Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವರು ನೋಡಿಕೊಳ್ಳಬೇಕಾದವುಗಳು ಯಾವುದೆಂದರೆ: ಮಂಜೂಷವು, ಮೇಜು, ದೀಪಸ್ತಂಭಗಳು, ಯಜ್ಞವೇದಿಗಳು, ದೇವಸ್ಥಾನದ ಸೇವೆಯ ಉಪಕರಣಗಳು, ಒಳಗಣ ತೆರೆಗಳು ಇವುಗಳೇ. ಇವುಗಳ ಸಕಲವಿಧವಾದ ಸೇವಕಾರ್ಯವನ್ನು ಅವರು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅವರು ನೋಡಿಕೊಳ್ಳಬೇಕಾಗಿದ್ದವುಗಳು ಇವು - ಮಂಜೂಷ, ಮೇಜು, ದೀಪಸ್ತಂಭ, ವೇದಿಕೆಗಳು, ದೇವಸ್ಥಾನದ ಸೇವೋಪಕರಣಗಳು ಹಾಗೂ ಒಳಗಣ ತೆರೆ. ಇಂಥ ಎಲ್ಲಾ ವಿಧವಾದ ಸೇವೆಯನ್ನು ಅವರು ಮಾಡಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅವರು ಕಾಪಾಡಬೇಕಾದವುಗಳು ಯಾವವಂದರೆ - ಮಂಜೂಷವೂ ಮೇಜೂ ದೀಪಸ್ತಂಭವೂ ವೇದಿಗಳೂ ದೇವಸ್ಥಾನದ ಸೇವೋಪಕರಣಗಳೂ ಒಳಗಣ ತೆರೆಯೂ ಇವುಗಳೇ. ಇವುಗಳ ಸಕಲವಿಧವಾದ ಪರಿಚರ್ಯವನ್ನು ಅವರು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಅವರು ಪವಿತ್ರಪೆಟ್ಟಿಗೆ, ಮೇಜು, ದೀಪಸ್ತಂಭ, ವೇದಿಕೆಗಳನ್ನು ಮತ್ತು ಪವಿತ್ರಸ್ಥಳದ ಸಾಮಗ್ರಿಗಳನ್ನು, ಪರದೆಯನ್ನು ಮತ್ತು ಅವುಗಳಿಗೆ ಸಂಬಂಧಪಟ್ಟ ಎಲ್ಲಾ ಕಷ್ಟಕರವಾದ ಕೆಲಸಗಳನ್ನು ನೋಡಿಕೊಳ್ಳಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅವರು ನೋಡಿಕೊಳ್ಳಬೇಕಾಗಿದ್ದವುಗಳು ಯಾವವೆಂದರೆ: ಮಂಜೂಷ, ಮೇಜು, ದೀಪಸ್ತಂಭ, ವೇದಿಕೆಗಳು, ದೇವಸ್ಥಾನದ ಸೇವೋಪಕರಣಗಳು ಹಾಗೂ ಒಳಗಣ ಪರದೆ. ಇಂಥ ಎಲ್ಲಾ ವಿಧವಾದ ಸೇವೆಯನ್ನು ಅವರು ಮಾಡಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:31
15 ತಿಳಿವುಗಳ ಹೋಲಿಕೆ  

ಯೆಹೋವನು ಆಜ್ಞಾಪಿಸಿದಂತೆ ಮೋಶೆ ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ನೀರಿನ ತೊಟ್ಟಿಯನ್ನು ಇರಿಸಿ ತೊಳೆದುಕೊಳ್ಳುವುದಕ್ಕಾಗಿ ಅದರಲ್ಲಿ ನೀರು ತುಂಬಿಸಿದನು.


ಬೆಚಲೇಲನು ಜಾಲೀಮರದಿಂದ ಮಂಜೂಷವನ್ನು ಮಾಡಿಸಿದನು. ಅದು ಎರಡುವರೆ ಮೊಳ ಉದ್ದ, ಒಂದುವರೆ ಮೊಳ ಅಗಲ ಹಾಗೂ ಒಂದುವರೆ ಮೊಳ ಎತ್ತರವೂ ಆಗಿತ್ತು.


ಮತ್ತು ಯಾರೂ ದೀಪವನ್ನು ಹತ್ತಿಸಿ ಕೊಳಗದೊಳಗೆ ಇಡುವುದಿಲ್ಲ; ದೀಪಸ್ತಂಭದ ಮೇಲೆಯೇ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವುದು.


ಕೆಹಾತ್ಯರ ಗೋತ್ರಗಳ ಪ್ರಧಾನಪುರುಷನು ಉಜ್ಜೀಯೇಲನ ಮಗನಾದ ಎಲೀಚಾಫಾನ್.


ಅದಲ್ಲದೆ ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ಲೇವಿಯರ ಪ್ರಧಾನಪುರುಷರ ಅಧ್ಯಕ್ಷನಾಗಿ ದೇವಸ್ಥಾನವನ್ನು ನೋಡಿಕೊಳ್ಳುವವರ ಮೇಲ್ವಿಚಾರಕನಾಗಿರಬೇಕು.


ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ತನ್ನ ಸನ್ನಿಧಿಯಲ್ಲಿ ಸೇವೆ ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದನು. ಅವರು ಇಂದಿನ ವರೆಗೂ ಆ ಕೆಲಸವನ್ನು ನಡಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು