Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಗೇರ್ಷೋನ್ಯರ ಗೋತ್ರದವರು ದೇವದರ್ಶನದ ಗುಡಾರದ ಹಿಂದೆ ಅಂದರೆ ಪಶ್ಚಿಮ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಗೇರ್ಷೋನ್ಯರ ಕುಟುಂಬಗಳವರು ದೇವದರ್ಶನದ ಗುಡಾರದ ಹಿಂದುಗಡೆ ಅಂದರೆ ಪಶ್ಚಿಮ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಗೇರ್ಷೋನ್ಯರ ಕುಟುಂಬಗಳವರು ದೇವದರ್ಶನದ ಗುಡಾರದ ಹಿಂದುಗಡೆ ಅಂದರೆ ಪಶ್ಚಿಮ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಗೇರ್ಷೋನನ ಕುಲದವರು ಪಶ್ಚಿಮ ದಿಕ್ಕಿನಲ್ಲಿ ದೇವದರ್ಶನಗುಡಾರದ ಹಿಂಭಾಗದಲ್ಲಿ ಪಾಳೆಯ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಗೇರ್ಷೋನ್ಯರ ಕುಟುಂಬಗಳು ದೇವದರ್ಶನದ ಗುಡಾರದ ಹಿಂದುಗಡೆ ಪಶ್ಚಿಮದ ಕಡೆಗೆ ಇಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:23
4 ತಿಳಿವುಗಳ ಹೋಲಿಕೆ  

ಆದರೆ ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಬರುವುದಕ್ಕೆ ಆಸ್ಪದವಿರುವುದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”


ಅನಂತರ ಸೈನ್ಯಗಳ ಮಧ್ಯದಲ್ಲಿ ದೇವದರ್ಶನದ ಗುಡಾರವು ಲೇವಿಯರ ಪಾಳೆಯದಿಂದ ಹೊರಡಬೇಕು. ಅವರು ಇಳಿದುಕೊಳ್ಳುವ ಪ್ರಕಾರವೇ ತಮ್ಮ ತಮ್ಮ ಧ್ವಜಗಳನ್ನು ಹಿಡಿದುಕೊಂಡು ತಮಗೆ ಗೊತ್ತಾದ ಸ್ಥಾನದಲ್ಲಿ ಹೊರಡಬೇಕು.


ಅವರಲ್ಲಿ ಲೆಕ್ಕಿಸಲ್ಪಟ್ಟ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 7,500 ಮಂದಿ.


ಗೇರ್ಷೋನ್ಯರ ಗೋತ್ರಗಳ ಪ್ರಧಾನಪುರುಷನು ಲಾಯೇಲನ ಮಗನಾದ ಎಲ್ಯಾಸಾಫ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು