಗಿಂದ ನಿನ್ನ ಕುಲದವರಾದ ಲೇವಿಯರನ್ನು ಆರಿಸಿಕೊಂಡಿದ್ದೇನೆ. ಅವರು ಯೆಹೋವನಿಗೆ ಸಮರ್ಪಿಸಲ್ಪಟ್ಟ ಕಾಣಿಕೆಯಂತೆ ನಿನ್ನ ವಶದಲ್ಲಿಯೇ ಇದ್ದಾರೆ. ಅವರೇ ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು.


ನಾನು ಇಸ್ರಾಯೇಲರ ಚೊಚ್ಚಲಮಕ್ಕಳಿಗೆ ಬದಲಾಗಿ ಲೇವಿಯರನ್ನು ತೆಗೆದುಕೊಂಡಿದ್ದೇನೆ.


“ನೀನು ಇಸ್ರಾಯೇಲರ ಚೊಚ್ಚಲಾದವರಿಗೆ ಬದಲಾಗಿ ಲೇವಿಯರನ್ನು, ಅವರ ಚೊಚ್ಚಲಾದ ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನು ತೆಗೆದುಕೋ. ಲೇವಿಯರೇ ನನ್ನ ಸೊತ್ತಾಗಿರುವರು; ನಾನೇ ಯೆಹೋವನು.


“ಇಸ್ರಾಯೇಲರಲ್ಲಿ ಹುಟ್ಟಿರುವ ಪ್ರತಿಯೊಂದು ಚೊಚ್ಚಲ ಗಂಡನ್ನು ನನಗಾಗಿ ಪ್ರತಿಷ್ಠಿಸಬೇಕು. ಮನುಷ್ಯರಲ್ಲಾಗಲೀ, ಪಶುಗಳಲ್ಲಾಗಲೀ ಹುಟ್ಟುವ ಪ್ರಥಮ ಗರ್ಭಫಲವು ನನ್ನದಾಗಿದೆ” ಎಂದು ಹೇಳಿದನು.


ಯೆಹೋವನು ಮೋಶೆಯ ಸಂಗಡ ಮಾತನಾಡಿ ಅವನಿಗೆ ಹೇಳಿದ್ದೇನೆಂದರೆ,


ಹೀಗೆ ನೀನು ಲೇವಿಯರನ್ನು ಇಸ್ರಾಯೇಲರಿಂದ ಪ್ರತ್ಯೇಕಿಸಿದಾಗ ಅವರು ನನ್ನ ಸೊತ್ತಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು